ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 10, 2023 | 5:38 PM

ರಾಮನಗರ, ನ.10: ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್(DK Shivakumar)​ ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ‘ರಾಮನಗರ(Ramanagara)ವನ್ನು ಬೆಂಗಳೂರು ಬದಲು ಡೆಲ್ಲಿಯೆಂದು ಹೆಸರಿಡಿ, ಯಾರು ಬೇಡ ಅಂದವರು, ಆಗ ಇನ್ನೂ ವಿಶ್ವಮಟ್ಟದಲ್ಲಿ ಹೆಸರಾಗುತ್ತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಟಾಂಗ್ ಕೊಟ್ಟಿದ್ದಾರೆ.

ಇಂದು(ನ.10) ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಇದನ್ನೂ ಓದಿ:ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್

ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆಗೆ ಪ್ರಯತ್ನ ಎಂದಿದ್ದ ಡಿಸಿಎಂ

ಬಿಡದಿ ಭಾಗದಲ್ಲಿ ಲಕ್ಷಾಂತರ ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಹಿನ್ನಲೆ ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಹೌದು, ಬಿಡದಿವರೆಗೂ ಮೆಟ್ರೋ ವಿಸ್ತರಿಸಲು ಯೋಚಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ​ಹೇಳಿದ್ದರು. ಬಿಡದಿಯಲ್ಲಿ ನಡೆದ ಟೊಯೋಟಾ‌ ತರಬೇತಿ ಕೇಂದ್ರ ವಿಸ್ತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ‘ನಾನು ಬರೀ ಉದ್ಘಾಟನೆ ಮಾಡಲಿಕ್ಕೆ ಬಂದಿಲ್ಲ. ಬಿಡದಿಗೆ ಗಿಫ್ಟ್ ಕೊಡುವ ಆಸೆಯಿಂದ ಈ ಭಾಗಕ್ಕೂ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Fri, 10 November 23

ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​