ತಾನು ಸಿಎಂ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ: ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಬಾರ್ ಕೌನ್ಸಿಲ್ ಅಧ್ಯಕ್ಷ

ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್​ಐ 40 ವಕೀಲರ ವಿರುದ್ಧ ಎಫ್​ಐಆರ್ ದಾಖಲಿಸಿರುವ ಬಗ್ಗೆ ಇಂದು ಅಧಿವೇಶನದಲ್ಲಿ ಸರ್ಕಾರವನ್ನು ವಿಪಕ್ಷ ಬಿಜೆಪಿ ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡರು. ಆದರೂ ಸರ್ಕಾರ ಪ್ರತಿಭಟನೆಗೆ ಮಣಿಯಲಿಲ್ಲ. ಈ ಬಗ್ಗೆ ಆಕ್ರೋಶ ಹೊರಹಾಕಿದ ಬಾರ್ ಕೌನ್ಸಿಲ್ ಅಧ್ಯಕ್ಷ ವಿಶಾಲ್ ರಘು, ಗೃಹಸಚಿವರ ಮೇಲೆ ಬಹಳ ವಿಶ್ವಾಸವಿತ್ತು, ಡಿಕೆ ಶಿವಕುಮಾರ್ ಭಯಕ್ಕೆ ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ತಾನು ಸಿಎಂ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ: ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಬಾರ್ ಕೌನ್ಸಿಲ್ ಅಧ್ಯಕ್ಷ
ಡಿಕೆ ಶಿವಕುಮಾರ್
Edited By: Rakesh Nayak Manchi

Updated on: Feb 20, 2024 | 9:01 PM

ರಾಮನಗರ, ಫೆ.20: ತಾನು ಮುಖ್ಯಮಂತ್ರಿ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ ಎಂದು ಬಾರ್ ಕೌನ್ಸಿಲ್ (Bar Council) ಅಧ್ಯಕ್ಷ ವಿಶಾಲ್ ರಘು ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಆಕ್ರೋಶ ಹೊರಹಾಕಿದರು. ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್​ಐ 40 ವಕೀಲರ ವಿರುದ್ಧ ಎಫ್​ಐಆರ್ ದಾಖಲಿಸಿರುವ ಬಗ್ಗೆ ಇಂದು ಅಧಿವೇಶನದಲ್ಲಿ ಸರ್ಕಾರವನ್ನು ವಿಪಕ್ಷ ಬಿಜೆಪಿ (BJP) ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡರು. ಆದರೂ ಸರ್ಕಾರ ಪ್ರತಿಭಟನೆಗೆ ಮಣಿಯಲಿಲ್ಲ.

ವಿಧಾನಸಭೆಯಲ್ಲಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆಯಾಗಿದರೂ ಯಾವುದೇ ನಿರ್ಣಯಕ್ಕೆ ಸರ್ಕಾರ ಬಾರದ ಹಿನ್ನೆಲೆ ಆಕ್ರೋಶ ಹೊರಹಾಕಿದ ವಿಶಾಲ್ ರಘು, ರೀ ಉಪಮುಖ್ಯಮಂತ್ರಿಗಳೇ.., ನಾಳೆ‌ ನಿಮ್ಮ ಮಗನೂ ವಕಾಲತ್ತಿಗೆ ಬರುತ್ತಾರೆ. ಅವರು ನಮ್ಮ ಫ್ಯಾಮಲಿಗೆ ಬರುತ್ತಾರೆ. ವಕೀಲರ ಬಗ್ಗೆ ಇಷ್ಟು ಅಸಡ್ಡೆ ತೋರುತ್ತೀರಾ? ಒಬ್ಬ ಪಿಎಸ್​ಐ ಅಮಾನತು ಮಾಡಲು ಆಗುತ್ತಿಲ್ಲವೇ? ಇದರ ಪರಿಣಾಮ ಬೀರಲಿದೆ. ಗೃಹಸಚಿವರ ಮೇಲೆ ಬಹಳ ವಿಶ್ವಾಸವಿತ್ತು, ಡಿಕೆ ಶಿವಕುಮಾರ್ ಭಯಕ್ಕೆ ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ವಕೀಲರ ವಿರುದ್ಧ ಎಫ್​ಐಆರ್; ಪಿಎಸ್​ಐ ಅಮಾನತಿಗೆ ಸದನದಲ್ಲಿ ವಿಪಕ್ಷ ಬಿಗಿಪಟ್ಟು; ಪರಮೇಶ್ವರ್ ಹೇಳಿದ್ದೇನು?

ತಾನು ಮುಖ್ಯಮಂತ್ರಿ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಬಾಯಿಯನ್ನೂ ಮುಚ್ಚಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ ವಿಶಾಲ್ ರಘು, ಪಿಎಸ್​ಐ ಮೇಲೆ ಯಾಕಿಷ್ಟು ಪ್ರೀತಿ? ಯಾಕಂದರೆ ಅವನು ಶಾಸಕರ ಕೆಲಸಗಳನ್ನೆಲ್ಲಾ ನೋಡಿಕೊಳ್ಳುತ್ತಿದ್ದ ಎಂದರು.

ವಕೀಲರಿಂದ ಬೆಂಗಳೂರು ಚಲೋ

ರಾಮನಗರ ಜಿಲ್ಲಾಧಿಕಾರಿ, ಎಸ್​ಪಿ ವಿರುದ್ಧವೂ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ ವಿಶಾಲ್ ರಘು, ಪ್ರಕರಣವನ್ನು ನಾವು ಇಷ್ಟಕ್ಕೆ ನಿಲ್ಲಿಸುವುದಿಲ್ಲ, ನಾಡಿದ್ದು ಬೆಂಗಳೂರು ಚಲೋ ಮಾಡುತ್ತೇವೆ ಎಂದು ಹೇಳಿದರು. ಸದನದಲ್ಲಿ ಇಂದು ಏನೋ ಫಲಿತಾಂಶ ಬರಲಿದೆ ಎಂಬ ವಿಶ್ವಾಸವಿತ್ತು. ಆದರೆ ಸರ್ಕಾರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತೆ ಅಂದುಕೊಂಡಿರಲಿಲ್ಲ. ಏನ್ರೀ ತನಿಖೆ ಹಂತದಲ್ಲಿದೆ? ನಾವು ಕೊಲೆ ಅಥವಾ ರೇಪ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ರಾಮನಗರದವರು ಅಂತಾ ನಾವು ಹೇಳಿದರೆ, ಅವರು ಬೆಂಗಳೂರಿನವರು ಎಂದು ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ರಾಮನಗರ ಜಿಲ್ಲೆ ಜನ ಬುದ್ಧಿ ಕಲಿಸುತ್ತಾರೆ ಎಂದು ವಿಶಾಲ್ ರಘು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us