Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಾಪನೆಯಲ್ಲಿ ಮತ್ತೆ ಗೊಂದಲ: ಸ್ವಕ್ಷೇತ್ರಕ್ಕೆ ಮೆಡಿಕಲ್ ಕಾಲೇಜ್​​ ಶಿಫ್ಟ್ ಮಾಡಿದರಾ ಡಿಕೆ ಶಿವಕುಮಾರ್​?

ರಾಮನಗರದ ಬಹುನಿರೀಕ್ಷಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಒಂದಲ್ಲ ಒಂದು ಸಂಕಷ್ಟಗಳು ಎದುರಾಗುತ್ತಲೇ ಇವೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನ ಕನಕಪುರಕ್ಕೆ ಶಿಫ್ಟ್ ಮಾಡ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಾಪನೆಯಲ್ಲಿ ಮತ್ತೆ ಗೊಂದಲ: ಸ್ವಕ್ಷೇತ್ರಕ್ಕೆ ಮೆಡಿಕಲ್ ಕಾಲೇಜ್​​ ಶಿಫ್ಟ್ ಮಾಡಿದರಾ ಡಿಕೆ ಶಿವಕುಮಾರ್​?
ರಾಜೀವ್ ಗಾಂಧಿ ಆರೋಗ್ಯ ವಿವಿ ನೀಲನಕ್ಷೆ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 24, 2023 | 4:30 PM

ರಾಮನಗರ, ಆಗಸ್ಟ್​ 24: ರಾಮನಗರದ ಬಹುನಿರೀಕ್ಷಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ (rajiv gandhi university) ಸ್ಥಾಪನೆಗೆ ಒಂದಲ್ಲ ಒಂದು ಸಂಕಷ್ಟಗಳು ಎದುರಾಗುತ್ತಲೇ ಇದೆ. ಹಲವು ಬಾರಿ ಶಂಕುಸ್ಥಾಪನೆ ಆಗಿದ್ದರೂ ಕೂಡ ಆರೋಗ್ಯ ವಿವಿ ನಿರ್ಮಾಣ ಕಾರ್ಯ ನಡೆದಿಲ್ಲ. ಆದರೆ ಇದೀಗ ಕಾಮಗಾರಿ ಆರಂಭವಾಗುವ ಹಂತದಲ್ಲೇ ಮತ್ತೊಂದು ಗೊಂದಲ ಸೃಷ್ಠಿಯಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನ ಕನಕಪುರಕ್ಕೆ ಶಿಫ್ಟ್ ಮಾಡ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ಒಂದೂ​ವರೆ ದಶ​ಕ​ದಿಂದ ನೆನೆ​ಗು​ದಿಗೆ ಬಿದ್ದಿದ್ದ ರಾಜೀವ್‌ ಗಾಂಧಿ ಆರೋಗ್ಯ ವಿಶ್ವ​ವಿ​ದ್ಯಾಲಯ ನಿರ್ಮಿ​ಸುವ ಕನ​ಸಿಗೆ ಒಂದಲ್ಲ ಒಂದು ವಿಘ್ನಗಳು ಎದುರಾಗುತ್ತಿವೆ. ಕಳೆದ ಸರ್ಕಾರದಲ್ಲಿ 600 ಕೋಟಿ ರೂ ವೆಚ್ಚದಲ್ಲಿ ವಿವಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿತ್ತು. ಬಳಿಕ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಗುದ್ದಲಿಪೂಜೆ ನೆರವೇರಿಸಿದ್ದರು. ಆದರೆ ಇದೀಗ ನಿರ್ಮಾಣ ಹಂತದ ಸಮಯದಲ್ಲೇ ಮತ್ತೊಂದು ಗೊಂದಲ ಸೃಷ್ಟಿಯಾಗಿದೆ. ರಾಮನಗರಕ್ಕೆ ಮಂಜೂರಾಗಿರುವ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂಬ ವಿಚಾರ ರಾಮನಗರ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಕನಕಪುರಕ್ಕೆ ಸ್ಥಳಾಂತರವಾಗಲ್ಲ; ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಅಂದಿನ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಕನಕಪುರಕ್ಕೆ ಮೆಡಿಕಲ್‌ ಕಾಲೇಜು ಮಂಜೂರು ಮಾಡಿದ್ದರು. ಸಮ್ಮಿಶ್ರ ಸರ್ಕಾರ ಪತನವಾದ ನಂತರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಆರೋಗ್ಯ ಸಚಿವ ಡಾ. ಸುಧಾಕರ್‌ ತಮ್ಮ ಸ್ವಕ್ಷೇತ್ರ ಚಿಕ್ಕಬಳ್ಳಾಪುರಕ್ಕೆ ಶಿಫ್ಟ್‌ ಮಾಡಿಕೊಂಡಿದ್ದರು. ಈ ವೇಳೆ ಇಬ್ಬರ ನಡುವೆ ಭಾರಿ ಜಟಾಪಟಿಯೇ ನಡೆದಿತ್ತು. ಆದರೆ ಇದೀಗ ಮೆಡಿಕಲ್‌ ಕಾಲೇಜು ವಿಚಾರದಲ್ಲಿ ಮತ್ತೊಮ್ಮೆ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.

ಶತಾಯ ಗತಾಯ ಕನಕಪುರಕ್ಕೆ ಒಂದು ಮೆಡಿಕಲ್‌ ಕಾಲೇಜು ತೆಗೆದುಕೊಂಡು ಹೋಗಬೇಕು ಎಂದು ಪಟ್ಟುಹಿಡಿದಿರೋ ಡಿಕೆ ಶಿವಕುಮಾರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಆಡಳಿತ ಕಚೇರಿಯನ್ನ ರಾಮನಗರದಲ್ಲಿ ನಿರ್ಮಿಸಿ, ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್​ ನಡೆಗೆ ರಾಮನಗರ ಸ್ಥಳೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಮನಗರ: ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ, ವರ್ಗಾವಣೆಯನ್ನು ತಡೆಹಿಡಿದ ಡಿಡಿಪಿಐ

ರಾಮನಗರ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಬೇಕಿದ್ದ ಮೆಡಿಕಲ್ ಕಾಲೇಜು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನ ವಿರೋಧಿಸಿ ಹೋರಾಟಕ್ಕೆ ಸಿದ್ಧತೆ ನಡೆಸಲಾಗಿದೆ. ಪಕ್ಷಾತೀತವಾಗಿ ಸಭೆ ನಡೆಸಿರೋ ಸ್ಥಳೀಯ ಮುಖಂಡರು ಹೋರಾಟದ ರೂಪುರೇಷೆ ಬಗ್ಗೆ ಚರ್ಚೆ ನಡೆಸಿದ್ದಾರೆ‌. ಯಾವುದೇ ಕಾರಣಕ್ಕೂ ಮೆಡಿಕಲ್ ಕಾಲೇಜು ಶಿಫ್ಟ್ ಆಗಬಾರದು, ಅವರದ್ದೇ ಸರ್ಕಾರ ಇರುವಾಗ ಕನಕಪುರಕ್ಕೆ ಹೊಸ ಕಾಲೇಜು ಮಂಜೂರು ಮಾಡಿಸಿಕೊಳ್ಳಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ರಾಮನಗರದ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಿಡಿದಿರೋ ಗ್ರಹಣ ಬಿಡುವ ಲಕ್ಷಣಗಳು ಕಾಣ್ತಿಲ್ಲ. ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ವಿಘ್ನಗಳ ಮೇಲೆ ವಿಘ್ನ ಎದುರಾಗ್ತಿದೆ. ಮೆಡಿಕಲ್ ಕಾಲೇಜು ರಾಮನಗರದಲ್ಲೇ ಇರಬೇಕು ಎನ್ನುವ ಹೋರಾಟ ಮುಂದಿನ ದಿನಗಳಲ್ಲಿ ಯಾವರೀತಿ ತೀವ್ರ ಸ್ವರೂಪ ಪಡೆಸುಕೊಳ್ಳಲಿದೆ ಎಂಬುದನ್ನ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:30 pm, Thu, 24 August 23

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ