ತಮ್ಮ ಹೆಸರಿನ ಮತ್ತೋರ್ವ ವ್ಯಕ್ತಿ ಚುನಾವಣೆಗೆ ಸ್ಪರ್ಧೆ ಬಗ್ಗೆ ಡಾ ಸಿ.ಎನ್. ಮಂಜುನಾಥ್ ಹೇಳಿದ್ದಿಷ್ಟು

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ವೈದ್ಯ, ಡಾ. ಸಿಎನ್ ಮಂಜುನಾಥ್(C. N. Manjunath)​ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ. ಈ ಮಧ್ಯೆ ಅದೇ ಹೆಸರಿನವರಾದ ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಚೊಳೇನಹಳ್ಳಿ ಗ್ರಾಮದ ಡಾ.ಸಿ.ಎನ್ ಮಂಜುನಾಥ್ ಎಂಬುವವರು ಸ್ಪರ್ಧಿಸಲು ಸಜ್ಜಾಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮಾತನಾಡಿರುವ ವೈದ್ಯ, ಡಾ. ಸಿಎನ್ ಮಂಜುನಾಥ್, ‘ ನನ್ನ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ, ಅವರೇನು ವೈದ್ಯರಲ್ಲ ಎಂದಿದ್ದಾರೆ.

ತಮ್ಮ ಹೆಸರಿನ ಮತ್ತೋರ್ವ ವ್ಯಕ್ತಿ ಚುನಾವಣೆಗೆ ಸ್ಪರ್ಧೆ ಬಗ್ಗೆ ಡಾ ಸಿ.ಎನ್. ಮಂಜುನಾಥ್ ಹೇಳಿದ್ದಿಷ್ಟು
ಸಿಎನ್​ ಮಂಜುನಾಥ್​
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 29, 2024 | 5:45 PM

ರಾಮನಗರ, ಮಾ.29: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ವೈದ್ಯ, ಡಾ. ಸಿಎನ್ ಮಂಜುನಾಥ್(C. N. Manjunath)​ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ. ಈ ಮಧ್ಯೆ ಅದೇ ಹೆಸರಿನವರಾದ ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಚೊಳೇನಹಳ್ಳಿ ಗ್ರಾಮದ ಡಾ.ಸಿ.ಎನ್. ಮಂಜುನಾಥ್ ಎಂಬುವವರು ಸ್ಪರ್ಧಿಸಲು ಸಜ್ಜಾಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮಾತನಾಡಿರುವ ವೈದ್ಯ, ಡಾ. ಸಿಎನ್ ಮಂಜುನಾಥ್, ‘ ನನ್ನ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ, ಅವರೇನು ವೈದ್ಯರಲ್ಲ. ಇರಲಿ,‌ ನಾನು ಯಾರ ಬಗ್ಗೆಯೂ ವಿರೋಧವಾಗಿ ಮಾತನಾಡಲ್ಲ ಎಂದಿದ್ದಾರೆ.

ಇತರರ ಸ್ಪರ್ಧೆ ಬಗ್ಗೆ ಚಿಂತೆ ಬೇಡ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿಯಲ್ಲಿ ಮಾತನಾಡಿ ‘ನಾನು ಬಿಜೆಪಿಯಿಂದ ಸ್ಪರ್ಧಿಸಿದ್ದೇನೆ, ಇತರರ ಸ್ಪರ್ಧೆ ಬಗ್ಗೆ ಚಿಂತೆ ಬೇಡ. ಇದರಿಂದ ಯಾವುದೇ ಗೊಂದಲ ಉಂಟಾಗಲ್ಲ. ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸುತ್ತೇನೆ. ಈಗಾಗಲೇ ಬಿಜೆಪಿ, ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಇದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಡಾ.ಸಿ.ಎನ್.ಮಂಜುನಾಥ್​ ಗೆಲ್ಲಿಸಲು ಎಲ್ಲರೂ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಡಾ ಸಿಎನ್ ಮಂಜುನಾಥ್ ಸ್ಪರ್ಧೆ ಡಿಕೆ ಸಹೋದರರ ಶಿಬಿರದಲ್ಲಿ ಆತಂಕ ಮೂಡಿಸಿದೆಯೇ? ಶಿವಕುಮಾರ್ ಪ್ರತಿಕ್ರಿಯೆ ಅದನ್ನು ಸೂಚಿಸುತ್ತದೆ!

ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಡಾ.ಸಿ.ಎನ್.ಮಂಜುನಾಥ್ ಟಾಂಗ್

ಇದೆ ವೇಳೆ ನಿನ್ನೆ(ಮಾ.28) ರಾಮನಗರದಲ್ಲಿ ಕಾಂಗ್ರೆಸ್ ನಾಯಕರಿಂದ ಶಕ್ತಿ ಪ್ರದರ್ಶನ ವಿಚಾರ, ‘ಆ ಶಕ್ತಿ ಪ್ರದರ್ಶನಕ್ಕಿಂತ ಮತಗಟ್ಟೆಯಲ್ಲಿ ಶಕ್ತಿ ಪ್ರದರ್ಶನ ಮುಖ್ಯ. ಮತ ಪತ್ರದಲ್ಲಿ ಶಕ್ತಿ ಪ್ರದರ್ಶನ ಇರಬೇಕು. ಕೆಲವೆಡೆ ಏಕಾಂಗಿಯಾಗಿ ನಾಮಪತ್ರ ಸಲ್ಲಿಸಿದವರೂ ಗೆದ್ದಿದ್ದಾರೆ ಎನ್ನುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಡಾ.ಸಿ.ಎನ್.ಮಂಜುನಾಥ್ ಟಾಂಗ್ ಕೊಟ್ಟಿದ್ದಾರೆ.

ಜನ ಆ ಕ್ಷಣದ ಲಾಭ ನೋಡಬಾರ್ದು, ಶಾಶ್ವತ ಪರಿಹಾರವನ್ನು ನೋಡ್ಬೇಕು

ಇನ್ನು ಕೋವಿಡ್​ನಲ್ಲಿ ಲಕ್ಷಾಂತರ ಜನ ಪ್ರಾಣ ತೆತ್ತಿದ್ದಾರೆ. ನಾನು ಕೋವಿಡ್ ನಿರ್ವಹಣ ಸಮಿತಿಯಲ್ಲಿದ್ದೆ. ಆರುವರೆ ಏಳು ಕೋಟಿ ಜನರಿಗೆ ಆತಂಕ ಇತ್ತು. ಅವರಿಗೆ ಸಾಂತ್ವನ ಹೇಳುತ್ತಿದ್ದೆ, ಲಸಿಕೆ ಬಗ್ಗೆನೇ ಬಹಳ ಹಿಂಜರಿಕೆ ಇತ್ತು. ಅಂಥಹ ಸಂದರ್ಭದಲ್ಲಿ ನಾವೇ ಮೊದಲು ಲಸಿಕೆ ಪಡೆದುಕೊಂಡೆವು. ಕೋವಿಡ್ ಸಂದರ್ಭದಲ್ಲಿ ನಮ್ಮ ಆಸ್ಪತ್ರೆ ಯಲ್ಲಿ 700 ಸಿಬ್ಬಂದಿಗೆ ಕೋವಿಡ್ ಆಗಿತ್ತು. ಅವರೆಲ್ಲರಿಗೂ ನಾವು ಚಿಕಿತ್ಸೆ ಕೊಟ್ಟೆವು, ಅವರೆಲ್ಲ ಬದುಕಿದರು. ಕೋಟ್ಯಾಂತರ ವ್ಯಾಕ್ಸೀನ್ ಮೋದಿ ಸರಕಾರ ನೀಡಿದ ಪರಿಣಾಮ ಬಹಳ ಪ್ರಾಣಗಳು ಉಳಿದಿವೆ. ಜೊತೆಗೆ ಹೃದಯಕ್ಕೆ ಹಾಕುವ ಸ್ಟಂಟ್ ಒಂದು ಲಕ್ಷ , ಕೆಲವು ಕಡೆ 70 ಸಾವಿರ ರೂ. ಇತ್ತು. ಅದನ್ನು ಮೋದಿ ಅವರಿಗೆ ತಿಳಿಸಿ 25 ಸಾವಿರಕ್ಕೆ ಇಳಿಸಿದೆ. ಜನ ಆ ಕ್ಷಣದ ಲಾಭ ನೋಡಬಾರದು, ಶಾಶ್ವತ ಪರಿಹಾರವನ್ನು ನೋಡಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ