Bengaluru Mysuru Expressway: ಸಾವಿನ ಹೆದ್ದಾರಿಯಾಗುತ್ತಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ

| Updated By: ಆಯೇಷಾ ಬಾನು

Updated on: Jun 18, 2023 | 1:12 PM

ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಪ್ರಯಾಣಿಸಿದರೆ ಪ್ರಯಾಣ ಸಮಯ ಕಡಿಮೆಯಾಗುತ್ತದೆ ಎಂದು ಪ್ರಯಾಣಿಸುವ ಪ್ರಯಾಣಿಕರು ತಮ್ಮ ಆಯುಷ್ಯವನ್ನೇ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ.

Bengaluru Mysuru Expressway: ಸಾವಿನ ಹೆದ್ದಾರಿಯಾಗುತ್ತಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ
Follow us on

ರಾಮನಗರ: ದುಬಾರಿ ಟೋಲ್‌ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ(Bengaluru Mysuru expressway) ಈಗ ಸಾವಿನ ಹೆದ್ದಾರಿಯಾಗುತ್ತಿದೆ. ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಪ್ರಯಾಣಿಸಿದರೆ ಪ್ರಯಾಣ ಸಮಯ ಕಡಿಮೆಯಾಗುತ್ತದೆ ಎಂದು ಪ್ರಯಾಣಿಸುವ ಪ್ರಯಾಣಿಕರು ತಮ್ಮ ಆಯುಷ್ಯವನ್ನೇ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಜನವರಿಯಿಂದ ಇಲ್ಲಿಯವರೆಗೂ 105 ಜನ ಪ್ರಾಣ ಕಳೆದುಕೊಂಡಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ 50, ಮಂಡ್ಯ ಜಿಲ್ಲೆಯಲ್ಲಿ 55 ಜನ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು 190 ಜನರಿಗೆ ಗಾಯಗಳಾಗಿವೆ. ಸದಾ ಒಂದಿಲ್ಲೊಂದು ವಿವಾದದಿಂದ ಖ್ಯಾತಿಗಳಿಸಿರೋ ನೂತನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಅಪಘಾತ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ನೆನ್ನೆ(ಜೂನ್ 17) ಇದೇ ವಿಚಾರವನ್ನ ದಿಶಾ ಸಭೆಯಲ್ಲಿ ಸಂಸದ ಡಿಕೆ ಸುರೇಶ್ ಪ್ರಸ್ತಾಪ ಮಾಡಿದ್ದರು. ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಪಿಡಿಗೆ ತರಾಟೆ ತೆಗೆದುಕೊಂಡು ಎಚ್ಚರಿಕೆ ನೀಡಿದ್ದರು. ಹೆದ್ದಾರಿ‌ ವೈಜ್ಞಾನಿಕವಾಗಿ ಇದೀಯಾ ಅಥವಾ ಇಲ್ಲವಾ
ಹೆದ್ದಾರಿಯಲ್ಲಿ ಬ್ಲಾಕ್ ಸ್ಫಾಟ್ ಗಳು ಇವೆ. ಕೇಂದ್ರ ಸರ್ಕಾರ ಮುಚ್ಚಿ ಹಾಕಿಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಗರಂ ಆಗಿದ್ದರು. ಆಗ ಎನ್​ಹೆಚ್​ಎಐ ಅಧಿಕಾರಿ ಪೊಲೀಸರ ಜೊತೆ ಗೂಡಿ ಸಮಸ್ಯೆ ಬಗೆಹರಿಸುವ ಭರವಸೆ‌ ನೀಡಿದ್ರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ

ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಮಾ.13 ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದರು. ಗಂಟೆಗೆ 100 ರಿಂದ 120 ಕಿಲೋ ಮೀಟರ್ ವೇಗದಲ್ಲಿ ವಾಹನಗಳು ಚಲಿಸುವಂತೆ ಎಕ್ಸ್‌ಪ್ರೆಸ್‌ವೇ ವಿನ್ಯಾಸಗೊಳಿಸಲಾಗಿದ್ದರೂ ಅಪಘಾತ ತಡೆಗೆ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಸರಿಯಾಗಿ ಅಳವಡಿಸದೇ ಇರುವುದು ಅಪಘಾತ, ಸಾವು-ನೋವುಗಳಿಗೆ ಕಾರಣವಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ