ಬೆಂಗಳೂರು-ಮೈಸೂರು ಹೆದ್ದಾರಿ ಅವ್ಯವಸ್ಥೆ ಬಗ್ಗೆ ಸಚಿವ ನಿತಿನ್ ಗಡ್ಕರಿಗೆ ಮಾಹಿತಿ ನೀಡಿದ ಸಂಸದ ಡಿ.ಕೆ.ಸುರೇಶ್
ಸೆಪ್ಟೆಂಬರ್ 9ರ ಶುಕ್ರವಾರ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಡಿಕೆ ಸುರೇಶ್ ಬೆಂಗಳೂರು-ಮೈಸೂರು ಹೆದ್ದಾರಿ ಅವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ.
ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಭೇಟಿಯಾಗಿ ಮಾಹಿತಿ ನೀಡಿದ್ದೇನೆ ಎಂದು ರಾಮನಗರದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್(DK Suresh) ತಿಳಿಸಿದರು. ದಶಪಥ ರಸ್ತೆ ಅವೈಜ್ಞಾನಿಕವಾಗಿ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು.
ಸೆಪ್ಟೆಂಬರ್ 8ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನ ರಸ್ತೆ, ಟ್ರಾಫಿಕ್ ಬಗ್ಗೆ ಚರ್ಚೆ ನಡೆಸಿದ್ದರು. ಇದೇ ವೇಳೆ ಸೆಪ್ಟೆಂಬರ್ 9ರ ಶುಕ್ರವಾರ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಡಿಕೆ ಸುರೇಶ್ ಬೆಂಗಳೂರು-ಮೈಸೂರು ಹೆದ್ದಾರಿ ಅವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಇಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಜೊತೆಗೂಡಿ ಕೇಂದ್ರ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದೆನು. ಮಳೆಯಿಂದಾಗಿ ಹಾನಿಗೊಳಗಾದ ರಾಮನಗರ, ಚನ್ನಪಟ್ಟಣ ವ್ಯಾಪ್ತಿಯ ಅಸ್ತವ್ಯಸ್ತಗೊಂಡ ರಾಷ್ಟ್ರೀಯ ಹೆದ್ದಾರಿ ಬಗ್ಗೆ ಸಚಿವರೊಂದಿಗೆ ಪ್ರಸ್ತಾಪಿಸಿ ತುರ್ತು ದುರಸ್ತಿಗೆ ಮನವಿ ಮಾಡಿಕೊಂಡೆವು. pic.twitter.com/OQ48TarUEP
— DK Suresh (@DKSureshINC) September 9, 2022
ರಾಮನಗರ ಜಿಲ್ಲೆಯಲ್ಲಿ ಸುಮಾರು 250ರಿಂದ 300 ಕೋಟಿ ನಷ್ಟದ ಬಗ್ಗೆ ಜಿಲ್ಲಾಡಳಿತ ಸರಿಯಾಗಿ ಲೆಕ್ಕ ಮಾಡಿಲ್ಲ. ನಷ್ಟದ ಹೊಣೆಯನ್ನ ಸರ್ಕಾರವೇ ಹೊತ್ತು ಪರಿಹಾರ ನೀಡಬೇಕು. ರಸ್ತೆಯ ತಿರುವಿನಲ್ಲಿ ಅಪಘಾತಗಳು ಸಹಾ ಆಗುತ್ತಿವೆ. ಗ್ರಾಮಗಳ ಬಳಿ ಚರಂಡಿಗಳನ್ನ ಸಹಾ ಮುಚ್ಚಿದ್ದಾರೆ ಈ ಬಗ್ಗೆ ಮನವಿ ಸಹಾ ಮಾಡಿದ್ದೇನೆ ಎಂದು ಡಿಕೆ ಸುರೇಶ್ ತಿಳಿಸಿದರು. ಇನ್ನು ಪ್ರತಾಪ್ ಸಿಂಹ ಅನಗತ್ಯವಾಗಿ ಮಾತನಾಡುವುದು ಬೇಡ. ನಿಮ್ಮ ಎಲ್ಲಾ ವಿಚಾರಗಳನ್ನು ಜನರ ಮುಂದೆ ಇಡಿ. ನಾನು ಬರುತ್ತೇನೆ, ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಿ. ಪ್ರತಾಪ್ ಸಿಂಹರಿಂದ ಪಾಠ ಕಲಿಯುವ ಅವಶ್ಯಕತೆ ನನಗಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.
ಪ್ರಮುಖವಾಗಿ ರಾಷ್ಟ್ರೀಯ ಹೆದ್ದಾರಿ 209, 275 ಕ್ಕೆ ಸಂಬಂಧಿಸಿದಂತೆ ಅರ್ಧಕ್ಕೆ ನಿಂತ ಕಾಮಗಾರಿ ಪೂರ್ಣಗೊಳಿಸಲು, NHAI ಅವರು ಅವೈಜ್ಞಾನಿಕವಾಗಿ ಹೆದ್ದಾರಿ ನಿರ್ಮಾಣ ಮಾಡಿರುವುದರಿಂದ ಆಸುಪಾಸಿನ ರೈತರ ಜಮೀನು ಮತ್ತು ಗ್ರಾಮೀಣ ಭಾಗದ ಮನೆಗಳಿಗೆ ದೊಡ್ಡ ಮಟ್ಟದ ಹಾನಿಯಾಗಿದೆ. ಈ ಹಾನಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಸಚಿವರನ್ನು ಆಗ್ರಹಿಸಿದೆವು. pic.twitter.com/0vvW9VCn8d
— DK Suresh (@DKSureshINC) September 9, 2022
ಕನಕಪುರದಲ್ಲಿ ಹಾದುಹೋಗುವ ದಿಂಡಗಲ್-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ- 209ರಲ್ಲಿ ಸಂಚಾರದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರ್ಕಾವತಿ ನದಿ ಉದ್ದಕ್ಕೂ ಇರುವ ಸೇತುವೆಗೆ ಹೊಂದಿಕೊಂಡಂತೆ ದ್ವಿಪಥ ಸೇತುವೆ ನಿರ್ಮಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಆಗ್ರಹಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:10 pm, Sat, 10 September 22