ಮೇಕೆದಾಟು ಪಾದಯಾತ್ರೆ 2.O; ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಮನಗರದಿಂದ್ಲೇ ಪಾದಯಾತ್ರೆಯ ಸೆಕೆಂಡ್ ಇನ್ನಿಂಗ್ಸ್ ಶುರು

| Updated By: ಆಯೇಷಾ ಬಾನು

Updated on: Feb 27, 2022 | 7:51 AM

ಕಳೆದ ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಕೊರೊನಾ ಸೋಂಕಿನ ಸ್ಫೋಟಕ್ಕೆ, ಕೋರ್ಟ್ ಸೂಚನೆ ಮೇರೆಗೆ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಯನ್ನ ರಾಮನಗರದಲ್ಲಿ ಅರ್ಧಕ್ಕೆ ಸ್ಥಗಿತಗೊಳಿಸಿದ್ರು. ಇದೀಗ ಅದೇ ಸ್ಥಳದಿಂದ ಮೇಕೆದಾಟು ಪಾದಯಾತ್ರೆ 2.O ಇಂದಿನಿಂದ ಮತ್ತೆ ಚಾಲನೆ ನೀಡಲಾಗುತ್ತಿದೆ.

ಮೇಕೆದಾಟು ಪಾದಯಾತ್ರೆ 2.O; ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಮನಗರದಿಂದ್ಲೇ ಪಾದಯಾತ್ರೆಯ ಸೆಕೆಂಡ್ ಇನ್ನಿಂಗ್ಸ್ ಶುರು
ಮೇಕೆದಾಟು ಪಾದಯಾತ್ರೆಯಲ್ಲಿ ಡಿ.ಕೆ.ಶಿವಕುಮಾರ್
Follow us on

ಬೆಂಗಳೂರು: ಮಹಾಮಾರಿ ಕೊರೊನಾದ(Coronavirus) ಹೊಡೆತದಿಂದ ಸ್ವಲ್ಪದಿನ ಗ್ಯಾಪ್ ಕೊಟ್ಟಿದ್ದ ಕಾಂಗ್ರೆಸ್ ನಾಯಕರು(Congress Leaders) ಮತ್ತೆ ರೊಚ್ಚಿಗೆದ್ದಿದ್ದಾರೆ. ಇವತ್ತಿನಿಂದ ಮೇಕೆದಾಟು ಪಾದಯಾತ್ರೆಯ(Mekedatu Padyatra) ಎರಡನೇ ಇನ್ನಿಂಗ್ಸ್ ಆರಂಭವಾಗಲಿದ್ದು, ಕೈ ಪಡೆ ಸಜ್ಜಾಗಿದೆ. ಇಷ್ಟಕ್ಕೂ ಮೇಕೆದಾಟು ಪಾದಯಾತ್ರೆ 2.Oಗೆ ಕಾಂಗ್ರೆಸ್ನ ತಂತ್ರ ಹೇಗಿದೆ ಅನ್ನೋದ್ರ ಕುರಿತ ಡಿಟೇಲ್ಸ್ ಇಲ್ಲಿದೆ ನೋಡಿ.

ರಾಮನಗರದಿಂದ್ಲೇ ಪಾದಯಾತ್ರೆಯ ಸೆಕೆಂಡ್ ಇನ್ನಿಂಗ್ಸ್ ಶುರು
ಕಳೆದ ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಕೊರೊನಾ ಸೋಂಕಿನ ಸ್ಫೋಟಕ್ಕೆ, ಕೋರ್ಟ್ ಸೂಚನೆ ಮೇರೆಗೆ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಯನ್ನ ರಾಮನಗರದಲ್ಲಿ ಅರ್ಧಕ್ಕೆ ಸ್ಥಗಿತಗೊಳಿಸಿದ್ರು. ಇದೀಗ ಅದೇ ಸ್ಥಳದಿಂದ ಮೇಕೆದಾಟು ಪಾದಯಾತ್ರೆ 2.O ಇಂದಿನಿಂದ ಮತ್ತೆ ಚಾಲನೆ ನೀಡಲಾಗುತ್ತಿದೆ. ಇಂದಿನಿಂದ ಪ್ರಾರಂಭಗೊಳ್ಳುವ ಮೇಕೆದಾಟು 2ನೇ ಹಂತದ ಪಾದಯಾತ್ರೆ ಮಾರ್ಚ್ 3 ನೇ ತಾರೀಕು ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನ ರೀಚ್ ಆಗಲಿದೆ. ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಸಮಾವೇಶ ನಡೆಯಲಿದೆ. ರಾಮನಗರದ ಬಿಎಂ ರಸ್ತೆಯ ಕನಕಪುರ ಸರ್ಕಲ್ ಸಮೀಪದಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಲಾಗಿದೆ. ಈಗಾಗ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಥಳ ಪರಿಶೀಲನೆ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಡಿಕೆಶಿ, ಸಿದ್ದು ನೇತೃತ್ವದಲ್ಲಿ ಪಾದಯಾತ್ರೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಸಾಗಲಿದೆ. ಇವತ್ತು ರಾಮನಗರದಿಂದ ಶುರುವಾಗಲಿರೋ ಪಾದಯಾತ್ರೆ ಸಂಜೆ ಬಿಡದಿ ತಲುಪಿ ಬಿಡದಿಯಲ್ಲೇ ವಾಸ್ತವ್ಯ ಹೂಡಲಾಗುತ್ತಿದೆ. ನಂತರ 28ರಂದು ಬಿಡದಿಯಿಂದ ಬೆಂಗಳೂರಿಗೆ ಹೊರಡಲಿರುವ ಪಾದಯಾತ್ರೆ ಸೋಮವಾರ ಸಂಜೆ ಕೆಂಗೇರಿ ತಲುಪಲಿದೆ. ಇನ್ನು, ಈ ಮೊದಲು ಬೆಂಗಳೂರಿನಲ್ಲಿ 5 ದಿನ ಪಾದಯಾತ್ರೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಕೇವಲ 3 ದಿನಕ್ಕೆ ಇಳಿಸಲಾಗಿದೆ.

ಕಾಂಗ್ರೆಸ್ ಪಾದಯಾತ್ರೆಗೆ ಪೊಲೀಸ್ ಬಂದೋಬಸ್ತ್
ಕೇಂದ್ರ ವಲಯ ಐಜಿಪಿ ನೇತೃತ್ವದಲ್ಲಿ ಭದ್ರತೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಒಬ್ಬ ಎಸ್‌ಪಿ, ಇಬ್ಬರು ಎಎಸ್‌ಪಿಗಳು, 4 DySPಗಳು, 12 ಇನ್ಸ್‌ಪೆಕ್ಟರ್‌ಗಳು, 38 ಪಿಎಸ್‌ಐ, 37 ಎಎಸ್‌ಐ
600 ಪೊಲೀಸ್ ಸಿಬ್ಬಂದಿ, 50 ಮಹಿಳಾ ಪಿಸಿಗಳು, 100 ಹೋಮ್‌ಗಾರ್ಡ್, 20 ಕೆಎಸ್‌ಆರ್‌ಪಿ ತುಕಡಿ, 12 ಡಿಎಆರ್ ಸೇರಿದಂತೆ 1,200 ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ.

ಎಲ್ಲೆಲ್ಲಿ ಸಾಗಲಿದೆ ಪಾದಯಾತ್ರೆ
ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಪಾದಯಾತ್ರೆ ನಡಸಲಿರೋ ಕಾಂಗ್ರೆಸ್, ಬಿಡದಿಯಿಂದ ನಾಳೆ ಸಂಜೆ ಕೆಂಗೇರಿಗೆ ರೀಚ್ ಆಗಲಿದ್ದಾರೆ. ಕೆಂಗೇರಿಯ ಪೂರ್ಣಿಮಾ ಕನ್ವೆಂಷನ್ ಹಾಲ್ನಲ್ಲಿ ವಾಸ್ತವ್ಯ ಹೂಡಲಿದ್ದು, ನಾಡಿದ್ದು ಮಂಗಳವಾರ ಪಾದಯಾತ್ರೆ ಮುಂದುವರಿಯಲಿದೆ. ಮಂಗಳವಾರ ಕೆಂಗೇರಿಯಿಂದ ನಾಯಂಡನಹಳ್ಳಿ, ಬನಶಂಕರಿ ದೇವಸ್ಥಾನ, ಜಯದೇವ ಆಸ್ಪತ್ರೆ, ಬಿಟಿಎಂ, ಕೋರಮಂಗಲ, ವಿವೇಕನಗರ, ಹಲಸೂರು, ಜೆಸಿ ಪಾಳ್ಯ, ಟಿವಿ ಟವರ್ ಮೂಲಕ ಅರಮನೆ ಮೈದಾನದವರೆಗೆ. ನಂತರ ಸ್ಯಾಕಿ ಟ್ಯಾಂಕ್, ಮಲ್ಲೇಶ್ವರಂ, ಶೇಷಾದ್ರಿಪುರಂ, ರೈಲ್ವೆ ನಿಲ್ದಾಣ, ಚಾಮರಾಜಪೇಟೆ, ಅಲ್ಲಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ತಲುಪಲಿದೆ. ಸದ್ಯ, ಪಾದಯಾತ್ರೆ ಮೂಲಕ ಕಾಂಗ್ರೆಸ್ ಬೆಂಗಳೂರಿನ ಜನರ ಮನ ಗೆಲ್ಲಲು ಶತ ಪ್ರಯತ್ನ ನಡೆಸಿದೆ. ಆದ್ರೆ, ಕಾಂಗ್ರೆಸ್ನ ಱಲಿ ಎಷ್ಟರಪಟ್ಟಿಗೆ ಸಕ್ಸಸ್ ಆಗುತ್ತೆ ಅನ್ನೋದನ್ನ ಕಾದು ನೋಡ್ಬೇಕಿದೆ.

ವರದಿ: ಪ್ರಸನ್ನ ಗಾಂವ್ಕರ್ ಟಿವಿ9, ಬೆಂಗಳೂರು

ಇದನ್ನೂ ಓದಿ: ಗರ್ಭಾವಸ್ಥೆಯಲ್ಲಿ ಎಳನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ; ಇಲ್ಲಿದೆ ತಜ್ಞರ ಸಲಹೆ

Samsung Galaxy A03: ಕೇವಲ 10,499  ರೂ. ಗೆ ಬಿಡುಗಡೆ ಆದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್‌ ಖರೀದಿಸಬಹುದೇ?

Published On - 7:49 am, Sun, 27 February 22