AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಹೆಚ್​ಡಿ ಕುಮಾರಸ್ವಾಮಿ: ಡಿಕೆ ಶಿವಕುಮಾರ್ ವಾಗ್ದಾಳಿ

DK Shivakumar vs HD Kumaraswamy: ರಾಮನಗರದಲ್ಲಿ ನಡೆಯುತ್ತಿರುವ ವಕೀಲರ ಪ್ರತಿಭಟನೆ ಹಾಗೂ ಇತರ ಸಂಘರ್ಷಗಳಿಗೆ ಸಂಬಂಧಿಸಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ಮುಂದುವರಿದಿದೆ. ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಕುಮಾರಸ್ವಾಮಿ ಎಂದಿ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಹೆಚ್​ಡಿ ಕುಮಾರಸ್ವಾಮಿ: ಡಿಕೆ ಶಿವಕುಮಾರ್ ವಾಗ್ದಾಳಿ
ಹೆಚ್​ಡಿ ಕುಮಾರಸ್ವಾಮಿ & ಡಿಕೆ ಶಿವಕುಮಾರ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Feb 21, 2024 | 11:55 AM

Share

ಕನಕಪುರ, ಫೆಬ್ರವರಿ 21: ರಾಮನಗರದಲ್ಲಿ (Ramanagara) ಗಲಾಟೆ ಮಾಡಿಸುತ್ತಿರುವುದೇ ಜೆಡಿಎಸ್ (JDS) ಪಕ್ಷ ಮತ್ತು ಅದರ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಗಂಭೀರ ಆರೋಪ ಮಾಡಿದ್ದಾರೆ. ವಕೀಲರ ಪ್ರತಿಭಟನೆ, ದಲಿತರ ಪ್ರತಿಭಟನೆ ಹಾಗೂ ಇತರ ಸಂಘರ್ಷಗಳ ಬಗ್ಗೆ ಕನಕಪುರದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಅಲ್ಲಿ (ರಾಮನಗರದಲ್ಲಿ) ನಡೆಯುತ್ತಿರುವ ಎಲ್ಲ ಗಲಾಟೆಗಳಿಗೆ ಕುಮಾರಸ್ವಾಮಿ ಅವರೇ ನೇರ ಕಾರಣ ಎಂದು ಹೇಳಿದ್ದಾರೆ.

ಈ ಮೂಲಕ, ರಾಮನಗರದಲ್ಲಿ ಡಿಕೆ ಸಹೋದರರಿಂದ ಅಶಾಂತಿ ಸೃಷ್ಟಿ ಎಂಬ ಜೆಡಿಎಸ್ ನಾಯಕರ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ.

ರಾಮನಗರ ಪಿಎಸ್ಐ ಸಸ್ಪೆಂಡ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ನಾನೂ ಕೂಡ ಹೇಳಿದ್ದೆ. ಶಾಸಕರೂ ಕಾನೂನು ಪ್ರಕಾರ ಕೈಗೊಳ್ಳಿ ಎಂದಿದ್ದರು. ಈ ಬಗ್ಗೆ ತನಿಖೆ ಮಾಡಿ ತಪ್ಪಿದ್ರೆ ಕ್ರಮ ತಗೊಳ್ಳಿ ಎಂದು ನಾವು ಅಧಿಕಾರಿಗಳಿಗೆ ಹೇಳಿದ್ದೆವು. ಇಲ್ಲಿ ಯಾರಿಗೂ ಅನ್ಯಾಯ ಆಗಬಾರದು ಅಂತ ಹೇಳಿದ್ದೆ. ಈ ವಿಚಾರದಲ್ಲಿ ಬಿಜೆಪಿ – ಜೆಡಿಎಸ್​​ನವರು ರಾಜಕೀಯ ಮಾಡ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ, ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿಯವರು ಅಶಾಂತಿ ಸೃಷ್ಟಿಸುವುದು ಮಾಮೂಲಿ. ಕೋಮು ವಿಚಾರಗಳನ್ನು ತೆಗೆದುಕೊಂಡು ರಾಜಕೀಯ ಮಾಡುತ್ತಾರೆ. ಬಿಜೆಪಿಯವರಿಗೆ ಅಲ್ಪಸಂಖ್ಯಾತರನ್ನು ಕಂಡರೆ ಆಗುವುದಿಲ್ಲ. ಸ್ಥಳೀಯ ಶಾಸಕ, ಅಧಿಕಾರಿ ಅಲ್ಪಸಂಖ್ಯಾತ ಸಮುದಾಯದವರು ಆಗಿರುವುದರಿಂದ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲೇ ಹೇಳಿದ್ದರಲ್ಲವೇ, ಮೈನಾರಿಟಿ ಅಧಿಕಾರಿ ಬೇಡ ಎಂಬುದಾಗಿ ಎಂದು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಮನಗರ ವಕೀಲರ ಪ್ರತಿಭಟನೆ: ವಿವಾದದ ಕಿಡಿ ಹೊತ್ತಿಕೊಂಡಿದ್ದೆಲ್ಲಿಂದ? ಇಲ್ಲಿದೆ ಪೂರ್ಣ ವಿವರ

ರಾಮನಗರದಲ್ಲಿ ವಕೀಲರ ಪ್ರತಿಭಟನೆ ಹಾಗೂ ಒಟ್ಟಾರೆ ಬೆಳವಣಿಗೆ ಸಂಬಂಧ, ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನು ಬುಧವಾರ ಬೆಳಗ್ಗೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಮನಗರದ 40 ವಕೀಲರ ವಿರುದ್ಧ ತನ್ವೀರ್ ಹುಸೇನ್​ ಎಫ್​ಐಆರ್​ ದಾಖಲಿಸಿದ್ದರು. ಎಫ್​ಐಆರ್ ರದ್ದು ಮಾಡುವಂತೆ ಆಗ್ರಹಿಸಿ ವಕೀಲರು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ನಂತರ ರಾಜಕೀಯ ಆಯಾಮ ಪಡೆದುಕೊಂಡಿತ್ತು.

ಬಿಜೆಪಿಯವರು ನಮ್ಮನ್ನು ಕಟ್ಟಿಹಾಕಲಿ ನೋಡೋಣ: ಡಿಕೆಶಿ ಸವಾಲು

ಲೋಕಸಭಾ ಚುನಾವಣೆಗೆ ತಯಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾವು ಕಳೆದ ಚುನಾವಣೆ ಮುಗಿದ ಮರುದಿನದಿಂದಲೇ ಕೆಲಸ ಆರಂಭಿಸಿದ್ದೇವೆ. ನಮ್ಮನ್ನು ಕಟ್ಟಿ ಹಾಕುತ್ತೇವೆ ಎನ್ನುತ್ತಿದ್ದಾರಲ್ಲ, ಕಟ್ಟಿಹಾಕಲಿ ನೋಡೋಣ ಎಂದು ಸವಾಲು ಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:54 am, Wed, 21 February 24

Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ