Karnataka Politics: ಯಡಿಯೂರಪ್ಪ ಮುಂದಿನ 2 ವರ್ಷ ಸಿಎಂ ಆಗಿ ಮುಂದುವರೆಯಲಿ: ಕುಮಾರಸ್ವಾಮಿ ಹಾರೈಕೆ

ಬಿಜೆಪಿಯಲ್ಲಿ ಹಲವು ನುರಿತ ರಾಜಕಾರಣಿಗಳು ಇದ್ದಾರೆ. ಅಂತಿಮವಾಗಿ ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಚರ್ಚೆ ಮಾಡುವುದು ನನಗೆ ಶೋಭೆ ತರುವುದಿಲ್ಲ. ಈ ಪರಿಸ್ಥಿತಿ ತಂದು ಜನರ ಜತೆ ಚೆಲ್ಲಾಟವಾಡಬಾರದು. ನಾನೂ ಎಲ್ಲರ ಜೊತೆ ಅನ್ಯೋನ್ಯವಾಗಿ ಇದ್ದೇನೆ. ಯಾರ ಜೊತೆ ಅಸಮಾಧಾನವಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Karnataka Politics: ಯಡಿಯೂರಪ್ಪ ಮುಂದಿನ 2 ವರ್ಷ ಸಿಎಂ ಆಗಿ ಮುಂದುವರೆಯಲಿ: ಕುಮಾರಸ್ವಾಮಿ ಹಾರೈಕೆ
ಎಚ್​.ಡಿ.ಕುಮಾರಸ್ವಾಮಿ, ಬಿ.ಎಸ್​.ಯಡಿಯೂರಪ್ಪ
Follow us
TV9 Web
| Updated By: guruganesh bhat

Updated on:Jul 22, 2021 | 5:09 PM

ಹಾಸನ: ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಮುಂದಿನ 2 ವರ್ಷ ಪೂರೈಸಲಿ ಎಂದು ಹಾರೈಸುತ್ತೇನೆ. ಯಡಿಯೂರಪ್ಪ (CM BS Yediyurappa)  ಮುಂದುವರೆಯುವರೋ ಅಥವಾ ಮುಂದೆ ಬೇರೆ ಯಾರು ಮುಖ್ಯಮಂತ್ರಿ ಆಗುತ್ತಾರೋ ಗೊತ್ತಿಲ್ಲ. ಏನೇ ಆದರೂ ಮುಂದಿನ 2 ವರ್ಷ ಉತ್ತಮ ಆಡಳಿತ ನೀಡಿ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ (JDS) ವರಿಷ್ಠ ಎಚ್. ಡಿ.ಕುಮಾರಸ್ವಾಮಿ (HD Kumaraswamy) ರಾಮನಗರದಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ. 

ಬಿಜೆಪಿಯಲ್ಲಿ ಹಲವು ನುರಿತ ರಾಜಕಾರಣಿಗಳು ಇದ್ದಾರೆ. ಅಂತಿಮವಾಗಿ ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಚರ್ಚೆ ಮಾಡುವುದು ನನಗೆ ಶೋಭೆ ತರುವುದಿಲ್ಲ. ಈ ಪರಿಸ್ಥಿತಿ ತಂದು ಜನರ ಜತೆ ಚೆಲ್ಲಾಟವಾಡಬಾರದು. ನಾನೂ ಎಲ್ಲರ ಜೊತೆ ಅನ್ಯೋನ್ಯವಾಗಿ ಇದ್ದೇನೆ. ಯಾರ ಜೊತೆ ಅಸಮಾಧಾನವಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಸಿಎಂ ಯಡಿಯೂರಪ್ಪಗೆ ಜೆಡಿಎಸ್​ ಪಕ್ಷಕ್ಕೆ ಪರೋಕ್ಷ ಆಹ್ವಾನ; ಪ್ರಾದೇಶಿಕ ಪಕ್ಷ ಕಟ್ಟಲು ಸಲಹೆ ನೀಡಿದ ಶಾಸಕ ಲಿಂಗೇಶ್ ಅವಧಿ ಮುಗಿಯುವವರೆಗೂ ಬಿ.ಎಸ್.ಯಡಿಯೂರಪ್ಪ (CM BS Yediyurappa) ಮುಖ್ಯಮಂತ್ರಿಯಾಗಿ ಮುಂದುವರೆಯಲಿ. ಸಿಎಂ ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದರೆ ಬಿ.ಎಸ್.ಯಡಿಯೂರಪ್ಪ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ (HD Devegowda) ಅವರ ಜತೆ ಸೇರಿ ಪ್ರಬಲ ಪ್ರಾದೇಶಿಕ ಪಕ್ಷ ಕಟ್ಟಲಿ (Karnataka Politics) ಎಂದು ಬೇಲೂರಿನಲ್ಲಿ ಜೆಡಿಎಸ್ ಶಾಸಕ ಲಿಂಗೇಶ್ ಸಲಹೆ ನೀಡಿದ್ದಾರೆ.

ಇತ್ತೀಚಿನ ರಾಜಕೀಯ ಬೆಳವಣಿಗೆ ಬೇಸರ ತರುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮುಗಿಸುತ್ತಿವೆ. ಸಂಪೂರ್ಣ ಅಧಿಕಾರವಿದ್ದರೆ ಯಾರಾದರೂ ಸಾಧನೆ ಮಾಡಬಹುದು. ಕೇಂದ್ರ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ನಾಯಕತ್ವ ಬದಲಾವಣೆ ತಂದು ರಾಜಕೀಯ ದೊಂಬರಾಟ ಸೃಷ್ಟಿಸಿದ್ದಾರೆ. ಸೈದ್ಧಾಂತಿಕವಾಗಿ ನಾವು ಬಿಜೆಪಿಯನ್ನು ವಿರೋಧಿಸುತ್ತೇವೆ. ಆದರೆ ವೈಯುಕ್ತಿಕವಾಗಿ ಅಧಿಕಾರ ಮುಗಿಯುವವರೆಗೂ ಯಡಿಯೂರಪ್ಪ ಅವರನ್ನು ಮುಂದುವರಿಸಬೇಕು. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದರೆ ದೇವೇಗೌಡರು, ಯಡಿಯೂರಪ್ಪ ಸೇರಿ ಪ್ರಾದೇಶಿಕ ಪಕ್ಷ ಕಟ್ಟಬೇಕು. ಪಕ್ಷಗಳಿಂದ ಹೊರಬರುವ ಎಲ್ಲಾ ಶಾಸಕರನ್ನು ಪ್ರಾದೇಶಿಕ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಪಕ್ಷ ಅಧಿಕಾರಿಗಳ ತಂದು ಉತ್ತಮ ಆಡಳಿತ ನೀಡಬೇಕು ಎಂದು ಹೇಳಿರುವ ಜೆಡಿಎಸ್ ಶಾಸಕ ಲಿಂಗೇಶ್ ಸಿಎಂ ಯಡಿಯೂರಪ್ಪರನ್ನ ಪರೋಕ್ಷವಾಗಿ ಜೆಡಿಎಸ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ.

ಇದನ್ನೂ ಓದಿ; 

2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ಕೈಗೊಂಡ ನಿರ್ಧಾರ ಮತ್ತು ಹೇಳಿಕೆ ನನಗೆ ಸಮಾಧಾನ, ಖುಷಿ ತಂದಿದೆ: ಸಚಿವ ಈಶ್ವರಪ್ಪ

(CM BS Yeddyurappa to be CM for next 2 years wishes Former CM HD Kumaraswamy)

Published On - 4:40 pm, Thu, 22 July 21

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್