ಜಮೀನು ವಿಚಾರಕ್ಕಾಗಿ‌ ಎರಡು ಸಮುದಾಯಗಳ ನಡುವೆ ಮಾರಾಮಾರಿ: ದೂರು ದಾಖಲು

Ramanagara News: ಜಮೀನು ವಿಚಾರಕ್ಕಾಗಿ‌ ಎರಡು ಸಮುದಾಯಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲೆಯ ಕುದೂರಿನ ಹೊನ್ನಾಪುರ ಗ್ರಾಮದಲ್ಲಿ ಭಾನುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಎರಡು ಸಮುದಾಯವರು ಪರಸ್ಪರ ದೂರು ನೀಡಿದ್ದಾರೆ.

ಜಮೀನು ವಿಚಾರಕ್ಕಾಗಿ‌ ಎರಡು ಸಮುದಾಯಗಳ ನಡುವೆ ಮಾರಾಮಾರಿ: ದೂರು ದಾಖಲು
ಎರಡು ಸಮುದಾಯಗಳ ಜನರ ಮಧ್ಯೆ ಗಲಾಟೆ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 03, 2023 | 4:28 PM

ರಾಮನಗರ, ಆಗಸ್ಟ್​​ 03: ಜಮೀನು ವಿಚಾರಕ್ಕಾಗಿ‌ ಎರಡು ಸಮುದಾಯಗಳ (communities) ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲೆಯ ಕುದೂರಿನ ಹೊನ್ನಾಪುರ ಗ್ರಾಮದಲ್ಲಿ ಭಾನುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸರಕಾರಿ‌ ಗೋಮಾಳ ಜಮೀನು ಪ್ರಶ್ನಿಸಿ‌ ನಡುರಸ್ತೆಯಲ್ಲೇ ಓರ್ವ ಪುರುಷ,‌ ಮೂರು ಮಹಿಳೆಯರ ನಡುವೆ ಗಲಾಟೆ ಉಂಟಾಗಿದೆ.

ಲಿಂಗಾಯತ ಸಮುದಾಯದವರು ಹಲ್ಲೆ ಮತ್ತು ಜಾತಿನಿಂದನೆ ಮಾಡಿದ್ದಾರೆಂದು ಆರೋಪಿ ದಲಿತ‌ ಸಮುದಾಯ ಕೇಸ್​ ಹಾಕಿದೆ. ಅದೇ ರೀತಿಯಾಗಿ ವಿನಾಕಾರಣ ಮಹಿಳೆ ಮೇಲೆ ಹಲ್ಲೆ ಮಾಡಿರುವ ಕುರಿತಾಗಿ ದಲಿತ ಸಮುದಾಯದಯ ವಿರುದ್ಧವೂ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಎರಡೂ ಕಡೆಯ ಪ್ರಕರಣದ ಕುರಿತು ಕುದೂರು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ರಾಯಚೂರಿನಲ್ಲಿ ಗಾಂಜಾ ಚಾಕೊಲೇಟ್ ದಂಧೆ ಪ್ರಕರಣ: ಎಂಟು ಕಡೆ ದಾಳಿ, ಐವರ ಬಂಧನ

ಲಾರಿ ಚಾಲಕನ ಅಚಾತುರ್ಯ: ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬಾಗಲಕೋಟೆ: ಇಳಕಲ್ ಪಟ್ಟಣದ ಬಸವೇಶ್ವರ ವೃತ್ತದ ಬಳಿ ರಾಷ್ಟ್ರೀಯ ಹೆದ್ದಾರಿ 53ರಲ್ಲಿ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್ ಹಿಂಬದಿ ಕೂತಿದ್ದ ಸವಾರ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಹುನಗುಂದ ತಾಲೂಕಿನ ಕೂಡಲಸಂಗಮದ ನಿವಾಸಿ ಶಾಂತಾ ಗುಡಿ(35) ಮೃತ ಮಹಿಳೆ. ಪತಿ ಜೊತೆ ಬೈಕ್​ನಲ್ಲಿ ಇಳಕಲ್​ಗೆ ಆಸ್ಪತ್ರೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಬ್ಯಾಂಕ್ ಸಾಲ ತೀರಿಸಲಾಗದೆ ಪತಿ-ಪತ್ನಿ ನಡುವೆ ಗಲಾಟೆ: ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಸಾಯಿಸಿ, ಆತ್ಮಹತ್ಯೆಗೆ ಶರಣಾದ ಗಂಡ

ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ: ಅಸ್ವಸ್ಥನಾದ ಯುವಕ

ಬೆಂಗಳೂರು: ಗಾಯತ್ರಿನಗರದಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಮನೆಯೊಂದರ ಟಾಪ್ ಫ್ಲೋರ್​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. 3ನೇ ಮಹಡಿಯ ಕೋಣೆಯಲ್ಲಿ ವಾಸವಾಗಿದ್ದ ಕೃಷ್ಣಮೂರ್ತಿ ಅಸ್ವಸ್ಥರಾಗಿದ್ದಾರೆ. ಬೆಂಕಿ ಬಿದ್ದಾಗ ಬಾರ್​ರೂಮ್​ನಲ್ಲಿ ಆಶ್ರಯ ಪಡೆದಿದ್ದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಸುಬ್ರಹ್ಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:20 pm, Thu, 3 August 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ