AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ: ವಿವಾದಕ್ಕೀಡಾದ ಕಾಂಗ್ರೆಸ್​ ಶಾಸಕರೊಬ್ಬರ ಪರೋಕ್ಷ ಹೇಳಿಕೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯವಾಗಿ ಹಲವು ಲೆಕ್ಕಾಚಾರಗಳು ನಡೆಯುತ್ತಿವೆ. ವೋಟ್ ಹಾಕಿದ ಬೂತ್ ಗಳಲ್ಲಿ ಅಭಿವೃದ್ಧಿ,ಲೀಡ್ ಬಾರದ ಕಡೆ ಅಭಿವೃದ್ಧಿ ಇಲ್ಲ ಎನ್ನುವ ಅರ್ಥದಲ್ಲಿ ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದ್ದು, ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ: ವಿವಾದಕ್ಕೀಡಾದ ಕಾಂಗ್ರೆಸ್​ ಶಾಸಕರೊಬ್ಬರ ಪರೋಕ್ಷ ಹೇಳಿಕೆ
ಶಾಸಕ ಹೆಚ್.ಸಿ ಬಾಲಕೃಷ್ಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on: Oct 12, 2023 | 7:19 AM

Share

ರಾಮನಗರ (ಅಕ್ಟೋಬರ್.12): ಜೆಡಿಎಸ್- ಬಿಜೆಪಿ ಮೈತ್ರಿ ಬೆನ್ನಲೇ ಕಾಂಗ್ರೆಸ್ ಸಹ ಲೋಕಸಭಾ ಚುನಾವಣೆಗೆ (Loksabha Elections 2024) ಭರ್ಜರಿ ತಯಾರಿ ನಡೆಸಿದೆ. ಇದರ ಮಧ್ಯೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ (HC Balakrishna) ಅವರು ಇದೀಗ ಹೇಳಿಕೆಯೊಂದನ್ನು ನೀಡಿ ಭಾರೀ ಚರ್ಚೆಗೆ ಗ್ರಾಸವಾಗುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಹೌದು.. ಕಾಂಗ್ರೆಸ್ ಗೆ ವೋಟ್ ಹಾಕೋ ಊರುಗಳಿಗೆ ಮಾತ್ರ ಕೆಲಸ ಮಾಡುತ್ತೇವೆ. ವೋಟ್ ಹಾಕದೇ ಇರುವವರ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ವೋಟ್ ಹಾಕಿದ ಬೂತ್ ಗಳಲ್ಲಿ ಅಭಿವೃದ್ಧಿ,ಲೀಡ್ ಬಾರದ ಕಡೆ ಅಭಿವೃದ್ಧಿ ಇಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದು, ವಿವಾದ ಸೃಷ್ಟಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ಐದು ವರ್ಷ ನಮ್ಮ ಸರ್ಕಾರ ಇರುತ್ತೆ. ಬೂತ್ ಲೆಕ್ಕಾಚಾರದ ಮೇಲೆ ಎಲೆಕ್ಷನ್ ಆಗುತ್ತೆ. ಯಾವ್ ಬೂತ್ ನಲ್ಲಿ ಹೆಚ್ಚು ನಮಗೆ ವೋಟ್ ಬರುತ್ತೋ ಅಲ್ಲಿ ಕೆಲಸ ಮಾಡುತ್ತೇವೆ. ವೋಟ್ ಹಾಕದಿದ್ರೆ ಅಂತಹ ಬೂತ್ ಗಳ ಬಗ್ಗೆ ಆಲೋಚನೆ ಮಾಡ್ತೀವಿ. ಹಾಗಾಗಿ ಇದನ್ನ ಜನ ಯೋಚನೆ ಮಾಡಬೇಕು ಎಂದು ಪರೋಕ್ಷವಾಗಿ ಕಾಂಗ್ರೆಸ್ ಗೆ ಮತಹಾಕದಿದ್ರೆ ಅಭಿವೃದ್ಧಿ ಮಾಡಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪತಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು ಕಾಂಗ್ರೆಸ್ ಸೇರ್ಪಡೆಗೆ ಮುಂದಾದ ಬಿಜೆಪಿ ಮಾಜಿ ಶಾಸಕಿ

ಇನ್ನೂ ಶಾಸಕ ಬಾಲಕೃಷ್ಣರ ಈ ಸ್ಟೇಟ್ ಮೆಂಟ್ ಗೆ ಸಾರ್ವಜನಿಕವಾಗಿ ಸಾಕಷ್ಟು ಆಕ್ರೋಶ ವ್ಯಕ್ತವಾಗ್ತಿದ್ದು, ಮಾಗಡಿ ಜೆಡಿಎಸ್ ನ ಮಾಜಿ ಶಾಸಕ ಎ. ಮಂಜುನಾಥ್ ಕಿಡಿಕಾರಿದ್ದಾರೆ. ವೋಟ್ ಹಾಕಿದ್ರೆ ಮಾತ್ರ ಅಭಿವೃದ್ಧಿ, ವೋಟ್ ಹಾಕದ ಬೂತ್ ಗಳಲ್ಲಿ ಅಭಿವೃದ್ಧಿ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ ಅಲ್ವಾ ಏನ್ರಿ ನೀವು ರಾಜಕಾರಣಿ, ಶಾಸಕರಾಗಿ ಮಾತನಾಡುವ ಮಾತೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಶಾಸಕರ ಈ ಬೇಜಾವಾಬ್ದಾರಿ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ದ್ವೇಷದ ರಾಜಕಾರಣಕ್ಕೆ ಶಾಸಕರು ಮುಂದಾದ್ರಾ ಎಂಬ ಪ್ರಶ್ನೆಯೂ ಎದ್ದಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು