ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಕನಕಪುರಕ್ಕೆ ಸ್ಥಳಾಂತರವಾಗಲ್ಲ; ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸ್ಥಳಾಂತರದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ರಾಮನಗರ: ಯಾವುದೇ ಕಾರಣಕ್ಕೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವನ್ನು (Rajiv Gandhi University of Health Sciences) ಕನಕಪುರಕ್ಕೆ (Kanakapur) ಸ್ಥಳಾಂತರ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ಕನಕಪುರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಬಗ್ಗೆ ಚಿಂತಿಸುತ್ತೇವೆ. ಆರೋಗ್ಯ ವಿವಿಯನ್ನು ಸ್ಥಳಾಂತರ ಮಾಡುವುದಿಲ್ಲ ಎಂದು ಹೇಳಿದರು.
ಈ ಸರ್ಕಾರ ಬಹಳ ದಿನ ಇರಲಾರದು. ಚುನಾವಣೆಗೆ ಸಿದ್ಧರಾಗಿ ಎಂಬ ಬಿಜೆಪಿ ನಾಯಕರಾದ ಕೆಎಸ್ ಈಶ್ವರಪ್ಪ, ಬಿಎಸ್ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆ ನಾಯಕರು ವಿಶ್ರಾಂತಿ ತೆಗೆದುಕೊಳ್ಳಲಿ ಎಂದು ತಿರುಗೇಟು ನೀಡಿದರು.
ಚುನಾವಣೆ ಬಂದರೆ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧೆ ಮಾಡಲಿ. ಅಧಿಕಾರ ಇಲ್ಲದೆ ಬಡಿದಾಡುತ್ತಿದ್ದಾರೆ. ಅಧಿಕಾರ ಕೊಡುವುದು ಜನರು. ನಾವು ಅಧಿಕಾರಕ್ಕೆ ಬಂದಿದ್ದರಿಂದ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.
ಇದನ್ನೂ ಓದಿ: ಅಧಿಕಾರಕ್ಕಾಗಿ ಗ್ಯಾರಂಟಿ ಘೋಷಿಸಿ ಈಗ ಪ್ರಧಾನಿ ಮೋದಿ ಕಡೆ ಬೊಟ್ಟು ತೋರಿಸುತ್ತೀರಾ?: ಸಿದ್ದರಾಮಯ್ಯಗೆ ಯಡಿಯೂರಪ್ಪ ಪ್ರಶ್ನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ಗೆ ಟಾಂಗ್ ನೀಡಿದ ಅವರು, ಬೆಲೆ ಏರಿಕೆ ಬಗ್ಗೆ ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:39 pm, Mon, 26 June 23