ರಾಮನಗರ/ಚಾಮರಾಜನಗರ, (ಜೂನ್ 28): ಕರ್ತವ್ಯದಲ್ಲಿದ್ದ ಡಿ ಗ್ರೂಪ್ ನೌಕರ ಊಟು ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಯೋಗ್ಯ ಕುಮಾರ್ (45) ಮೃತ ದುರ್ದೈವಿ. ಯೋಗ್ಯ ಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿ ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು(ಜೂನ್ 28) ಮಧ್ಯಾಹ್ನ ಊಟ ಮಾಡುವ ವೇಳೆ ಏಕಾಏಕಿ ಹೃದಯಾಘಾತದಿಂದ ಸಂಭವಿಸಿ ಕೆಳಕ್ಕೆ ಕುಸಿದು ಬಿದಿದ್ದಾರೆ. ಇದನ್ನೂ ಗಮನಿಸಿದ ಕೂಡಲೇ ಯೋಗ್ಯ ಕುಮಾರ್ ಅವರನ್ನು ಸಹಪಠಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟೋತ್ತಿಗೆ ಯೋಗ್ಯ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು.
ಇನ್ನು, ಯೋಗ್ಯ ಕುಮಾರ್ ಅವರು ಊಟ ಮಾಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಾಲ ಯಾರನ್ನು ಬಿಡಲ್ಲ: ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಆರ್ಟಿಓ!
ಇನ್ನು ಚಾಮರಾಜನಗರದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ಅಧಿಕಾರಿಗಳ ಬೈಕ್ ಅಪಘಾತಕ್ಕೀಡಾಗಿದೆ. ಇಂದು ಜೂನ್ 28) ಇಂದು ಗುಂಡ್ಲುಪೇಟೆ ತಾಲೂಕಿನ ಹಂಗಲ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುವ ವೇಳೆ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಆಹಾರ ಇಲಾಖೆ ನಿರೀಕ್ಷಕ ನಾಗೇಂದ್ರ (54) ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಹಾರ ಇಲಾಖೆ ಶಿರಸ್ತಿದಾರ ರಮೇಶ್ ಗೆ ಗಂಭೀರ ಗಾಯಗಳಾಗಿವೆ. ಗುಂಡ್ಲುಪೇಟೆ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳು. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ನೀಡಿದ್ದು, ಗಾಯಾಳು ರಮೇಶ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:36 pm, Fri, 28 June 24