AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Mysuru Expressway: ಸಾವಿನ ಹೆದ್ದಾರಿಯಾಗುತ್ತಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ

ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಪ್ರಯಾಣಿಸಿದರೆ ಪ್ರಯಾಣ ಸಮಯ ಕಡಿಮೆಯಾಗುತ್ತದೆ ಎಂದು ಪ್ರಯಾಣಿಸುವ ಪ್ರಯಾಣಿಕರು ತಮ್ಮ ಆಯುಷ್ಯವನ್ನೇ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ.

Bengaluru Mysuru Expressway: ಸಾವಿನ ಹೆದ್ದಾರಿಯಾಗುತ್ತಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ
TV9 Web
| Edited By: ಆಯೇಷಾ ಬಾನು|

Updated on: Jun 18, 2023 | 1:12 PM

Share

ರಾಮನಗರ: ದುಬಾರಿ ಟೋಲ್‌ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ(Bengaluru Mysuru expressway) ಈಗ ಸಾವಿನ ಹೆದ್ದಾರಿಯಾಗುತ್ತಿದೆ. ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಪ್ರಯಾಣಿಸಿದರೆ ಪ್ರಯಾಣ ಸಮಯ ಕಡಿಮೆಯಾಗುತ್ತದೆ ಎಂದು ಪ್ರಯಾಣಿಸುವ ಪ್ರಯಾಣಿಕರು ತಮ್ಮ ಆಯುಷ್ಯವನ್ನೇ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಜನವರಿಯಿಂದ ಇಲ್ಲಿಯವರೆಗೂ 105 ಜನ ಪ್ರಾಣ ಕಳೆದುಕೊಂಡಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ 50, ಮಂಡ್ಯ ಜಿಲ್ಲೆಯಲ್ಲಿ 55 ಜನ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು 190 ಜನರಿಗೆ ಗಾಯಗಳಾಗಿವೆ. ಸದಾ ಒಂದಿಲ್ಲೊಂದು ವಿವಾದದಿಂದ ಖ್ಯಾತಿಗಳಿಸಿರೋ ನೂತನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಅಪಘಾತ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ನೆನ್ನೆ(ಜೂನ್ 17) ಇದೇ ವಿಚಾರವನ್ನ ದಿಶಾ ಸಭೆಯಲ್ಲಿ ಸಂಸದ ಡಿಕೆ ಸುರೇಶ್ ಪ್ರಸ್ತಾಪ ಮಾಡಿದ್ದರು. ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಪಿಡಿಗೆ ತರಾಟೆ ತೆಗೆದುಕೊಂಡು ಎಚ್ಚರಿಕೆ ನೀಡಿದ್ದರು. ಹೆದ್ದಾರಿ‌ ವೈಜ್ಞಾನಿಕವಾಗಿ ಇದೀಯಾ ಅಥವಾ ಇಲ್ಲವಾ ಹೆದ್ದಾರಿಯಲ್ಲಿ ಬ್ಲಾಕ್ ಸ್ಫಾಟ್ ಗಳು ಇವೆ. ಕೇಂದ್ರ ಸರ್ಕಾರ ಮುಚ್ಚಿ ಹಾಕಿಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಗರಂ ಆಗಿದ್ದರು. ಆಗ ಎನ್​ಹೆಚ್​ಎಐ ಅಧಿಕಾರಿ ಪೊಲೀಸರ ಜೊತೆ ಗೂಡಿ ಸಮಸ್ಯೆ ಬಗೆಹರಿಸುವ ಭರವಸೆ‌ ನೀಡಿದ್ರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ

ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಮಾ.13 ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದರು. ಗಂಟೆಗೆ 100 ರಿಂದ 120 ಕಿಲೋ ಮೀಟರ್ ವೇಗದಲ್ಲಿ ವಾಹನಗಳು ಚಲಿಸುವಂತೆ ಎಕ್ಸ್‌ಪ್ರೆಸ್‌ವೇ ವಿನ್ಯಾಸಗೊಳಿಸಲಾಗಿದ್ದರೂ ಅಪಘಾತ ತಡೆಗೆ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಸರಿಯಾಗಿ ಅಳವಡಿಸದೇ ಇರುವುದು ಅಪಘಾತ, ಸಾವು-ನೋವುಗಳಿಗೆ ಕಾರಣವಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್