ಚನ್ನಪಟ್ಟಣ ಬೈ ಎಲೆಕ್ಷನ್​ ಅಖಾಡದಲ್ಲಿ ಮತ್ತೊಂದು ಬೆಳವಣಿಗೆ: ಡಿಕೆಶಿ ಸ್ಪರ್ಧೆ ಇಲ್ಲ: ಮತ್ಯಾರು..?

ಕರ್ನಾಟಕದಲ್ಲಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗುವ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆಗಳು ಭಾರಿ ಚುರುಕು ಪಡೆದುಕೊಂಡಿವ. ಚುನಾವಣೆ ದಿನಾಂಕ ನಿಗದಿಯಾಗುವ ಮುನ್ನವೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ ಚನ್ನಪಟ್ಟಣದಲ್ಲಿ ಓಡಾಟ ನಡೆಸಿದ್ದು, ಮತದಾರರನ್ನು ವಿಶ್ವಾಸಕ್ಕೆ ಪಡೆಯಲು ಕಸರತ್ತು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತಾವೇ ಸ್ಪರ್ಧೆ ಮಾಡುವುದಾಗಿ ಖುದ್ದು ಡಿಕೆ ಶಿವಕುಮಾರ್ ಸುಳಿವು ಕೊಟ್ಟಿದ್ದರು. ಆದ್ರೆ, ಇದೀಗ ವರಸೆ ಬದಲಿಸಿದ್ದು, ಡಿಕೆಶಿ ಬದಲಿಗೆ ಮತ್ತೋರ್ವ ನಾಯಕ ಸ್ಪರ್ಧೆ ಮಾಡುವುದು ಖಚಿತವಾಗಿದೆ.

ಚನ್ನಪಟ್ಟಣ ಬೈ ಎಲೆಕ್ಷನ್​ ಅಖಾಡದಲ್ಲಿ ಮತ್ತೊಂದು ಬೆಳವಣಿಗೆ: ಡಿಕೆಶಿ ಸ್ಪರ್ಧೆ ಇಲ್ಲ: ಮತ್ಯಾರು..?
ಡಿಕೆ ಶಿವಕುಮಾರ್
Follow us
|

Updated on: Jul 02, 2024 | 9:50 PM

ರಾಮನಗರ, (ಜುಲೈ 02): ಎಚ್​ಡಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿರುವುದರಿಂದ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇದೀಗ ಬೈ ಎಲೆಕ್ಷನ್ ಎದುರಾಗಿದ್ದು, ಇದನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಐದಾರು ಬಾರಿ ಚನ್ನಪಟ್ಟಣಕ್ಕೆ ಭೇಟಿ ನೀಡಿದ್ದು, ಕ್ಷೇತ್ರದಾದ್ಯಂತ ಸುತ್ತಾಡಿ ಮತದಾರರನ್ನು ಸೆಳೆದಿಟ್ಟುಕೊಳ್ಳಲು ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲದೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವೇ ಸ್ಪರ್ಧೆ ಮಾಡುವುದಾಗಿ ಈ ಹಿಂದೆ ಸುಳಿವು ನೀಡಿದ್ದರು. ಆದ್ರೆ, ಇದೀಗ ಅವರು ವರಸೆ ಬದಲಿಸಿದ್ದು, ಬೇರೆಯವರು ಸ್ಪರ್ಧೆ ಮಾಡುವ ಬಗ್ಗೆ ಪರೋಕ್ಷವಾಗಿ ಹೇಳಿದ್ದಾರೆ. ಇಂದು (ಜುಲೈ 02) ಚನ್ನಪಟ್ಟಣದ ಬೈರಾಪಟ್ಟಣದಲ್ಲಿ ಮಾತನಾಡರುವ ಡಿಕೆಶಿ, ಯಾರೇ ಅಭ್ಯರ್ಥಿ ಆದರೂ ನನ್ನ ಮುಖ ನೋಡಿ ವೋಟ್ ಹಾಕಿ. ಕಾಂಗ್ರೆಸ್​ನಿಂದ ಯಾರೇ ಅಭ್ಯರ್ಥಿ ಆದರೂ ಮತ ಹಾಕಿ ಎಂದು ಸ್ಫೋಟಕ ಮಾತುಗಳನ್ನಾಡಿದ್ದಾರೆ. ಈ ಮೂಲಕ ತಾವು ಸ್ಪರ್ಧೆ ಮಾಡುವುದಿಲ್ಲ ಬೇರೆಯವರು ಸ್ಪರ್ಧೆ ಮಾಡುತ್ತಾರೆ ಅವರಿಗೆ ನನ್ನ ಮುಖ ನೋಡಿ ಮತ ನೀಡಿ ಎಂದು ಹೇಳಿದ್ದಾರೆ.

ಇಂದು ಚನ್ನಪಟ್ಟಣದ ಭೈರಾಪಟ್ಟಣದಲ್ಲಿದಲ್ಲಿ ಮಾತನಾಡಿರುವ ಡಿಕೆ ಶಿವಕುಮಾರ್, ಪ್ರತಿ ಜಿಲ್ಲೆಯಲ್ಲೂ ಜನಸ್ಪಂದನ ಕಾರ್ಯಕ್ರಮ ನಡೆಸಲು ಸಿಎಂ ಸೂಚನೆ ನೀಡಿದ್ದಾರೆ. ಅದರಂತೆ ಚನ್ನಪಟ್ಟಣದಲ್ಲಿ ನಾನು ವಿಶೇಷ ಆದ್ಯತೆ ನೀಡಿ ಕಾರ್ಯಕ್ರಮ ಮಾಡ್ತಿದ್ದೇನೆ. ಜನರ ಸಮಸ್ಯೆಗಳನ್ನ ಬಗೆಹರಿಸಿ ತೊಂದರೆ ತಪ್ಪಿಸಬೇಕು. ಅರ್ಜಿ ವಿಲೇವಾರಿಗೆ ಅಧಿಕಾರಿಗಳಿಗೆ ಟೈಂ ಪಿಕ್ಸ್ ಮಾಡ್ತಿದ್ದೇವೆ. ಶೀಘ್ರದಲ್ಲೇ ಜನರ ಜನರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕ್ಷೇತ್ರಕ್ಕೆ ಜಮೀರ್, ಕೃಷ್ಣಭೈರೇಗೌಡರು ಬರ್ತಾರೆ. ಇಲ್ಲಿ ರಿವ್ಯೂ ಮೀಟಿಂಗ್ ಮಾಡಿ ಸಮಸ್ಯೆ ಆಲಿಸುತ್ತಾರೆ. ಮತ್ತಷ್ಟು ಇಲಾಖೆ ಸಚಿವರು ಬಂದು ಅಹವಾಲು ಸ್ವೀಕರಿಸುತ್ತಾರೆ ಎಂದರು.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಸ್ಪರ್ಧಿಸಲ್ಲ: ಡಿಕೆಶಿ ರಾಜಕೀಯ ತಂತ್ರ ಬಿಚ್ಚಿಟ್ಟ ಜಿಟಿಡಿ

ಇನ್ನು ಇದೇ ವೇಳೆ ಚನ್ನಪಟ್ಟಣ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಯಾರೇ ಅಭ್ಯರ್ಥಿ ಆದರೂ ನನಗೆ ಓಟು ಹಾಕಿ. ಅಭ್ಯರ್ಥಿ ನಾನೇ ಆದರೂ ನಾಮಿನಿ ಇರ್ತಾರೆ. ನನಗೆ ಓಟು ಹಾಕಿ ಎಂದೇ ಜನರಲ್ಲಿ ಕೇಳುತ್ತೇನೆ. ಯಾರೇ ಅಭ್ಯರ್ಥಿ ಆದರೂ ನನ್ನ ಮುಖ ನೋಡಿ ಓಟು ಹಾಕಿ ಎಂದು ಮನವಿ ಮಾಡಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿರುವ ಡಿಕೆ ಶಿವಕುಮಾರ್ ಸಹೋದರ್ ಡಿಕೆ ಸುರೇಶ್, ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಚರ್ಚೆ ನಡೆದಿತ್ತು. ಆದ್ರೆ ಡಿಕೆ ಶಿವಕುಮಾರ್ ತಾವೇ ಸ್ಪರ್ಧೆ ಮಾಡುವುದಾಗಿ ಹೇಳಿ ಅದನ್ನು ಡೈವರ್ಟ್​ ಮಾಡಿದ್ದರು. ಬಳಿಕ ಡಿಕೆ ಶಿವಕುಮಾರ್ ಸ್ಪರ್ಧೆ ಮಾಡಲ್ಲ ಅವರ ಪುತ್ರಿ ಐಶ್ವರ್ಯ ಅವರನ್ನು ಕಣಕ್ಕಿಳಿಸುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಸುದ್ದಿ ಡಿಕೆಶಿಗೆ ಮುಟ್ಟುತ್ತಿದ್ದಂತೆಯೇ ನಮ್ಮ ಕುಟುಂಬದವರು ಯಾರು ರಾಜಕೀಯಕ್ಕೆ ಬರುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ ನೀಡಿದ್ದರು. ಇದೀಗ ಕಾಂಗ್ರೆಸ್​​ನಿಂದ ಯಾರೇ ಸ್ಪರ್ಧೆ ಮಾಡಲಿ ನನ್ನ ನೋಡಿ ಮತ ನೀಡಿ ಎಂದು ಹೇಳಿದ್ದಾರೆ. ಇದರೊಂದಿಗೆ ಡಿಕೆ ಶಿವಕುಮಾರ್ ಚನ್ನಪಟ್ಟಣ ಬೈ ಎಲೆಕ್ಷನ್​ಗೆ ಸ್ಪರ್ಧೆ ಮಾಡಲ್ಲ ಎನ್ನುವುದು ಸ್ಪಷ್ಟವಾಗಿದೆ. ಹಾಗಾದ್ರೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್​​ನಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದ್ದು, ಮಾಜಿ ಸಂಸದ ಡಿಕೆ ಸುರೇಶ್ ಅವರೇ ಸ್ಪರ್ಧೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಡಿಕೆಶಿ ಸ್ಪರ್ಧೆ ಮಾಡಲ್ಲ ಎಂದಿದ್ದ ಜಿಟಿಡಿ

ಹೌದು…ಡಿಕೆ ಶಿವಕುಮಾರ್ ಅವರು ಪರೋಕ್ಷವಾಗಿ ಯಾವೇ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿಕೊಂಡು ಕ್ಷೇತ್ರದಾದ್ಯಂತ ಸುತ್ತಾಡುತ್ತಿದ್ದರು. ಆದ್ರೆ, ಜೆಡಿಎಸ್​​ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಈ ಬಗ್ಗೆ ಮಾತನಾಡಿ, ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಸ್ಪರ್ಧೆ ಮಾಡಲ್ಲ. ಅವರದ್ದು ರಾಜಕೀಯ ತಂತ್ರಗಾರಿಕೆ ಅಷ್ಟೇ ಎಂದು ಭವಿಷ್ಯ ನುಡಿದ್ದರು.

ಅಲ್ಲದೇ ಡಿಕೆ ಶಿವಕುಮಾರ್ ಅವರು ತಮ್ಮ ಕುಟುಂಬದವರನ್ನು ನಿಲ್ಲಿಸುತ್ತಾರೆ ಅಂತಲೂ ಹೇಳಿದ್ದರು. ಹೀಗಾಗಿ ಚನ್ನಪಟ್ಟಣ ಬೈ ಎಲೆಕ್ಷನ್​ಗೆ ಕಾಂಗ್ರೆಸ್​ನಿಂದ ಡಿಕೆ ಸುರೇಶ್​ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದ್ದು, ಡಿಕೆ ಶಿವಕುಮಾರ್ ಸಹೋದರನಿಗಾಗಿ ಈಗಿನಿಂದಲೇ ಕ್ಷೇತ್ರದಲ್ಲಿ ಸುತ್ತಾಡಿ ಮತದಾರರ ಪ್ರೀತಿ ಗಿಟ್ಟಿಸಿಕೊಳ್ಳಲು ಮುಂದಾಗಿದ್ದಾರೆ.

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್