Mekedatu project: ಮೇಕೆದಾಟು ಯೋಜನೆಗೆ ಆಗ್ರಹಿಸಿ ಜ.31ರಂದು ದೆಹಲಿ ಚಲೋ, ಫೆ.1ಕ್ಕೆ ದೆಹಲಿಯ ಜಂತರ್​ ಮಂತರ್​​ ಬಳಿ ಪ್ರತಿಭಟನೆ

ಮೇಕೆದಾಟು ಯೋಜನೆಗೆ ಆಗ್ರಹಿಸಿ ಮೇಕೆದಾಟು ಹೋರಾಟಗಾರರ ಸಮಿತಿ ದೆಹಲಿ ಚಲೋ ನಿರ್ಧಾರ ಕೈಗೊಂಡಿದೆ. ಹೋರಾಟಕ್ಕೆ ವಿವಿಧ ಕನ್ನಡಪರ ಸಂಘಟನೆಗಳಿಂದ ಬೆಂಬಲ ವ್ಯಕ್ತಪಡಿಸಿವೆ ಎಂದು ಸಮಿತಿ ಹೇಳಿಕೊಂಡಿದೆ.

Mekedatu project: ಮೇಕೆದಾಟು ಯೋಜನೆಗೆ ಆಗ್ರಹಿಸಿ ಜ.31ರಂದು ದೆಹಲಿ ಚಲೋ, ಫೆ.1ಕ್ಕೆ ದೆಹಲಿಯ ಜಂತರ್​ ಮಂತರ್​​ ಬಳಿ ಪ್ರತಿಭಟನೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Jan 28, 2023 | 3:12 PM

ರಾಮನಗರ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡಿನ (Karnataka and Tamil Nadu) ನಡುವೆ ದಶಕಗಳ ಕಾಲ ಹೊಗೆಯಾಡುತ್ತಿರುವ ಮೇಕೆದಾಟು ಯೋಜನೆ (Mekedatu project) ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 31ರಂದು ದೆಹಲಿ ಚಲೋಗೆ ನಿರ್ಧಾರ ಮಾಡಲಾಗಿದೆ ಎಂದು ಮೇಕೆದಾಟು ಹೋರಾಟಗಾರರ ಸಮಿತಿ ರಾಮನಗರದಲ್ಲಿ ಹೇಳಿಕೆ ನೀಡಿದೆ. ದೆಹಲಿ ಚಲೋ ಕೈಗೊಂಡು ಯೋಜನೆ ಅನುಷ್ಠಾನಗೊಳಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿ ಫೆಬ್ರವರಿ 1ರಂದು ದೆಹಲಿಯ ಜಂತರ್ ಮಂತರ್​ ಬಳಿ ಪ್ರತಿಭಟನೆ ನಡೆಸಲಾಗುತ್ತದೆ. ನಂತರ ರಾಷ್ಟ್ರಪತಿಯವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸುತ್ತೇವೆ. ನಮ್ಮ ಹೋರಾಟಕ್ಕೆ ವಿವಿಧ ಕನ್ನಡಪರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ ಎಂದಿದೆ.

ಪರಿಶೀಲನೆಯ ನಂತರ ಮಾತನಾಡಿದ ಸಿಡಬ್ಲ್ಯುಎಂಎ ಅಧ್ಯಕ್ಷ ಸೌಮಿತ್ರ ಕುಮಾರ್ ಹಲ್ದಾರ್, ಕುಡಿಯುವ ನೀರಿನ ಉದ್ದೇಶಕ್ಕಾಗಿ ಮೇಕೆದಾಟು ಎಂಬಲ್ಲಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಯೋಜಿಸಿದೆ, ಅದರ ನಂತರ ತಮಿಳುನಾಡು ಕರ್ನಾಟಕದ ಯೋಜನೆಗಳ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ಇದನ್ನೂ ಓದಿ: Suburban Railway: ಬೆಂಗಳೂರು ಉಪನಗರ ರೈಲು ಯೋಜನೆಗೆ ಕೊನೆಗೂ ಸಿಕ್ಕಿತು ವೇಗ; 4ನೇ ಕಾರಿಡಾರ್ ಕಾಮಗಾರಿಗೆ ಟೆಂಡರ್

ಈ ನಡುವೆ, ತಮಿಳುನಾಡು ಮತ್ತು ಕರ್ನಾಟಕದ ನಡುವೆ ವಿವಾದಕ್ಕೆ ಕಾರಣವಾಗಿರುವ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶವನ್ನು ಅನುಸರಿಸುವುದಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೇಳಿದೆ. ತಮಿಳುನಾಡು ಪಿಡಬ್ಲ್ಯೂಡಿ ಅಧಿಕಾರಿಗಳ ಜೊತೆ ಸಿಡಬ್ಲ್ಯೂಎಂಎ ಅಧಿಕಾರಿಗಳ ತಂಡವು ಪುದುಚೇರಿ-ತಮಿಳುನಾಡು ಗಡಿಯಲ್ಲಿ ಸಿಡಬ್ಲ್ಯೂಎಂಎ ಸ್ಥಾಪಿಸಿದ ಗೇಜಿಂಗ್ ಸ್ಟೇಷನ್‌ಗೆ ಭೇಟಿ ನೀಡಿ ಕಾವೇರಿ ಜಲಾನಯನ ಪ್ರದೇಶದ ಇತರ ಪ್ರದೇಶಗಳನ್ನು ಪರಿಶೀಲಿಸಿದ ನಂತರ ಈ ಹೇಳಿಕೆ ಬಂದಿದೆ.

ವಿಷಯವು ಈಗ ಸುಪ್ರೀಂಕೋರ್ಟ್​ನಲ್ಲಿ ಇರುವುದರಿಂದ ಕೋರ್ಟ್ ಏನು ಆದೇಶ ನೀಡುತ್ತದೆಯೋ ಅದನ್ನು ಪಾಲಿಸುತ್ತೇವೆ. ಒಂದು ವೇಳೆ, ಕೋರ್ಟ್ ನಮಗೆ ಅಧಿಕಾರ ನೀಡಿದರೆ ಪ್ರಾಧಿಕಾರವು ವಿವಾದ ಹೊಂದಿರುವ ರಾಜ್ಯಗಳೊಂದಿಗೆ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ ಎಂದು ಸಿಡಬ್ಲ್ಯುಎಂಎ ಅಧ್ಯಕ್ಷ ಸೌಮಿತ್ರ ಕುಮಾರ್ ಹಲ್ದಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು