Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಡಿ. 2 ರಂದು ಕನಕಪುರದಲ್ಲಿ ಡಿಸಿಎಂ ಜನಸಂಪರ್ಕ ಸಭೆ

 ರಾಮನಗರ ಜಿಲ್ಲೆಯ ಕನಕಪುರ(Kanakapura) ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಡಿಕೆ ಶಿವಕುಮಾರ್ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಕನಕಪುರ ತಾಲ್ಲೂಕಿನ ಜನರು ತಮ್ಮ ಸಮಸ್ಯೆಗಳ ಬಗ್ಗೆ ಡಿಸಿಎಂ ಅವರಿಗೆ ಅಹವಾಲು ಸಲ್ಲಿಸಬಹುದು. ಜೊತೆಗೆ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದು ಈ ಸಭೆಯ ಉದ್ದೇಶವಾಗಿದೆ.

ರಾಮನಗರ: ಡಿ. 2 ರಂದು ಕನಕಪುರದಲ್ಲಿ ಡಿಸಿಎಂ ಜನಸಂಪರ್ಕ ಸಭೆ
ಡಿಕೆ ಶಿವಕುಮಾರ್​ ಜನ ಸಂಪರ್ಕ ಸಭೆ
Follow us
Malatesh Jaggin
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 30, 2023 | 6:30 PM

ಬೆಂಗಳೂರು, ನ.30: ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮದ ಬೆನ್ನಲ್ಲೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು​ ಜನ ಸಂಪರ್ಕ ಸಭೆ(Public Relations Meeting)ಗೆ ಪ್ಲಾನ್ ಮಾಡಿದ್ದಾರೆ. ಅದರಂತೆ ಡಿಸೆಂಬರ್​ 2, ಶನಿವಾರ ಬೆಳಗ್ಗೆ 10.30 ರಿಂದ ಸಂಜೆ 5.00 ಗಂಟೆವರೆಗೆ  ರಾಮನಗರ ಜಿಲ್ಲೆಯ ಕನಕಪುರ(Kanakapura) ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಕನಕಪುರ ತಾಲ್ಲೂಕಿನ ಜನರು ತಮ್ಮ ಸಮಸ್ಯೆಗಳ ಬಗ್ಗೆ ಡಿಸಿಎಂ ಅವರಿಗೆ ಅಹವಾಲು ಸಲ್ಲಿಸಬಹುದು. ಜೊತೆಗೆ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದು ಈ ಸಭೆಯ ಉದ್ದೇಶವಾಗಿದೆ. ಇನ್ನು ಈ ವೇಳೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ಜನರ ಸಮಸ್ಯೆಗಳ ಪರಿಹಾರಕ್ಕೆ ನೆರವಾಗಲಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ (ನ.27) ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದರು. ಬೆಳಗ್ಗೆ 9.30ಕ್ಕೆ ಜನತಾ ದರ್ಶನ ಶುರು ಮಾಡಿದ್ದ ಅವರು ಇಡೀ ದಿನ ಜನರ ಸಮಸ್ಯೆ, ಸಂಕಷ್ಟಗಳನ್ನು ಆಲಿಸಿದ್ದಾರೆ. ಜನರ ಅನುಕೂಲಕ್ಕಾಗಿ 20 ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು. ಅದರಂತೆ ಬರೊಬ್ಬರಿ 3500 ಸಾವಿರ ಅರ್ಜಿಗಳು ಬಂದಿತ್ತು. ಜೊತೆಗೆ ಅವುಗಳ ಇತ್ಯರ್ಥಕ್ಕೆ 15 ದಿನಗಳ ಗಡುವು ನೀಡಿದ್ದರು.

ಇದನ್ನೂ ಓದಿ:ಆಡಳಿತ ಯಂತ್ರಕ್ಕೆ ಚುರುಕು: ವಾರಕ್ಕೊಮ್ಮೆ ಜನ ಸಂಪರ್ಕ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಜನ ಸ್ಪಂದನ ಮೆಚ್ಚಿದ್ದ ಹೆಚ್​ಡಿ ಕುಮಾರಸ್ವಾಮಿ

ಇನ್ನು ಎಲ್ಲ ಇಲಾಖೆಯ ಅಧಿಕಾರಿಗಳನ್ನು ಕರೆಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮ  ನಡೆಸಿದ್ದು, ನಿಜಕ್ಕೂ ಅಭಿನಂದನೀಯ, ಕನಿಷ್ಟ ಈಗಲಾದರೂ ಅವರಿಗೆ ಜನರ ಸಮಸ್ಯೆಗಳು ಮತ್ತು ಆಡಳಿತ ಯಂತ್ರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದು ಅರ್ಥವಾಗಿರುತ್ತದೆ. ನಾವು ಎಲ್ಲವನ್ನೂ ಟೀಕಿಸುವುದಿಲ್ಲ, ಸರಿಯಾದ ಕ್ರಮವನ್ನು ಅಭಿನಂದಿಸಬೇಕಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:10 pm, Thu, 30 November 23

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ