ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಹತ್ಯೆ ಕೇಸ್; ಇಂದಿನಿಂದ CID ತನಿಖೆ ಶುರು
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಬಾವ ಮಹದೇವಯ್ಯ ಕೊಲೆ ಪ್ರಕರಣದ ತನಿಖೆಯನ್ನು CID ಅಧಿಕಾರಿಗಳು ಕೈಗೆತ್ತಿಕೊಂಡಿದ್ದು ಇಂದಿನಿಂದ ತನಿಖೆ ಆರಂಭಿಸಿದ್ದಾರೆ. ಘಟನೆ ಸಂಬಂಧ ಈಗಾಗಲೇ ಮೂವರನ್ನ ಚನ್ನಪಟ್ಟಣ ಪೊಲೀಸರು (Channapatna Police) ಅರೆಸ್ಟ್ ಮಾಡಿದ್ದಾರೆ.
ರಾಮನಗರ, ಡಿ.28: ಕಳೆದ ಡಿ. 3 ರಂದು ಭೀಕರವಾಗಿ ಕೊಲೆಯಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ (CP Yogeshwar) ಬಾವ ಮಹದೇವಯ್ಯ ಕೊಲೆ ಪ್ರಕರಣದ ತನಿಖೆಯನ್ನು CID ಅಧಿಕಾರಿಗಳು ಕೈಗೆತ್ತಿಕೊಂಡಿದ್ದು ಇಂದಿನಿಂದ ತನಿಖೆ ಆರಂಭಿಸಿದ್ದಾರೆ. ಘಟನೆ ಸಂಬಂಧ ಈಗಾಗಲೇ ಮೂವರನ್ನ ಚನ್ನಪಟ್ಟಣ ಪೊಲೀಸರು (Channapatna Police) ಅರೆಸ್ಟ್ ಮಾಡಿದ್ದಾರೆ.
ಡಿ.3 ರಂದು ತಾಲೂಕಿನ ಚಕ್ಕೆರೆ ಬಳಿಯ ವಡ್ಡರದೊಡ್ಡಿ ತೋಟದ ಮನೆಯಿಂದ ಕಾರು ಸಮೆತ ಮಹದೇವಯ್ಯ ನಾಪತ್ತೆಯಾಗಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡು ನಾಲ್ಕು ಪ್ರತ್ಯೇಕ ತಂಡಗಳ ರಚಿಸಿಕೊಂಡು ಪ್ರಕರಣದ ಬೇನ್ನತ್ತಿದ್ದ ಪೊಲೀಸರಿಗೆ ಡಿ.4 ರಾತ್ರಿ ರಾಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಮಹದೇವಯ್ಯ ಕಾರು ಪತ್ತೆಯಾಗಿತ್ತು. ಡಿ.5 ರ ಮಧ್ಯಾಹ್ನ ರಾಮಪುರದಿಂದ ಕೌದಳ್ಳಿಗೆ ತೆರಳುವ ಕಾಡಿನಲ್ಲಿ ಮಹದೇವಯ್ಯ ಶವ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಇನ್ನೇನು ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ ಎನ್ನವಷ್ಟರಲ್ಲಿ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿ ಆದೇಶಿಸಲಾಗಿತ್ತು. ಹೀಗಾಗಿ ಇಂದಿನಿಂದ ಸಿಐಡಿ ತಂದ ಮೊದಲಿನಿಂದ ಮತ್ತೆ ತನಿಖೆ ಆರಂಭಿಸಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಅವರು ಸಿಐಡಿಗೆ ಪ್ರಕರಣ ಹಸ್ತಾಂತರ ಮಾಡಿದ್ದರು. ಚನ್ನಪಟ್ಟಣ ಜೆಎಂಎಫಸಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರು ಪಡಿಸಿ ಸಿಐಡಿ ತಂಡ ವಶಕ್ಕೆ ಪಡೆಯಲಿದೆ.
ಇದನ್ನೂ ಓದಿ: ಸಿಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಕೊಲೆ ಪ್ರಕರಣ; ಆರೋಪಿ ಬಂಧನ
ಇನ್ನು ಈ ಪ್ರಕರಣದಲ್ಲಿ ಅರೆಸ್ಟ್ ಆದ ಮುರುಗೇಶ್ (40), ತಮಿಳುನಾಡಿನ ಇನ್ನಿಬ್ಬರು ಸ್ನೇಹಿತರ ಸಹಕಾರದಿಂದ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿತ್ತು. ಮುರುಗೇಶ್ ಈ ಹಿಂದೆ ಯೋಗೇಶ್ವರ್ ಸಹೋದರ ಗಂಗಾಧರ್ ಎಂಬವರ ತೋಟದ ಕಾವಲುಗಾರನಾಗಿದ್ದ. ಮಹದೇವಯ್ಯನವರ ತೋಟದ ಪಕ್ಕದಲ್ಲಿದ್ದ ಈ ತೋಟದಲ್ಲಿ ಪತ್ನಿಸಮೇತ ನೆಲೆಸಿದ್ದ. ಆದರೆ, ಈತನನ್ನು ಕೆಲಸದಿಂದ ಇತ್ತೀಚಿಗೆ ತೆಗೆದುಹಾಕಲಾಗಿತ್ತು. ಜಮೀನು ಮಾರಿರುವ ಹಿನ್ನೆಲೆಯಲ್ಲಿ ಮಹದೇವಯ್ಯನವರ ಬಳಿ ಅಪಾರ ಹಣವಿರುವುದನ್ನು ಗಮನಿಸಿದ್ದ ಮುರುಗೇಶ್ ತಮಿಳುನಾಡಿನ ತನ್ನಿಬ್ಬರು ಸ್ನೇಹಿತರ ಜೊತೆ ಸೇರಿ ಈ ಕೃತ್ಯ ಎಸಗಿದ್ದ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ