ರಾಮನಗರ: ವೇದಿಕೆಯಲ್ಲೇ ಬಿಜೆಪಿ- ಕಾಂಗ್ರೆಸ್ ನಾಯಕರ ಜಟಾಪಟಿ; ಅಶ್ವತ್ಥ ನಾರಾಯಣ ಫ್ಲೆಕ್ಸ್ ಹರಿದು ಆಕ್ರೋಶ!
ರಾಮನಗರ: ವೇದಿಕೆಯಲ್ಲೇ ಬಿಜೆಪಿ- ಕಾಂಗ್ರೆಸ್ ನಾಯಕರ ಜಟಾಪಟಿ

ರಾಮನಗರ: ವೇದಿಕೆಯಲ್ಲೇ ಬಿಜೆಪಿ- ಕಾಂಗ್ರೆಸ್ ನಾಯಕರ ಜಟಾಪಟಿ; ಅಶ್ವತ್ಥ ನಾರಾಯಣ ಫ್ಲೆಕ್ಸ್ ಹರಿದು ಆಕ್ರೋಶ!

Edited By:

Updated on: Jan 03, 2022 | 3:13 PM

ಫ್ಲೆಕ್ಸ್​ನಲ್ಲಿದ್ದ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಕಾಂಗ್ರೆಸ್ ಕಾರ್ಯಕರ್ತರು ಫ್ರತಿಭಟನೆ ನಡೆಸಿದ್ದಾರೆ. ರಾಮನಗರದ ಹೆದ್ದಾರಿಯಲ್ಲಿ ಹಾಕಿದ್ದ ಫ್ಲೆಕ್ಸ್ ಹರಿದು ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ವಿರುದ್ಧ ಘೋಷಣೆ ಕೂಗಿ ಕೈ ಕಾರ್ಯಕರ್ತರಿಂದ ಧರಣಿ ನಡೆಸಲಾಗಿದೆ.

YouTube video player

ರಾಮನಗರ: ಇಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ವ್ಯಕ್ತವಾಗಿದೆ. ಸಚಿವ ಡಾ. ಅಶ್ವತ್ಥ್ ನಾರಾಯಣ ಫ್ಲೆಕ್ಸ್ ಹರಿದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಫ್ಲೆಕ್ಸ್​ನಲ್ಲಿದ್ದ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಕಾಂಗ್ರೆಸ್ ಕಾರ್ಯಕರ್ತರು ಫ್ರತಿಭಟನೆ ನಡೆಸಿದ್ದಾರೆ. ರಾಮನಗರದ ಹೆದ್ದಾರಿಯಲ್ಲಿ ಹಾಕಿದ್ದ ಫ್ಲೆಕ್ಸ್ ಹರಿದು ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ವಿರುದ್ಧ ಘೋಷಣೆ ಕೂಗಿ ಕೈ ಕಾರ್ಯಕರ್ತರಿಂದ ಧರಣಿ ನಡೆಸಲಾಗಿದೆ.

ರಾಮನಗರದಲ್ಲಿ ಕಾರ್ಯಕ್ರಮ ವೇಳೆ ಸಚಿವ, ಸಂಸದರ ಗಲಾಟೆ ನಡೆದಿದೆ. ಡಾ.ಅಶ್ವತ್ಥ್ ನಾರಾಯಣ, ಸಂಸದ ಡಿ.ಕೆ.ಸುರೇಶ್ ಮಧ್ಯೆ ಗಲಾಟೆ ಉಂಟಾಗಿದೆ. ಸಚಿವ ಡಾ.ಅಶ್ವತ್ಥ್ ಭಾಷಣಕ್ಕೆ ಡಿ.ಕೆ.ಸುರೇಶ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ‘ನಮ್ಮ ಕಾಲದಲ್ಲೇ ಅಡಿಗಲ್ಲು, ನಮ್ಮ ಕಾಲದಲ್ಲೇ ಉದ್ಘಾಟನೆ’ ‘ನಮ್ಮ ಸರ್ಕಾರದಲ್ಲಿ ಬೇರೆ ಸರ್ಕಾರದ ರೀತಿ ಅಲ್ಲ’ ಎಂದು ಅಶ್ವತ್ಥ್ ನಾರಾಯಣ ಭಾಷನ ಮಾಡಿದ್ದಾರೆ. ನೀರಾವರಿ ಯೋಜನೆ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ನಮ್ಮ ಅಭಿವೃದ್ಧಿ ಮಾಡಿಕೊಳ್ಳುವುದನ್ನು ಮಾತ್ರ ಮಾಡಿಕೊಳ್ಳಲ್ಲ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಈ ವೇಳೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವ ಅಶ್ವತ್ಥ್ ನಾರಾಯಣ ಜತೆ ಡಿ.ಕೆ.ಸುರೇಶ್ ವಾಕ್ಸಮರ ನಡೆದಿದೆ.

ಅಶ್ವತ್ಥ್ ಬಳಿಯಿದ್ದ ಮೈಕ್ ಎಂಎಲ್​ಸಿ ರವಿ ಹಿಡಿದು ಎಳೆದಾಡಿದ್ದಾರೆ. ಏನು ತಪ್ಪಾಗಿದೆ ಎಂದು ಕೂಗೋದು, ಕೆಲಸದಲ್ಲಿ ತೋರಿಸಿ. ಕಾರ್ಯಕ್ರಮದಲ್ಲಿ ಗಲಾಟೆ ಮಾಡೋದಾ? ಎಂದು ಡಾ.ಅಶ್ವತ್ಥ್ ನಾರಾಯಣ ಪ್ರಶ್ನೆ ಮಾಡಿದ್ದಾರೆ. ನಾವು ಏನು ಮಾಡಿದ್ದೇವೆ ಎಂಬುದನ್ನು ತೋರಿಸುತ್ತೇವೆ. ಜಿಲ್ಲೆಗೆ ವಂಚನೆ ಮಾಡಲು ಬಂದಿಲ್ಲ. ಸಿಎಂ ಬಂದಾಗ ಅವರಿಗೆ ಅಗೌರವ ತೋರಿಸುತ್ತೀರಾ? ಸಿಎಂ ಸಹಕಾರ ಕೊಡಲು ಬಂದಿದ್ದಾರೆ, ರಾಜಕಾರಣಕ್ಕೆ ಅಲ್ಲ. ರಾಮನಗರ ಜಿಲ್ಲೆಯಲ್ಲಿ ನಮ್ಮ ಪ್ರತಿನಿಧಿ ಇಲ್ಲದಿದ್ದರೂ ಕೈಬಿಟ್ಟಿಲ್ಲ. ಜಿಲ್ಲೆಯನ್ನು ಅಭಿವೃದ್ಧಿಯಿಂದ ಕೈಬಿಟ್ಟಿಲ್ಲ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಸಚಿವ ಅಶ್ವತ್ಥ್ ಭಾಷಣ ವಿರೋಧಿಸಿ ವೇದಿಕೆಯಲ್ಲೇ ಧರಣಿ ನಡೆಸಲಾಗಿದೆ. ವೇದಿಕೆಯಲ್ಲೇ ಕುಳಿತು ಕೈ ಸಂಸದ ಡಿ.ಕೆ.ಸುರೇಶ್ ಧರಣಿ ಮಾಡಿದ್ದಾರೆ.

YouTube video player

ಇದನ್ನೂ ಓದಿ: ರಾಮನಗರ: ಸಿಎಂ ಸಮ್ಮುಖದಲ್ಲೇ ಅಶ್ವತ್ಥ ನಾರಾಯಣ, ಡಿಕೆ ಸುರೇಶ್ ವಾಕ್ಸಮರ; ವೇದಿಕೆಯಲ್ಲೇ ಧರಣಿ ನಡೆಸಿದ ಕಾಂಗ್ರೆಸ್!

ಇದನ್ನೂ ಓದಿ: ರಾಮನಗರದಲ್ಲಿ ಸಿಎಂ ಬೊಮ್ಮಾಯಿ ಮುಂದೆ ಡಿಕೆ ಡಿಕೆ ಎಂದು ಘೋಷಣೆ! ದಲಿತ ಮುಖಂಡರಿಂದ ಕಪ್ಪು ಪಟ್ಟಿ ಪ್ರದರ್ಶನ

Follow Us