ನನ್ನನ್ನು ಮತ್ತೆ ಜೈಲಿಗೆ ಹಾಕಿಸಲು ಷಡ್ಯಂತ್ರ ಮಾಡ್ತಿದ್ದಾರೆ; ಆದ್ರೆ ನಾನು ಹೆದರುವುದಿಲ್ಲ: ಹುಟ್ಟೂರಿನಲ್ಲಿ ಗುಡುಗಿದ ಡಿಕೆ ಶಿವಕುಮಾರ್

DK Shivakumar: ಕೇಂದ್ರ ಸರ್ಕಾರ ಮತ್ತೊಮ್ಮೆ ದಬ್ಬಾಳಿಕೆ ಮಾಡ್ತಿದ್ದಾರೆ. ಮತ್ತೊಮ್ಮೆ ಜೈಲಿಗೆ ಹಾಕಿಸಬೇಕು ಅಂತಾ ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಈ ಷಡ್ಯಂತ್ರಕ್ಕೆ ಹೆದರೋದಿಲ್ಲ ಎಂದು ಹುಟ್ಟೂರಿನಲ್ಲಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ನನ್ನನ್ನು ಮತ್ತೆ ಜೈಲಿಗೆ ಹಾಕಿಸಲು ಷಡ್ಯಂತ್ರ ಮಾಡ್ತಿದ್ದಾರೆ; ಆದ್ರೆ ನಾನು ಹೆದರುವುದಿಲ್ಲ: ಹುಟ್ಟೂರಿನಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Edited By:

Updated on: Jan 09, 2022 | 9:41 PM

ರಾಮನಗರ: ನನ್ನನ್ನು ಮತ್ತೆ ಜೈಲಿಗೆ ಹಾಕಿಸಬೇಕೆಂದು ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಷಡ್ಯಂತ್ರಕ್ಕೆ ಹೆದರುವುದಿಲ್ಲ. ಇಡೀ ಊರಿನಲ್ಲಿ ಇಂಥ ಸಂಭ್ರಮ ನಾನು ನೋಡಿರಲಿಲ್ಲ. ನಿಮ್ಮಲ್ಲೆರಿಗೂ ನನ್ನ ಧನ್ಯವಾದಗಳು. ನಾನು ಜೈಲಿಗೆ ಹೋದಾಗ ನಿಮ್ಮ ಅಭಿಮಾನ ಬೆಂಬಲ ಮರೆಯೋಕೆ ಆಗಲ್ಲ. ಡಿ.ಕೆ. ಶಿವಕುಮಾರ್ ದೊಡ್ಡಆಲಹಳ್ಳಿಯ ಕನಕಪುರದವನು ಅಂತಾರೆ ಎಂದು ಸ್ವಗ್ರಾಮ ದೊಡ್ಡಆಲಹಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾವನಾತ್ಮಕ ಭಾಷಣ ಮಾಡಿದ್ದಾರೆ.

ತಿಹಾರ ಜೈಲಿಗೆ ಹೋಗಿದ್ದಕ್ಕೆ ಈ ಗಡ್ಡ ಬಿಟ್ಟಿದ್ದೇನೆ. ನೀವೆ ಇದಕ್ಕೆ ಮುಕ್ತಿ ಕೊಡಬೇಕು. ನಾನು ನಿಮ್ಮ ಮಗ. ನೀವೇ ಡಿ.ಕೆ. ಶಿವಕುಮಾರ್. ಕೇಂದ್ರ ಸರ್ಕಾರ ಮತ್ತೊಮ್ಮೆ ದಬ್ಬಾಳಿಕೆ ಮಾಡ್ತಿದ್ದಾರೆ. ಮತ್ತೊಮ್ಮೆ ಜೈಲಿಗೆ ಹಾಕಿಸಬೇಕು ಅಂತಾ ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಈ ಷಡ್ಯಂತ್ರಕ್ಕೆ ಹೆದರೋದಿಲ್ಲ ಎಂದು ಹುಟ್ಟೂರಿನಲ್ಲಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ಬಸವರಾಜ ಬೊಮ್ಮಾಯಿಯವರೇ ಎಲ್ಲರ ಲಿಸ್ಟ್ ಕಳುಹಿಸ್ತೀನಿ ಜೈಲಿಗೆ ಕಳುಹಿಸಿ. ನಿಮಗೆ ಹಾಲು ಕುಡಿದಷ್ಟು ಸಂತೋಷವಾಗುತ್ತೆ. ತಮಿಳುನಾಡಿನವರದ್ದು ರಾಜಕೀಯ ದ್ವೇಷ. ನನ್ನ ಹೋರಾಟಕ್ಕೆ ಎರಡು ಪಕ್ಷದವರು ಷಡ್ಯಂತ್ರ ಮಾಡ್ತಿದ್ದಾರೆ. ಜೆಡಿಎಸ್, ಬಿಜೆಪಿಯವರು ನಾಡಿನದ್ರೋಹಿಗಳೋ ಅನ್ನೋದನ್ನ ನೀವೆ ತೀರ್ಮಾನ ಮಾಡಿ. ನಾನು ನಾಡಿನ ಬದುಕಿಗೋಸ್ಕರ, ನೀರಿಗೋಸ್ಕರ ಹೋರಾಟ ಮಾಡ್ತಿದ್ದೇನೆ. ನನ್ನೆಲ್ಲ ತಾಯಂದಿರ ಪಾದಗಳಿಗೆ ನಮಸ್ಕಾರ ಹೇಳಿ ನನ್ನ ಭಾಷಣ ಮುಗಿಸುತ್ತೇನೆ ಎಂದು ಡಿಕೆಶಿ ಮಾತನಾಡಿದ್ದಾರೆ.

YouTube video player

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಯಲ್ಲಿ ದುನಿಯಾ ವಿಜಯ್ ಭಾಗಿ; ​ನೀರಿಗಾಗಿ ಹೋರಾಟಕ್ಕೆ ‘ಸಲಗ’ ಬೆಂಬಲ

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ: ಸಿಎಂ ಬಸವರಾಜ ಬೊಮ್ಮಾಯಿ

TV9 Web

TV9 Kannada

Read More
Loading...
Unable to load recommendations.
Follow Us