ವರಿಷ್ಠರ ಸೂಚನೆಗೂ ಬಗ್ಗದ ಕಾಂಗ್ರೆಸ್ಸಿಗರು: ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದ ಇಕ್ಬಾಲ್ ಹುಸೇನ್

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅನ್ನೋದು ನಮ್ಮ ಆಸೆ. ಅವರು ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದಾರೆ. ರಾಜ್ಯದಲ್ಲಿ ಶಕ್ತಿಮೀರಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರಿಗೆ ಅವಕಾಶ ಸಿಗಲೇಬೇಕು, ಜನರು ಕೂಡ ಅದನ್ನೇ ಬಯಸಿದ್ದಾರೆ ಎಂದು ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ವರಿಷ್ಠರ ಸೂಚನೆಗೂ ಬಗ್ಗದ ಕಾಂಗ್ರೆಸ್ಸಿಗರು: ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದ ಇಕ್ಬಾಲ್ ಹುಸೇನ್
ಇಕ್ಬಾಲ್ ಹುಸೇನ್
Image Credit source: Facebook
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By:

Updated on: Nov 02, 2023 | 8:15 PM

ರಾಮನಗರ, ನವೆಂಬರ್ 2: ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುತ್ತೇನೆ ಎಂದು ಸಿದ್ದರಾಮಯ್ಯ (Siddaramaiah) ಅವರು ನೀಡಿರುವ ಹೇಳಿಕೆ ಕಾಂಗ್ರೆಸ್​​ನ ಭಿನ್ನಮತವನ್ನು ಮತ್ತೆ ಹೆಚ್ಚಿಸುವಂತೆ ಭಾಸವಾಗುತ್ತಿದೆ. ಸಿಎಂ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ರಾಮನಗರದಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪರ ವಹಿಸಿ ಹೇಳಿಕೆ ನೀಡಿದ್ದಾರೆ. ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಅವರು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅನ್ನೋದು ನಮ್ಮ ಆಸೆ. ಅವರು ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದಾರೆ. ರಾಜ್ಯದಲ್ಲಿ ಶಕ್ತಿಮೀರಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರಿಗೆ ಅವಕಾಶ ಸಿಗಲೇಬೇಕು, ಜನರು ಕೂಡ ಅದನ್ನೇ ಬಯಸಿದ್ದಾರೆ ಎಂದು ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ಇದರೊಂದಿಗೆ, ರಾಜ್ಯದಲ್ಲಿ ಮತ್ತೊಂದು ಹಂತದ ಅಧಿಕಾರ ಹಂಚಿಕೆ ಚರ್ಚೆ ಆರಂಭವಾದಂತಾಗಿದೆ. ಪಕ್ಷದ ಚೌಕಟ್ಟು ಮೀರಿ ಹಾಗೂ ನಾಯಕತ್ವದ ವಿಚಾರವಾಗಿ ಸಚಿವರು, ಶಾಸಕರು ಯಾರೂ ಮಾತನಾಡುವಂತಿಲ್ಲ ಎಂಬ ಕಾಂಗ್ರೆಸ್ ಹೈಕಮಾಂಡ್ ಕಠಿಣ ಎಚ್ಚರಿಕೆಯ ನಂತರವೂ ಇದೀಗ ಶಾಸಕರು, ನಾಯಕರು ನಾಯಕತ್ವ ವಿಚಾರವಾಗಿ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನೇ ನೆಪವಾಗಿಟ್ಟುಕೊಂಡು ಮತ್ತೆ ಸಿಎಂ ಹುದ್ದೆ ಹಂಚಿಕೆಯ ಚರ್ಚೆ ಆರಂಭವಾಗಿದೆ.

ಇದನ್ನೂ ಓದಿ: ಹೊಸಪೇಟೆ: ಗೊಂದಲವಿಲ್ಲ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ

ಹೈಕಮಾಂಡ್ ನೀಡಿರುವ ಸೂಚನೆ ಚಿಕ್ಕವರಿಂದ ಹಿಡಿದು ದೊಡ್ಡ ನಾಯಕರವರೆಗೆ ಅನ್ವಯವಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಂಪಿಯಲ್ಲಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಯ ಬೆನ್ನಲ್ಲೇ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆ ಮಾಡಬಾರದು. ಏನಿದ್ದರೂ ಸಿಎಂ, ಡಿಸಿಎಂ ಬಳಿ ಅಥವಾ ನಮ್ಮ ಬಳಿ ಚರ್ಚಿಸಿ ಎಂದು ನಾಯಕರಿಗೆ ಹೈಕಮಾಂಡ್ ಸೂಚಿಸಿತ್ತು. ಗುರುವಾರ ಕೂಡ ಮತ್ತೊಮ್ಮೆ ಎಚ್ಚರಿಕೆ ನೀಡಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರು ‘ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ’ ಎಂದು ಹೇಳಿರುವುದು ಮತ್ತೆ ಸಮಸ್ಯೆ ಸೃಷ್ಟಿಸಿದೆ.

ರಾಜಕಾರಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Thu, 2 November 23

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us