ಕಳ್ಳ ಕಾಕರ ಅಡ್ಡೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ: ಅವೈಜ್ಞಾನಿಕ ಕಾಮಗಾರಿಯಿಂದಲೂ ಸಮಸ್ಯೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಅಪಘಾತಗಳ ಜೊತೆಗೆ ಅಪರಾಧಗಳ ತಾಣವಾಗಿದೆ. ಸರ್ವೀಸ್ ರಸ್ತೆ ಕಾಮಗಾರಿ ಅಪೂರ್ಣ ಮತ್ತು ಅವೈಜ್ಞಾನಿಕವಾಗಿದ್ದು, ಸಿಸಿ ಕ್ಯಾಮೆರಾ, ಬೀದಿ ದೀಪ, ಪೊಲೀಸ್ ಗಸ್ತು ಇಲ್ಲದಿರುವುದರಿಂದ ಕಳ್ಳತನ & ದರೋಡೆಗಳು ಹೆಚ್ಚಿವೆ. ವಾಹನ ಸವಾರರ ಸುರಕ್ಷತೆ ದೊಡ್ಡ ಸವಾಲಾಗಿದ್ದು, ಪೊಲೀಸರನ್ನೇ ದೋಚಿದ ಘಟನೆ ಆತಂಕ ಮೂಡಿಸಿದೆ.

ಕಳ್ಳ ಕಾಕರ ಅಡ್ಡೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ: ಅವೈಜ್ಞಾನಿಕ ಕಾಮಗಾರಿಯಿಂದಲೂ ಸಮಸ್ಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ
Edited By:

Updated on: Oct 31, 2025 | 5:00 PM

ರಾಮನಗರ, ಅಕ್ಟೋಬರ್​ 31: ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಕಡಿಮೆಗೊಳಿಸುವ ಮತ್ತು ಸುಗಮ ಸಂಚಾರದ ಉದ್ದೇಶದಿಂದ ನಿರ್ಮಿಸಲಾಗಿರುವ ಎಕ್ಸ್‌ಪ್ರೆಸ್‌ ವೇ ಸದಾ ಒಂದಿಲ್ಲೊಂದು ವಿಚಾರಗಳಿಗೆ ಆರಂಭದಿಂದಲೂ ಸುದ್ದಿಯಾಗುತ್ತಲೇ ಇದೆ. 118 ಕಿ.ಮೀ ಉದ್ದ ಮತ್ತು 6 ಪಥದ ಹೆದ್ದಾರಿಯಲ್ಲಿ ಮೇಲಿಂದ ಮೇಲೆ ಅಪಘಾತಗಳು ನಡೆಯುತ್ತಿರುವ ಸುದ್ದಿಯ ನಡುವೆ ಅಪರಾಧಗಳೂ ಹೆಚ್ಚಿರೋದು ವಾಹನ ಸವಾರರ ಆತಂಕಕ್ಕೆ ಕಾರಣವಾಗಿದೆ.

‘ಪೊಲೀಸರನ್ನೇ ಕಳ್ಳರು ಬಿಟ್ಟಿಲ್ಲ’

ಒಟ್ಟು 8,479 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕದ ಮೊದಲ ಎಕ್ಸ್‌ಪ್ರೆಸ್‌ ಹೈವೇ ನಿರ್ಮಾಣವಾಗಿದ್ದು, ಇದನ್ನು ಎರಡೂವರೆ ವರ್ಷಗಳ ಹಿಂದೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಈ ರಸ್ತೆಯೀಗ ಕಳ್ಳರ ಹಾಟ್​ ಸ್ಪಾಟ್​ ಆಗಿ ಮಾರ್ಪಟ್ಟಿದೆ. ಸರ್ವೀಸ್​ ರಸ್ತೆಯಲ್ಲಿ ದರೋಡೆ, ಕಳ್ಳತನ ಪ್ರಕರಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ರಾತ್ರಿ ವೇಳೆ ಬೈಕ್​ನಲ್ಲಿ ಬರುವ, ಹೆದ್ದಾರಿ ಪಕ್ಕದಲ್ಲಿ ವಾಹನ ನಿಲ್ಲಿಸಿ ನಿದ್ರೆ ಮಾಡುವವರನ್ನೇ ಟಾರ್ಗೆಟ್ ಮಾಡಿ ಕಳ್ಳತನ, ದರೋಡೆ ಮಾಡುವ ಕೆಲಸಗಳು ವರದಿಯಾಗಿವೆ. ಇತ್ತೀಚೆಗೆ ತಮಿಳುನಾಡು ಪೊಲೀಸರನ್ನೇ ಇಲ್ಲಿ ಕಳ್ಳರು ದೋಚಿದ್ದಾರೆ ಎಂಬುದು ಸ್ಥಳೀಯರ ಆರೋಪ.

ಇದನ್ನೂ ಓದಿ: ಹಲೋ ಎಲ್ಲಾ ಕೇಳಿಸ್ಕೊಳ್ಳಿ: ವಿಡಿಯೋ ಮಾಡಿಟ್ಟು ನವ ವಿವಾಹಿತ ಆತ್ಮಹತ್ಯೆ, ಹೆಂಡ್ತಿ ವಿರುದ್ಧ ಗಂಭೀರ ಆರೋಪ

ಅವೈಜ್ಞಾನಿಕ ಕಾಮಗಾರಿಯಿಂದ ಸಮಸ್ಯೆ

ಅಲ್ಲದೆ ರಸ್ತೆ ಉದ್ಘಾಟನೆಗೊಂಡು ಎರಡೂವರೆ ವರ್ಷಗಳು ಕಳೆದರೂ ಹೆದ್ದಾರಿಯ ಸರ್ವೀಸ್​ ರಸ್ತೆಯ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ನಡೆದಿರುವ ಕಾಮಗಾರಿಯೂ ಅವೈಜ್ಞಾನಿಕವಾಗಿದೆ. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಇರಬೇಕಿದ್ದ ಸಿಸಿ ಕ್ಯಾಮರಾಗಳನ್ನು ಕೂಡ ಅಳವಡಿಸಲಾಗಿಲ್ಲ. ಬೀದಿ ದೀಪಗಳು ಇಲ್ಲದಿರುವ ಜೊತೆಗೆ, ಪೊಲೀಸರ ಗಸ್ತು ಕೂಡ ಇಲ್ಲದೇ ಇರುವುದು ಕಳ್ಳರಿಗೆ ವರದಾನವಾಗಿದೆ. ಇದನ್ನೇ ಬಂಡವಾಳಮಾಡಿಕೊಂಡು ಪ್ರಯಾಣಿಕರ ಸುಲಿಗೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us