ಜಮೀನು ವಿಚಾರಕ್ಕಾಗಿ‌ ಎರಡು ಸಮುದಾಯಗಳ ನಡುವೆ ಮಾರಾಮಾರಿ: ದೂರು ದಾಖಲು

Ramanagara News: ಜಮೀನು ವಿಚಾರಕ್ಕಾಗಿ‌ ಎರಡು ಸಮುದಾಯಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲೆಯ ಕುದೂರಿನ ಹೊನ್ನಾಪುರ ಗ್ರಾಮದಲ್ಲಿ ಭಾನುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಎರಡು ಸಮುದಾಯವರು ಪರಸ್ಪರ ದೂರು ನೀಡಿದ್ದಾರೆ.

ಜಮೀನು ವಿಚಾರಕ್ಕಾಗಿ‌ ಎರಡು ಸಮುದಾಯಗಳ ನಡುವೆ ಮಾರಾಮಾರಿ: ದೂರು ದಾಖಲು
ಎರಡು ಸಮುದಾಯಗಳ ಜನರ ಮಧ್ಯೆ ಗಲಾಟೆ
Edited By:

Updated on: Aug 03, 2023 | 4:28 PM

ರಾಮನಗರ, ಆಗಸ್ಟ್​​ 03: ಜಮೀನು ವಿಚಾರಕ್ಕಾಗಿ‌ ಎರಡು ಸಮುದಾಯಗಳ (communities) ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲೆಯ ಕುದೂರಿನ ಹೊನ್ನಾಪುರ ಗ್ರಾಮದಲ್ಲಿ ಭಾನುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸರಕಾರಿ‌ ಗೋಮಾಳ ಜಮೀನು ಪ್ರಶ್ನಿಸಿ‌ ನಡುರಸ್ತೆಯಲ್ಲೇ ಓರ್ವ ಪುರುಷ,‌ ಮೂರು ಮಹಿಳೆಯರ ನಡುವೆ ಗಲಾಟೆ ಉಂಟಾಗಿದೆ.

ಲಿಂಗಾಯತ ಸಮುದಾಯದವರು ಹಲ್ಲೆ ಮತ್ತು ಜಾತಿನಿಂದನೆ ಮಾಡಿದ್ದಾರೆಂದು ಆರೋಪಿ ದಲಿತ‌ ಸಮುದಾಯ ಕೇಸ್​ ಹಾಕಿದೆ. ಅದೇ ರೀತಿಯಾಗಿ ವಿನಾಕಾರಣ ಮಹಿಳೆ ಮೇಲೆ ಹಲ್ಲೆ ಮಾಡಿರುವ ಕುರಿತಾಗಿ ದಲಿತ ಸಮುದಾಯದಯ ವಿರುದ್ಧವೂ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಎರಡೂ ಕಡೆಯ ಪ್ರಕರಣದ ಕುರಿತು ಕುದೂರು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ರಾಯಚೂರಿನಲ್ಲಿ ಗಾಂಜಾ ಚಾಕೊಲೇಟ್ ದಂಧೆ ಪ್ರಕರಣ: ಎಂಟು ಕಡೆ ದಾಳಿ, ಐವರ ಬಂಧನ

ಲಾರಿ ಚಾಲಕನ ಅಚಾತುರ್ಯ: ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬಾಗಲಕೋಟೆ: ಇಳಕಲ್ ಪಟ್ಟಣದ ಬಸವೇಶ್ವರ ವೃತ್ತದ ಬಳಿ ರಾಷ್ಟ್ರೀಯ ಹೆದ್ದಾರಿ 53ರಲ್ಲಿ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್ ಹಿಂಬದಿ ಕೂತಿದ್ದ ಸವಾರ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಹುನಗುಂದ ತಾಲೂಕಿನ ಕೂಡಲಸಂಗಮದ ನಿವಾಸಿ ಶಾಂತಾ ಗುಡಿ(35) ಮೃತ ಮಹಿಳೆ. ಪತಿ ಜೊತೆ ಬೈಕ್​ನಲ್ಲಿ ಇಳಕಲ್​ಗೆ ಆಸ್ಪತ್ರೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಬ್ಯಾಂಕ್ ಸಾಲ ತೀರಿಸಲಾಗದೆ ಪತಿ-ಪತ್ನಿ ನಡುವೆ ಗಲಾಟೆ: ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಸಾಯಿಸಿ, ಆತ್ಮಹತ್ಯೆಗೆ ಶರಣಾದ ಗಂಡ

ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ: ಅಸ್ವಸ್ಥನಾದ ಯುವಕ

ಬೆಂಗಳೂರು: ಗಾಯತ್ರಿನಗರದಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಮನೆಯೊಂದರ ಟಾಪ್ ಫ್ಲೋರ್​ನಲ್ಲಿ ಬೆಂಕಿ
ಕಾಣಿಸಿಕೊಂಡ ಘಟನೆ ನಡೆದಿದೆ. 3ನೇ ಮಹಡಿಯ ಕೋಣೆಯಲ್ಲಿ ವಾಸವಾಗಿದ್ದ ಕೃಷ್ಣಮೂರ್ತಿ ಅಸ್ವಸ್ಥರಾಗಿದ್ದಾರೆ. ಬೆಂಕಿ ಬಿದ್ದಾಗ ಬಾರ್​ರೂಮ್​ನಲ್ಲಿ ಆಶ್ರಯ ಪಡೆದಿದ್ದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಸುಬ್ರಹ್ಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:20 pm, Thu, 3 August 23

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us