Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಿಗಳ ಮೈತೊಳೆಯಲು ಹೋಗಿದ್ದ ದಂಪತಿ ನೀರುಪಾಲು; ಮುಳುಗುತ್ತಿದ್ದ ಪತ್ನಿಯ ರಕ್ಷಿಸಲು ಹೋಗಿ ಪತಿಯೂ ಸಾವು

ಕಲಬುರಗಿ: ಖಣಿ ಗ್ರಾಮದ ಬಳಿ ಮರಕ್ಕೆ ಕಾರು ಡಿಕ್ಕಿಯಾಗಿ ಒಬ್ಬರು ಅಸುನೀಗಿದ್ದು, ಮೂವರಿಗೆ ಗಾಯಗಳಾಗಿವೆ. ಕಾರಿನಲ್ಲಿದ್ದ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ನಿವಾಸಿ ಶರಬಣ್ಣ ಮೃತರು. ತುಳಜಾಪುರಕ್ಕೆ ದೇವರ ದರ್ಶನಕ್ಕೆ ಹೋಗಿದ್ದರು ಮರಳಿ ತಮ್ಮೂರಿಗೆ ಬರುವಾಗ ಘಟನೆ ನಡೆದಿದೆ.

ಕುರಿಗಳ ಮೈತೊಳೆಯಲು ಹೋಗಿದ್ದ ದಂಪತಿ ನೀರುಪಾಲು; ಮುಳುಗುತ್ತಿದ್ದ ಪತ್ನಿಯ ರಕ್ಷಿಸಲು ಹೋಗಿ ಪತಿಯೂ ಸಾವು
ಕುರಿಗಳ ಮೈತೊಳೆಯಲು ಹೋಗಿದ್ದ ದಂಪತಿ ನೀರುಪಾಲು; ಮುಳುಗುತ್ತಿದ್ದ ಪತ್ನಿಯ ರಕ್ಷಿಸಲು ಹೋಗಿ ಪತಿಯೂ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 01, 2022 | 8:14 PM

ರಾಮನಗರ: ರಾಮನಗರದ ಜಿಲ್ಲೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿಯ ಕೆರೆಯಲ್ಲಿ ಕುರಿಗಳ ಮೈತೊಳೆಯಲು ಹೋಗಿದ್ದ ದಂಪತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೂಡ್ಲೂರಿನ ವೆಂಕಟೇಶ್(48) ಮತ್ತು ಪಾರ್ವತಮ್ಮ(42) ದುರ್ದೃವಿ ದಂಪತಿ. ಮುಳುಗುತ್ತಿದ್ದ ಪತ್ನಿ ಪಾರ್ವತಮ್ಮ ಅವರನ್ನು ರಕ್ಷಿಸಲು ಹೋಗಿ ಪತಿ ವೆಂಕಟೇಶ್ ಅವರೂ ಸಾವನ್ನಪ್ಪಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮರಣೋತ್ತರ ಪರೀಕ್ಷೆಗೆಂದು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಮೃತ ದೇಹಗಳನ್ನು ರವಾನೆ ಮಾಡಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ ತುಮಕೂರು ತಾಲೂಕಿನ ಚನ್ನೇನಹಳ್ಳಿ ಗ್ರಾಮದ ಲೆಕ್ಕಾಧಿಕಾರಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ವಿ.ಎ. ನಟರಾಜು ಎಸಿಬಿ ಬಲೆಗೆ ಬಿದ್ದ ಲೆಕ್ಕಾಧಿಕಾರಿ. ಜಮೀನೊಂದರ ಪಹಣಿಯಲ್ಲಿ ವಿಸ್ತೀರ್ಣ ತಪ್ಪಾಗಿದ್ದು, ಸರಿಪಡಿಸಲು ಕೋರಿ ಗ್ರಾಮ ಲೆಕ್ಕಾಧಿಕಾರಿಗೆ ಅರ್ಜಿ ಸಲ್ಲಿಸಲಾಗಿತ್ತು. ಲೆಕ್ಕಾಧಿಕಾರಿ ಪಹಣಿ ವಿಸ್ತೀರ್ಣ ಸರಿಪಡಿಸಲು 20 ಸಾವಿರ ರೂಪಾಯಿ ಲಂಚ ಕೇಳಿದ್ದ. ಮುಂಗಡವಾಗಿ 5 ಸಾವಿರ ರೂಪಾಯಿ ಪಡೆದಿದ್ದ ಲೆಕ್ಕಾಧಿಕಾರಿ, 15 ಸಾವಿರ ರೂ ಲಂಚ ಹಣ ಸ್ವೀಕರಿಸಿರುವಾಗ ನೇರವಾಗಿ ಸಿಕ್ಕಿಬಿದ್ದಿದ್ದಾರೆ. ತುಮಕೂರು ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನ ದಸ್ತಗಿರಿ ಮಾಡಿ, ಲಂಚದ ಹಣ ವಶಕ್ಕೆ ಪಡೆದಿದ್ದಾರೆ.

ತುಳಜಾಪುರಕ್ಕೆ ದೇವರ ದರ್ಶನಕ್ಕೆ ಹೋಗಿದ್ದರು ಮರಳಿ ಬರುವಾಗ ಅಪಘಾತ: ಕಲಬುರಗಿ: ಖಣಿ ಗ್ರಾಮದ ಬಳಿ ಮರಕ್ಕೆ ಕಾರು ಡಿಕ್ಕಿಯಾಗಿ ಒಬ್ಬರು ಅಸುನೀಗಿದ್ದು, ಮೂವರಿಗೆ ಗಾಯಗಳಾಗಿವೆ. ಕಾರಿನಲ್ಲಿದ್ದ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ನಿವಾಸಿ ಶರಬಣ್ಣ(30) ಮೃತರು. ಗಾಯಗೊಂಡ ಮೂವರನ್ನ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುಳಜಾಪುರಕ್ಕೆ ದೇವರ ದರ್ಶನಕ್ಕೆ ಹೋಗಿದ್ದರು ಮರಳಿ ತಮ್ಮೂರಿಗೆ ಬರುವಾಗ ಘಟನೆ ನಡೆದಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್ಆರ್​ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವು ವಿಜಯಪುರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆಎಸ್ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನೊಬ್ಬನ ಶವ ಛಿದ್ರವಾಗಿದೆ. ಮತ್ತೋರ್ವ ಬೈಕ್ ಸವಾರನ ಶವ ರಸ್ತೆ ಬದಿಯ ಮುಳ್ಳುಗಂಟಿಯಲ್ಲಿ ಬಿದ್ದಿದೆ. ಬಸ್ ಮುಂಭಾಗ ನಜ್ಜುಗುಜ್ಜಾಗಿದ್ದು, ಬೈಕ್ ಅಲ್ಲಿಯೇ ಸಿಲುಕಿಕೊಂಡಿದೆ. ಮೃತ ಬೈಕ್ ಸವಾರರ ಹೆಸರು-ವಿಳಾಸ ಇನ್ನೂ ಮತ್ತೆಯಾಗಿಲ್ಲ. ಸರ್ಕಾರಿ ಬಸ್ ವಿಜಯಪುರದಿಂದ ತಾಳಿಕೋಟೆ ಕಡೆಗೆ ಹೊರಟಿತ್ತು. ಬೈಕ್ ಸವಾರರು ಬಸವನಬಾಗೇವಾಡಿಯಿಂದ ಮನಗೂಳಿಯತ್ತ ಹೊರಟಿದ್ದರು. ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Also Read: ನಾವು ಕರ್ನಾಟಕವನ್ನ ರಾಹುಲ್ ಗಾಂಧಿ -ಸೋನಿಯಾ ಗಾಂಧೀಜಿಗೆ ಗೆಲ್ಲಿಸಿ ಕೊಡಬೇಕು :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ

Also Read: ಹುಟ್ಟೂರಲ್ಲಿ ಮಣ್ಣಿನ ಮಗನಿಗೆ ಮ್ಯೂಸಿಯಂ -ಎಚ್ ಡಿ ದೇವೇಗೌಡರ ಮ್ಯೂಸಿಯಂನಲ್ಲಿ ಏನೆಲ್ಲಾ ಇರಲಿದೆ, ವಿವರ ಇಲ್ಲಿದೆ

Published On - 7:46 pm, Fri, 1 April 22

2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್