AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ವಿಚಾರಕ್ಕೆ ಕಿರಿಕ್, ಬೆಂಗಳೂರಿನ ವ್ಯಕ್ತಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ ಯುವಕ!

ಪ್ರದೀಪ್ ಎಂಬುವವರ ನಾಯಿಗೆ ಕಾರು ಗುದ್ದಿದ್ದೇ ಇದಕ್ಕೆ ಹೇತುವಾಗಿದೆ. ಬೆಂಗಳೂರು ಮೂಲದ ವ್ಯಕ್ತಿ ಕಾರಿನಲ್ಲಿ ಹೋಗುತ್ತಿದ್ದಾಗ ನಾಯಿಗೆ ಡಿಕ್ಕಿ ಹೊಡೆಸಿದ್ದಾನೆ. ಈ ವಿಚಾರವಾಗಿ ಬೆಂಗಳೂರು ಮೂಲದ ವ್ಯಕ್ತಿಗೆ ಪ್ರದೀಪ್ ಸಿಡಿಗುಂಡಿನಂತೆ ಆವಾಜ್ ಹಾಕಿದ್ದಾನೆ.

ನಾಯಿ ವಿಚಾರಕ್ಕೆ ಕಿರಿಕ್, ಬೆಂಗಳೂರಿನ ವ್ಯಕ್ತಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ ಯುವಕ!
ನಾಯಿ ವಿಚಾರಕ್ಕೆ ಕಿರಿಕ್, ಬೆಂಗಳೂರಿನ ವ್ಯಕ್ತಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ ಯುವಕ!
TV9 Web
| Edited By: ಸಾಧು ಶ್ರೀನಾಥ್​|

Updated on:Dec 08, 2021 | 1:26 PM

Share

ರಾಮನಗರ: ನಾಯಿಯ ವಿಚಾರಕ್ಕೆ ಕಿರಿಕ್ ಮಾಡಿಕೊಂಡ ಬಿಸಿರಕ್ತದ ಯುವಕನೊಬ್ಬ ನೇರವಾಗಿ ವ್ಯಕ್ತಿಯೊಬ್ಬರ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಅದೃಷ್ಟವಷಾತ್ ಸ್ವಲ್ಪದರಲ್ಲೇ ಆ ವ್ಯಕ್ತಿ ಗುಂಡಿನ ದಾಳಿಯಿಂದ ಪಾರಾಗಿದ್ದಾರೆ! ಇದು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಪನಿಗೌಡನದೊಡ್ಡಿ ಗ್ರಾಮದಲ್ಲಿ ನಡೆದಿರುವ ಘಟನೆ. ಪ್ರದೀಪ್ ಎಂಬ ವ್ಯಕ್ತಿಯ ಮೇಲೆ ಗ್ರಾಮದ ಕಾರ್ತಿಕ್(24) ಎಂಬ ಯುವಕನಿಂದ ಈ ಕುಕೃತ್ಯ ನಡೆದಿದೆ.

ಪ್ರದೀಪ್ ಎಂಬುವವರ ನಾಯಿಗೆ ಕಾರು ಗುದ್ದಿದ್ದೇ ಇದಕ್ಕೆ ಹೇತುವಾಗಿದೆ. ಬೆಂಗಳೂರು ಮೂಲದ ವ್ಯಕ್ತಿ ಕಾರಿನಲ್ಲಿ ಹೋಗುತ್ತಿದ್ದಾಗ ನಾಯಿಗೆ ಡಿಕ್ಕಿ ಹೊಡೆಸಿದ್ದಾನೆ. ಈ ವಿಚಾರವಾಗಿ ಬೆಂಗಳೂರು ಮೂಲದ ವ್ಯಕ್ತಿಗೆ ಪ್ರದೀಪ್ ಸಿಡಿಗುಂಡಿನಂತೆ ಆವಾಜ್ ಹಾಕಿದ್ದಾನೆ. ಆಕ್ರಮವಾಗಿ ಖರೀದಿಸಿದ ಬಂದೂಕಿನಿಂದ ಕಾರ್ತಿಕ್ ಗುಂಡು ಹಾರಿಸಿದ್ದಾನೆ. ಕಾರ್ಯಾಚರಣೆಗೆ ಇಳಿದ ಸಾತನೂರು ಠಾಣೆ ಪೊಲೀಸರು ತಕ್ಷಣ ಕಾರ್ತಿಕ್​ನನ್ನು ಬಂಧನಕ್ಕೊಳಪಡಿಸಿದ್ದಾರೆ. ಆತನ ಬಳಿಯಿದ್ದ ಆಕ್ರಮ ಬಂದೂಕನ್ನೂ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್ ಜೊತೆ ಇದ್ದ ಮತ್ತೊಬ್ಬ ಪರಮೇಶ್ ಎಂಬಾತ ಸದ್ಯಕ್ಕೆ ಪರಾರಿಯಾಗಿದ್ದಾನೆ.

ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು ಮಂಗಳೂರು: ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರಿನ ಮಾರ್ಗನ್ಸ್ ರಸ್ತೆಯಲ್ಲಿ ಈ ದುರ್ಘಟ‌ನೆ ನಡೆದಿದ್ದು ಗಂಡ, ಹೆಂಡತಿ ಮತ್ತು ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಮಾರ್ಗನ್ಸ್ ರಸ್ತೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್​ ಸಿಕ್ಕಿದೆ. ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಕಾರಣ ಎನ್ನಲಾಗಿದೆ. ಈ ಕುರಿತು ಖುದ್ದು ಮನೆಯ ಯಜಮಾನ ಡೆತ್ ನೋಟ್ ಬರೆದಿಟ್ಟು, ವಿಷಯವನ್ನು (religion conversion) ಪ್ರಸ್ತಾಪಿಸಿದ್ದಾರೆ. ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದಲ್ಲಿ ನಾಲ್ವರ ಸಾವಿಗೆ ಮತಾಂತರ ಕಾರಣವೆಂದು ಮನೆ ಯಜಮಾನ, ಮೃತ ನಾಗೇಶ್ ಉಲ್ಲೇಖಿಸಿದ್ದಾರೆ. ಮಹಿಳೆಯ ಹೆಸರನ್ನು ಉಲ್ಲೇಖಿಸಿ, ಆಕೆಯೇ ನಮ್ಮ ಸಾವಿಗೆ ಕಾರಣ. ನನ್ನ ಪತ್ನಿಯನ್ನು ತನ್ನ ಧರ್ಮಕ್ಕೆ ಮತಾಂತರ ಮಾಡಿದ್ದಳು. ಹೀಗಾಗಿ ವಿಜಯಲಕ್ಷ್ಮಿ ಆಗಾಗ ಮನೆ ಬಿಟ್ಟು ಹೋಗುತ್ತಿದ್ದಳು. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ನಾಗೇಶ್​ ಡೆತ್ ನೋಟ್ (death note) ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ಕಂಟೆಂಟ್ ಟಿವಿ9 ಗೆ ಲಭ್ಯವಾಗಿದೆ. ಇದೀಗ ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲು ಜಾರಿ ಬಾವಿಯಲ್ಲಿ ಬಿದ್ದು ಯುವಕನ ಸಾವು ವಿಜಯಪುರ: ಯುವಕನೊಬ್ಬ ಕಾಲು ಜಾರಿ ಬಾವಿಯಲ್ಲಿ ಬಿದ್ದು ಸಾವಿಗೀಡಾಗಿದ್ದಾನೆ. ಕೊಲ್ಹಾರ ತಾಲೂಕಿನ ಮುತ್ತಗಿ ಗ್ರಾಮದ ಮಂಜುನಾಥ ಬಸಪ್ಪ ಪೂಜಾರಿ (24) ಮೃತ ದುರ್ದೈವಿ. ಮುತ್ತಗಿ ಬಳಿಯ ತೋಟದಲ್ಲಿ ಇಂದು ಬೆಳಗ್ಗೆ ಬಾವಿಯಿಂದ ಬೆಳೆಗಳಿಗೆ ನೀರು ಬಿಡಲು ತೆರಳಿದ್ದ ವೇಳೆ ಅವಘಡ ನಡೆದಿದೆ.

ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ: ಉತ್ತರ ಕನ್ನಡ ಜಿಲ್ಲಾ ಕೇಂದ್ರವಾದ ಕಾರವಾರದಲ್ಲಿ ಡಿಆರ್ ಕಚೇರಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

Published On - 11:21 am, Wed, 8 December 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು