ಚನ್ನಪಟ್ಟಣ ಬೈ ಎಲೆಕ್ಷನ್ಗೆ ನಾನೇ ಅಭ್ಯರ್ಥಿ; ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಖಾಲಿ ಇರುವ ಶಾಸಕ ಸ್ಥಾನಕ್ಕೆ ಎಲ್ಲಿಲ್ಲದ ಪೈಪೋಟಿ ಶುರುವಾಗಿದ್ದು, ಬೊಂಬೆನಾಡು ಚನ್ನಪಟ್ಟಣ ಉಪ ಚುನಾವಣೆ ಈ ಬಾರಿ ಹೈವೋಲ್ಟೇಜ್ ಪಡೆದುಕೊಂಡಿದೆ. ಇದೀಗ ಕಾಂಗ್ರೆಸ್ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ, ಆ.15: ಚನ್ನಪಟ್ಟಣ ಬೈ ಎಲೆಕ್ಷನ್(Channapatna by-election)ಗೆ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಹೇಳಿದ್ದಾರೆ. ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು.
ಈ ದೇವಸ್ಥಾನಕ್ಕೆ ಬರಬೇಕೆಂದು ಬಹಳಷ್ಟು ದಿನದಿಂದ ಅಂದುಕೊಂಡಿದ್ದೆ. ಇದು ಇತಿಹಾಸವಿರುವ ಜಾಗ, ಹಾಗಾಗಿ ಬಂದು ಪೂಜೆ ಮಾಡಿದ್ದು, ಆ ಸೌಭಾಗ್ಯ ಸಿಕ್ಕಿದೆ. ಇದೇ ವೇಳೆ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ವಿಚಾರದ ಚರ್ಚೆ ವಿಚಾರ, ‘ಯಾವ ಸಚಿವರು ಏನೂ ಮಾತನಾಡಲ್ಲ, ಏನೂ ಇಲ್ಲ. ಅನುಕೂಲ ಇರುವವರಿಗೂ ಕೊಡುತ್ತಿದ್ದಾರೆ. ಅದಕ್ಕೆ ಅವರು ಬೇಡ ಎಂದು ಹೇಳುತ್ತಿದ್ದಾರೆ. ಅದರ ಬಗ್ಗೆ ಮುಂದೆ ಯೋಚನೆ ಮಾಡ್ತೇವೆ , ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ:ರಾಜ್ಯದ ಉಪ ಮುಖ್ಯಮಂತ್ರಿಯ ಧ್ಯಾನವೆಲ್ಲ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿ ಮೇಲಿರುವಂತಿದೆ!
ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ
ಚನ್ನಪಟ್ಟಣದಲ್ಲಿ ಇಂದು ಧ್ವಜಾರೋಹಣ ವಿಚಾರವಾಗಿ ಮಾತನಾಡಿ, ‘ನಾನು ರಾಮನಗರದಲ್ಲೂ 5 ವರ್ಷ ಧ್ವಜಾರೋಹಣ ಮಾಡಿದ್ದೇನೆ , ಅಧಿಕಾರಿಗಳನ್ನ ಕೇಳಿದ್ದೆ, ಅವರು ಬಂದಿಲ್ಲ ಅಂದರು, ನಮ್ಮ ಡ್ಯೂಟಿ ನಾವು ಮಾಡಿದ್ದೇವೆ. ಜೊತೆಗೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:25 pm, Thu, 15 August 24