ರಾಮನಗರ ಜಿಲ್ಲಾ‌ ಕಾರಗೃಹ ಸ್ಥಳಾಂತರ ಮಾಡಲು ಜಿಲ್ಲಾಧಿಕಾರಿಗೆ ಸೂಚಿಸಿದ ಡಿಸಿಎಂ ಡಿಕೆ ಶಿವಕುಮಾರ್

ರಾಮನಗರ ಜಿಲ್ಲಾ‌ ಕಾರಗೃಹ ಸ್ಥಳಾಂತರ ಮಾಡಲು ಜೈಲಿನ‌ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್​ಗೆ ಸೂಚನೆ ನೀಡಿದ್ದು, ರಾಮನಗರ-ಚನ್ನಪಟ್ಟಣ ಮಧ್ಯೆ ನೂತನ ಕಾರಗೃಹ ನಿರ್ಮಾಣಕ್ಕೆ ಸೂಚಿಸಿದ್ದಾರೆ.

ರಾಮನಗರ ಜಿಲ್ಲಾ‌ ಕಾರಗೃಹ ಸ್ಥಳಾಂತರ ಮಾಡಲು ಜಿಲ್ಲಾಧಿಕಾರಿಗೆ ಸೂಚಿಸಿದ ಡಿಸಿಎಂ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 16, 2024 | 7:03 PM

ರಾಮನಗರ, ಮಾ.16: ರಾಮನಗರ ಜಿಲ್ಲಾ‌ ಕಾರಗೃಹ ಸ್ಥಳಾಂತರ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್​ಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿರುವ ಜಿಲ್ಲಾ ಕಾರಗೃಹಕ್ಕೆ ಸೇರಿದ ಜಾಗವನ್ನ ಇತರ ಅಭಿವೃದ್ಧಿ ಕಾರ್ಯಕ್ಕೆ ಬಳಸಲು ಮತ್ತು ರಾಮನಗರ-ಚನ್ನಪಟ್ಟಣ ಮಧ್ಯೆ ನೂತನ ಕಾರಗೃಹ ನಿರ್ಮಾಣಕ್ಕೆ ಸೂಚಿಸಿದ್ದಾರೆ.

300‌ಕ್ಕೂ ಅಧಿಕ ಖೈದಿಗಳಿರುವ ರಾಮನಗರ ಜೈಲು

ಕೂಡಲೇ‌ ಕಾರಗೃಹ ಬೇರೆಡೆ‌ ಶಿಫ್ಟ್ ಮಾಡುವ ಉದ್ದೇಶದ ಹಿನ್ನಲೆ ಜಾಗಕ್ಕಾಗಿ ಹುಡುಕಾಟ ನಡೆಸಿದ್ದಾರೆ. 4 ರಿಂದ 5 ಎಕರೆ ಜಾಗ ಸಿಕ್ಕ ಬಳಿಕ ರಾಮನಗರ ಕಾರಗೃಹ ಶಿಫ್ಟ್ ಆಗಲಿದೆ. ಇನ್ನು 2007‌ರಲ್ಲಿ ನಿರ್ಮಾಣವಾಗಿರುವ ರಾಮನಗರ ಬಂಧಿಖಾನೆಯಲ್ಲಿ ಬರೊಬ್ಬರಿ 300‌ಕ್ಕೂ ಅಧಿಕ ಖೈದಿಗಳಿದ್ದಾರೆ. ಈ ಖೈದಿಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಜೈಲಿನ‌ ಅಧಿಕಾರಿಗಳು ಕೂಡ ಜೈಲು ಶಿಫ್ಟ್​ ಮಾಡುವಂತೆ ಮನವಿ ಸಲ್ಲಿಸಿದ್ದರು. ಅದರಂತೆ ಇದೀಗ ಡಿಸಿಎಂ ಕೂಡ ಇದಕ್ಕೆ ಅಸ್ತು ಎಂದಿದ್ದು, ಸಾಮಾನ್ಯ ಜೈಲಿನಿಂದ ಸೆಂಟ್ರಲ್ ಜೈಲ್ ಮಾಡಲು ಜಾಗಕ್ಕಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ:ನೀರಿನ ಮೌಲ್ಯ ತಿಳಿಸಲು ʼನೀರು ಉಳಿಸಿ ಬೆಂಗಳೂರು ಬೆಳೆಸಿ’ ಅಭಿಯಾನಕ್ಕೆ ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ತಳ್ಳೋ ಗಾಡಿಯಲ್ಲಿ ಆಕಸ್ಮಿಕ ಬೆಂಕಿ, ಆರಿಸೋಕೆ ಹೋಗಿ ಮೈಕೈ ಸುಟ್ಟುಕೊಂಡ ಸವಾರ

ಬೆಂಗಳೂರು: ಫುಟ್​ಪಾತ್​ನಲ್ಲಿ ನಿಂತಿದ್ದ ತಳ್ಳುವ ಗಾಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಆರಿಸುವುದಕ್ಕೆ ಹೋಗಿ ಸವಾರ ಮೈಕೈ ಸುಟ್ಟುಕೊಂಡಿರುವ ಘಟನೆ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಗೊಂಡ ಶೇಕ್ ನವೀದ್ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಳ್ಳಹಳ್ಳಿ ಜಂಕ್ಷನ್ ಕಡೆಯಿಂದ ಹೆಗಡೆ ನಗರ ಕಡೆ ಬೈಕ್​ನಲ್ಲಿ ಹೋಗ್ತಿದ್ದ ನವೀದ್, ಈ ವೇಳೆ ಫುಟ್ ಪಾತ್​ನಲ್ಲಿದ್ದ ತಳ್ಳೋಗಾಡಿಯೊಂದರಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಅದನ್ನು ಆರಿಸೋಕೆ ಮುಂದಾಗಿದ್ದ ವೇಳೆ ಅವಘಡ ಸಂಭವಿಸಿದೆ. ಈ ಕುರಿತು ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Sat, 16 March 24

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?