Mekedatu Padayatra: ಹೈಕೋರ್ಟ್ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ: ಸಿದ್ದರಾಮಯ್ಯ ಹೇಳಿಕೆ
ಬಿಜೆಪಿಯವರೇ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ. ಕೊವಿಡ್ ಹೆಚ್ಚಾಗಲು ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸರ್ಕಾರ ಕಾರಣ. ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಪ್ರಧಾನಿ ರಾಲಿ ನಡೆಸಿದ್ರು ಎಂದು ಟಿವಿ9ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮನಗರ: ಪಾದಯಾತ್ರೆ ನಿಲ್ಲಿಸಲು ಹೈಕೋರ್ಟ್ ಸೂಚಿಸಿದ್ರೆ ಪಾಲಿಸ್ತೇವೆ. ಹೈಕೋರ್ಟ್ ಆದೇಶದ ವಿರುದ್ಧವಾಗಿ ನಾವು ನಡೆದುಕೊಳ್ಳಲ್ಲ. ಹೈಕೋರ್ಟ್ ಆದೇಶ ನೀಡಿದ್ರೆ ಪಾದಯಾತ್ರೆ (Mekedatu Padayatre) ನಿಲ್ಲಿಸುತ್ತೇವೆ ಎಂದು ಟಿವಿ9ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಬುಧವಾರ ಹೇಳಿಕೆ ನೀಡಿದ್ದಾರೆ. ನೆಲದ ಕಾನೂನು ಬಗ್ಗೆ ನಮಗೆ ಗೌರವವಿದೆ. ನೆಲದ ಕಾನೂನು ಬಗ್ಗೆ ಬಿಜೆಪಿಯವರಿಗೇ ನಂಬಿಕೆ ಇಲ್ಲ. ಬಿಜೆಪಿ ಶಾಸಕರೇ ಕೊವಿಡ್ (Covid19) ನಿಯಮ ಉಲ್ಲಂಘಿಸಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಿಯಮ ಪಾಲಿಸುವ ವಿಚಾರದಲ್ಲಿ ಸರ್ಕಾರ ದ್ವಂದ್ವ ನೀತಿ ವಹಿಸಿದೆ. ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಏಕೆ ಪ್ರಕರಣ ದಾಖಲಿಸಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷೇತ್ರದಲ್ಲೇ ಜಾತ್ರೆ ನಡೆಸಲಾಗಿದೆ. ಬಿಜೆಪಿಯವರೇ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ. ಕೊವಿಡ್ ಹೆಚ್ಚಾಗಲು ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸರ್ಕಾರ ಕಾರಣ. ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಪ್ರಧಾನಿ ರಾಲಿ ನಡೆಸಿದ್ರು ಎಂದು ಟಿವಿ9ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಲೀಗಲ್ ಸೆಲ್ ಅಧ್ಯಕ್ಷಗೆ ಬುಲಾವ್ ಹೋಗಿದೆ. ಲೀಗಲ್ ಸೆಲ್ ಅಧ್ಯಕ್ಷ ವಕೀಲ ಎ.ಎಸ್ ಪೊನ್ನಣ್ಣಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಿಂದ ಕರೆ ಹೋಗಿದ್ದು ರಾಮನಗರಕ್ಕೆ ಕರೆಸಿಕೊಂಡಿದ್ದಾರೆ. ಹೈಕೋರ್ಟ್ನಿಂದ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ವರದಿ ಕೇಳಿದೆ. ಸಂಕ್ಷಿಪ್ತ ವರದಿ ಕೇಳಿದೆ. ಕೋರ್ಟ್ ಕೇಳಿರೋ ಮಾಹಿತಿ ಬಗ್ಗೆ ಚರ್ಚೆ ನಡೆಸಲು ಲೀಗಲ್ ಸೆಲ್ ಅಧ್ಯಕ್ಷ ವಕೀಲ ಎ.ಎಸ್ ಪೊನ್ನಣ್ಣ ಕರೆಸಿಕೊಂಡಿದ್ದಾರೆ.
ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್ಗೆ ಪಿಐಎಲ್! ತುರ್ತು ವಿಚಾರಣೆಗೆ ಮನವಿ
ಇದನ್ನೂ ಓದಿ: ‘ಸರ್ಕಾರವೇ ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ; ಡಿಕೆ ಶಿವಕುಮಾರ್ ಬಳಿ ಸೋಂಕಿತನನ್ನು ಕಳಿಸಲಾಗಿದೆ’
Published On - 3:30 pm, Wed, 12 January 22