Aishwarya Amartya Hegde Marriage | ಪುತ್ರಿ ವಿವಾಹಕ್ಕೆ ಕ್ಷೇತ್ರದ ಮತದಾರರಿಗೆ ಗಿಫ್ಟ್ ನೀಡಿ ಆಶೀರ್ವಾದ ಕೋರಿದ ಡಿ.ಕೆ.ಶಿವಕುಮಾರ್

Aishwarya And Amartya Hedge Marriage: ಕನಕಪುರ ಕ್ಷೇತ್ರದ ಎಲ್ಲರನ್ನೂ ಕರೆದು ಮದುವೆ ಮಾಡುವ ಹುಮ್ಮಸ್ಸಿನಲ್ಲಿ ಇದ್ದ ಡಿ.ಕೆ.ಶಿವಕುಮಾರ್ ಅವರ ಆಸೆ, ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಈಡೇರಲಿಲ್ಲ.

Aishwarya Amartya Hegde Marriage | ಪುತ್ರಿ ವಿವಾಹಕ್ಕೆ ಕ್ಷೇತ್ರದ ಮತದಾರರಿಗೆ ಗಿಫ್ಟ್ ನೀಡಿ ಆಶೀರ್ವಾದ ಕೋರಿದ ಡಿ.ಕೆ.ಶಿವಕುಮಾರ್
ಕನಕಪುರ ಜನತೆಗೆ ಉಡುಗೊರೆಯನ್ನು ನೀಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು
Follow us
sandhya thejappa
|

Updated on:Feb 14, 2021 | 2:12 PM

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಪುತ್ರಿ ವಿವಾಹ ಹಿನ್ನೆಲೆ ಕನಕಪುರ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಭರ್ಜರಿ ಉಡುಗೊರೆ ನೀಡಿ, ವಧು-ವರರಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದರು. ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕಾಫಿ ಡೇ ಮಾಲೀಕರಾಗಿದ್ದ ದಿವಂಗತ ಸಿದ್ದಾರ್ಥ್​ ಹೆಗ್ಡೆ ಅವರ ಮಗ ಅಮರ್ತ್ಯ ಹೆಗ್ಡೆ ಇಂದು (ಫೆಬ್ರವರಿ 14) ಸಪ್ತಪದಿ ತುಳಿದಿದ್ದಾರೆ. ಅಂದಹಾಗೆ ಅಮರ್ತ್ಯ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಮೊಮ್ಮಗ.

ಪುತ್ರಿಯ ವಿವಾಹದ ಹಿನ್ನೆಲೆಯಲ್ಲಿ ಕನಕಪುರ ಕ್ಷೇತ್ರದ ಮತದಾರರಿಗೆ ಡಿ.ಕೆ.ಶಿವಕುಮಾರ್ ಬಟ್ಟೆ ಹಾಗೂ ಸ್ವೀಟ್ ಬಾಕ್ಸ್ ಉಡುಗೊರೆ ನೀಡಿದ್ದಾರೆ. ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಮಹಿಳಾ ಮತದಾರರಿಗೆ ರೇಷ್ಮೆ ಸೀರೆ ಹಾಗೂ ಪುರುಷ ಮತದಾರರಿಗೆ ಶರ್ಟ್ ಹಾಗೂ ಪ್ಯಾಂಟ್ ಪೀಸ್ ಜೊತೆಗೆ ಸ್ವೀಟ್ ಬಾಕ್ಸ್ ನೀಡಿದ್ದಾರೆ.

ಕನಕಪುರ ಕ್ಷೇತ್ರದ ಎಲ್ಲರನ್ನು ಕರೆದು ಮದುವೆ ಮಾಡುವ ಹುಮ್ಮಸ್ಸಿನಲ್ಲಿ ಇದ್ದ ಡಿ.ಕೆ.ಶಿವಕುಮಾರ್ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತರು ಹಾಗೂ ರಾಜಕೀಯ ಮುಖಂಡರಿಗೆ ಮಾತ್ರ ಸೀಮಿತ ಮಾಡಿ ತಮ್ಮ ಪುತ್ರಿ ವಿವಾಹ ನೆರವೇರಿಸಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಕನಕಪುರ ಕ್ಷೇತ್ರದಲ್ಲಿ ಆರತಕ್ಷತೆ ನೆರವೇರಿಸಿ ಕ್ಷೇತ್ರದ ಮತದಾರರಿಗೆ ಸಿಹಿ ಊಟ ಹಾಕಿಸಲು ಮುಂದಾಗಿದ್ದಾರೆ. ಕಳೆದ ಎರಡು ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆಗಳಿಗೂ ಉಡುಗೊರೆಯನ್ನು ನೀಡಿದ್ದಾರೆ.

ಕನಕಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಲಕ್ಷದ 20 ಸಾವಿರ ಮತದಾರರು ಇದ್ದು, ಎಲ್ಲರಿಗೂ ಉಡುಗೊರೆ ನೀಡಿ ಅಲ್ಲಿಂದಲೇ ಆಶೀರ್ವಾದ ನೀಡುವಂತೆ ಮನವಿ ಮಾಡಿದ್ದಾರೆ.

ಕನಕಪುರ ಜನತೆಗೆ ಸಿಹಿ ಮತ್ತು ಬಟ್ಟೆ ವಿತರಣೆ.

ಆಶೀರ್ವಾದ ಕೋರಿರುವ ಡಿ.ಕೆ.ಶಿವಕುಮಾರ್.

ಐಶ್ವರ್ಯ ಮತ್ತು ಅಮರ್ಥ್ಯ ಹೆಗ್ಡೆ ಮದುವೆ ಫೋಟೋಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ: Aishwarya Amartya Hegde Marriage | ಪ್ರೇಮಿಗಳ ದಿನದಂದು ಸಪ್ತಪದಿ ತುಳಿದ ಡಿ.ಕೆ. ಶಿವಕುಮಾರ್ ಪುತ್ರಿ; ಐಶ್ವರ್ಯಾ-ಅಮರ್ತ್ಯ ಹೆಗ್ಡೆ ಮದುವೆಯ ಸುಂದರ ಕ್ಷಣಗಳು

Published On - 2:10 pm, Sun, 14 February 21

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ