AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಊಟ ಮಾಡುತ್ತಿದ್ದಾಗಲೇ ನೌಕರ ಸಾವು, ಜನಸ್ಪಂದನ ‌ಮುಗಿಸಿ ಬರುತ್ತಿದ್ದ ಅಧಿಕಾರಿ ದುರಂತ ಅಂತ್ಯ

ಮನುಷ್ಯನಿಗೆ ಸಾವು ಯಾವಾಗ ಹೇಗೆ ಬರುತ್ತೆ ಎನ್ನುವುದೇ ಗೊತ್ತಿಲ್ಲ. ಹೊರಗಡೆ ಬಂದವರು ವಾಪಸ್ ಮನೆ ಸೇರುತ್ತೇವೆ ಎನ್ನುವುದೇ ಗ್ಯಾರಂಟಿ ಇಲ್ಲ. ನಿಜ ಚಾಮರಾಜನಗರದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ಅಧಿಕಾರಿ ದುರಂತ ಅಂತ್ಯಕಂಡಿದ್ದಾರೆ. ಇನ್ನು ರಾಮನಗರದಲ್ಲಿ ಕೆಲಸಕ್ಕೆ ತೆರಳಿದ್ದ ನೌಕರರೊಬ್ಬರು ಊಟ ಮಾಡುತ್ತಿರುವಾಗಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Jun 28, 2024 | 9:45 PM

Share

ರಾಮನಗರ/ಚಾಮರಾಜನಗರ, (ಜೂನ್ 28): ಕರ್ತವ್ಯದಲ್ಲಿದ್ದ ಡಿ ಗ್ರೂಪ್ ನೌಕರ ಊಟು ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಯೋಗ್ಯ ಕುಮಾರ್ (45) ಮೃತ ದುರ್ದೈವಿ. ಯೋಗ್ಯ ಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿ ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು(ಜೂನ್ 28) ಮಧ್ಯಾಹ್ನ ಊಟ ಮಾಡುವ ವೇಳೆ ಏಕಾಏಕಿ ಹೃದಯಾಘಾತದಿಂದ ಸಂಭವಿಸಿ ಕೆಳಕ್ಕೆ ಕುಸಿದು ಬಿದಿದ್ದಾರೆ. ಇದನ್ನೂ ಗಮನಿಸಿದ ಕೂಡಲೇ ಯೋಗ್ಯ ಕುಮಾರ್ ಅವರನ್ನು ಸಹಪಠಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟೋತ್ತಿಗೆ ಯೋಗ್ಯ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು.

ಇನ್ನು, ಯೋಗ್ಯ ಕುಮಾರ್ ಅವರು ಊಟ ಮಾಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾಲ ಯಾರನ್ನು ಬಿಡಲ್ಲ: ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಆರ್​ಟಿಓ!

ಊಟ ಮಾಡುವಾಗ ಹೃದಯಾಘಾತವಾಗಿರುವ ವಿಡಿಯೋ

ಜನಸ್ಪಂದನ ಕಾರ್ಯಕ್ರಮ ‌ಮುಗಿಸಿ ಬರುತ್ತಿದ್ದ ಅಧಿಕಾರಿ ಸಾವು

ಇನ್ನು ಚಾಮರಾಜನಗರದಲ್ಲಿ ಜನಸ್ಪಂದನ ಕಾರ್ಯಕ್ರಮ ‌ಮುಗಿಸಿ ಬರುತ್ತಿದ್ದ ಅಧಿಕಾರಿಗಳ ಬೈಕ್ ಅಪಘಾತಕ್ಕೀಡಾಗಿದೆ. ಇಂದು ಜೂನ್ 28) ಇಂದು ಗುಂಡ್ಲುಪೇಟೆ ತಾಲೂಕಿನ ಹಂಗಲ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುವ ವೇಳೆ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಆಹಾರ ಇಲಾಖೆ ನಿರೀಕ್ಷಕ ನಾಗೇಂದ್ರ (54) ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಹಾರ‌ ಇಲಾಖೆ ಶಿರಸ್ತಿದಾರ ರಮೇಶ್ ಗೆ ಗಂಭೀರ ಗಾಯಗಳಾಗಿವೆ. ಗುಂಡ್ಲುಪೇಟೆ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳು. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ನೀಡಿದ್ದು, ಗಾಯಾಳು ರಮೇಶ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:36 pm, Fri, 28 June 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ