ರಾಮನಗರ ಜಿಲ್ಲೆಯಲ್ಲಿ 2ನೇ ಕೋವಿಡ್ ​ಪ್ರಕರಣ ಪತ್ತೆ: ಕಾರವಾರ, ಚಿಕ್ಕಮಗಳೂರಿನಲ್ಲೂ ಕೊರೊನಾ

ಕರುನಾಡಲ್ಲಿ ಕೊರೊನಾ ತಲ್ಲಣ ಸೃಷ್ಟಿಸಿದೆ. ಕೋವಿಡ್ ತಪಾಸಣೆ ತೀವ್ರಗೊಳಿಸಲು ಸರ್ಕಾರ ನಿರ್ಧರಿಸಿದೆ. ಸದ್ಯ ರಾಮನಗರದಲ್ಲಿ 21‌ ವರ್ಷದ ಯುವತಿಗೆ ಕೊರೊನಾ ಪಾಸಿಟಿವ್​ ಕಂಡುಬಂದಿದೆ. ಆ ಮೂಕಲ ಜಿಲ್ಲೆಯಲ್ಲಿ 2ನೇ ಕೋವಿಡ್​ ಪ್ರಕರಣ ಪತ್ತೆ ಆಗಿದೆ. ಕಾರವಾರ, ಚಿಕ್ಕಮಗಳೂರಿನಲ್ಲಿ ಕೊರೊನಾ ಆತಂಕ ಶುರುವಾಗಿದೆ.

ರಾಮನಗರ ಜಿಲ್ಲೆಯಲ್ಲಿ 2ನೇ ಕೋವಿಡ್ ​ಪ್ರಕರಣ ಪತ್ತೆ: ಕಾರವಾರ, ಚಿಕ್ಕಮಗಳೂರಿನಲ್ಲೂ ಕೊರೊನಾ
ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ
Edited By:

Updated on: Dec 20, 2023 | 3:43 PM

ರಾಮನಗರ, ಡಿಸೆಂಬರ್​​ 20: ಜಿಲ್ಲೆಯಲ್ಲಿ 2ನೇ ಕೋವಿಡ್​ ಪ್ರಕರಣ ಪತ್ತೆ ಆಗಿದೆ. ರಾಮನಗರದಲ್ಲಿ 21‌ ವರ್ಷದ ಯುವತಿಗೆ ಕೊರೊನಾ (Corona) ಪಾಸಿಟಿವ್​ ಕಂಡುಬಂದಿದೆ. ಜಿಲ್ಲಾಸ್ಪತ್ರೆಯ ಕೋವಿಡ್​ ವಾರ್ಡ್​​ನಲ್ಲಿ ಯುವತಿಗೆ ಐಸೋಲೇಷನ್ ಮಾಡಿದ್ದು, ಕೊರೊನಾ ಸೋಂಕಿತ ಯುವತಿ ತಾಯಿಗೂ ಕೊವಿಡ್​ ಟೆಸ್ಟ್ ಮಾಡಲಾಗಿದೆ. ಪಕ್ಕದ ವಾರ್ಡ್​ನಲ್ಲೇ ಸೋಂಕಿತ ಮತ್ತೋರ್ವ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕಮಗಳೂರಿನಲ್ಲಿ ಇಬ್ಬರಿಗೆ ಕೊರೊನಾ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೊರೊನಾ ಆತಂಕ ಶುರುವಾಗಿದೆ. ನಿನ್ನೆ ಟೆಸ್ಟ್ ಮಾಡಿಸಿಕೊಂಡ ಇಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಮತ್ತೊಮ್ಮೆ ಇಬ್ಬರ ಕೋವಿಡ್ ಟೆಸ್ಟ್​ಗಾಗಿ ಅಧಿಕಾರಿಗಳು ಸ್ಯಾಂಪಲ್ ಕಳುಹಿಸಿದ್ದಾರೆ. ನಿನ್ನೆ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಿಕೊಂಡಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಹೆಚ್ಚಳ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಮತ್ತೆ ಲ್ಯಾಬ್ ಫಲಿತಾಂಶ ಬಂದ ಬಳಿಕ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಈ ಕುರಿತಾಗಿ ಟಿವಿ 9ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಾರೂ ಕೂಡ ಹೆದರುವ ಅವಶ್ಯಕತೆ ಇಲ್ಲ: ಡಿಹೆಚ್​ಓ ನಿರಜ

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಕೊರೊನಾ ರೂಪಾಂತರಿ ವೈರಸ್ ಪ್ರಕರಣ ವಿಚಾರವಾಗಿ ಡಿಹೆಚ್​ಓ ನಿರಜ ಪ್ರತಿಕ್ರಿಯೆ ನೀಡಿದ್ದು, ಡಿಸೆಂಬರ್ 10ಕ್ಕೆ ಜಿಲ್ಲೆಯಲ್ಲಿ ಒಂದು ಕೊವಿಡ್ ಪ್ರಕರಣ ಕಂಡುಬಂದಿತ್ತು. ಕೆಲಸಕ್ಕೆಂದು ಗೋವಾಕ್ಕೆ ಹೋಗಿ ಬಂದ ವ್ಯಕ್ತಿಯಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ಸದ್ಯ ಆ ವ್ಯಕ್ತಿ ಪೂರ್ತಿ ಗುಣ ಮುಖನಾಗಿದ್ದಾನೆ ಎಂದಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ಕೋವಿಡ್ ಗೈಡ್‌ಲೈನ್ಸ್ ಬಿಡುಗಡೆ: ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ

ಜಿಲ್ಲೆಯಲ್ಲಿ ಯಾರೂ ಕೂಡ ಹೆದರುವ ಅವಶ್ಯಕತೆ ಇಲ್ಲ. ಇಲಾಖೆಯ ಹೊಸ ಗೈಡ್ ಲೈನ್ಸ್ ಪ್ರಕಾರ ನಾವು ರೆಡಿ ಆಗಿದ್ದೇವೆ. ಕೋವಿಡ್ ಸೆಂಟರ್ ಹಾಗೂ ಆಕ್ಸಿಜನ್ ಪ್ಲ್ಯಾಂಟ್ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೇವೆ. ಹೊಸ ವರ್ಷಾಚರಣೆಗೆ ಕಾರವಾರಕ್ಕೆ ಬರುವವರಿಗೆ ಸದ್ಯ ಯಾವುದೇ ನಿರ್ಬಂಧ ಹೇರಿಲ್ಲ. ವೈರಸ್ ತಿವ್ರತೆ ಹೆಚ್ಚಾಗಿ ಕಂಡು ಬಂದಲ್ಲಿ ನಿರ್ಬಂಧ ಹೇರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಸದ್ಯ ಉತ್ತರ ಕನ್ನಡ ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಯಾವುದೇ ನಿರ್ಬಂಧ ಇಲ್ಲ. ಪ್ರವಾಸಿಗರು ಕೋವಿಡ್ ಬಗ್ಗೆ ಯಾವುದೇ ಆತಂಕ ಬೇಡ ಎಚ್ಚರಿಕೆ ಇರಲಿ. ಹಾರ್ಟ್, ಅಸ್ತಮಾ ಸಮಸ್ಯೆ ಇರುವವರು ಬರದೆ ಇರೋದು ಒಳ್ಳೆಯದು. ಕೊರೊನಾ ಎದುರಿಸಲು ನಮ್ಮ ಜಿಲ್ಲಾ ಆರೋಗ್ಯ ಇಲಾಖೆ ರೆಡಿ ಇದೆ. ಕೊರೊನಾ ಸಂಖ್ಯೆ ಎಚ್ಚಾದ್ದಾರೆ ಗೋವಾ ಬಾರ್ಡರ್​ನಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಾಬೇಕಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Loading...
Unable to load recommendations.
Follow Us