ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯ ಮೃತದೇಹ ಪತ್ತೆ
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲುರು ಗ್ರಾಮದ ಬಳಿ ಇರುವ ಚಿಲುಮೆ ಮಠದ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ. ಕುದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ ಚಿಲುಮೆ ಮಠದ (Chilume mutt) ಬಸವಲಿಂಗ ಸ್ವಾಮೀಜಿಯ (52) ಮೃತದೇಹ ಪತ್ತೆಯಾಗಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲುರು ಗ್ರಾಮದ ಬಳಿ ಇರುವ ಚಿಲುಮೆ ಮಠದ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ. ಕುದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಬಿದ್ದ ಇಂಜಿನಿಯರ್; ಸ್ಥಳದಲ್ಲೇ ಸಾವು ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಬಿದ್ದು, ಇಂಜಿನಿಯರ್ ಸಾವಿಗೀಡಾದ ದುರ್ಘಟನೆ ಹುಬ್ಬಳ್ಳಿಯ ರೇಲ್ವೆ ನಿಲ್ದಾಣದಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ರಂಗರಾಜು ಎಸ್.ಎ (59) ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಹೋಗಬೇಕಾದ ರೈಲು ಹತ್ತುವ ಬದಲು ಬೆಳಗಾವಿಯ ರೈಲು ಹತ್ತಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸೂಪರಿಟೆಂಡೆಂಟ್ ಇಂಜಿನಿಯರ್ ತಕ್ಷಣವೇ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಬಿಬಿಎಂಪಿಯ ಕೆಆರ್ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಂಗರಾಜು ಎಸ್.ಎ ಸಾವನ್ನಪ್ಪಿದ್ದಾರೆ. ಚಲಿಸುತ್ತಿರುವಾಗ ರೈಲಿನಿಂದ ಇಳಿಯುವ ಸಂದರ್ಭದಲ್ಲಿ ಪ್ಲಾಟ್ಫಾರಂನಲ್ಲಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಂಗರಾಜು, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ 5 ಮಂದಿ ಸಾವು ಪ್ರಕರಣ; ವೃತ್ತಾಂತ ಘನಘೋರ, ಅಸಲಿ ಸತ್ಯಗಳು ಭೀಕರ
Published On - 9:11 am, Mon, 20 December 21