ಹತಾಶೆಯಿಂದ ಹೀಗೆ ಮಾಡುತ್ತಿದ್ದಾರೆ: ಪ್ರಚಾರಕ್ಕೆ ತೆರಳಿದವರ ಮೇಲಿನ ಹಲ್ಲೆ ಖಂಡಿಸಿದ ಡಾ. ಸಿಎನ್ ಮಂಜುನಾಥ್

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆಸಿದ ಹಲ್ಲೆಯನ್ನು ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಖಂಡಿಸಿದ್ದಾರೆ. ಈ ಬಗ್ಗೆ ಡಿಐಜಿ ಜತೆ ಮಾತನಾಡಿದ್ದೇನೆ ಎಂದಿರುವ ಅವರು ಚುನಾವಣಾ ಆಯೋಗಕ್ಕೂ ದೂರು ನೀಡುವುದಾಗಿ ಹೇಳಿದ್ದಾರೆ. ಪ್ರತಿಸ್ಪರ್ಧಿಗಳು ಹತಾಶೆಯಿಂದ ಹೀಗೆ ಮಾಡುತ್ತಿದ್ದಾರೆ ಎಂದಿದ್ದಾರೆ.

ಹತಾಶೆಯಿಂದ ಹೀಗೆ ಮಾಡುತ್ತಿದ್ದಾರೆ: ಪ್ರಚಾರಕ್ಕೆ ತೆರಳಿದವರ ಮೇಲಿನ ಹಲ್ಲೆ ಖಂಡಿಸಿದ ಡಾ. ಸಿಎನ್ ಮಂಜುನಾಥ್
ಡಾ. ಸಿಎನ್ ಮಂಜುನಾಥ್
Follow us
| Updated By: ಗಣಪತಿ ಶರ್ಮ

Updated on: Apr 12, 2024 | 8:17 AM

ರಾಮನಗರ, ಏಪ್ರಿಲ್ 12: ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ (Dr CN Manjunath) ಖಂಡಿಸಿದ್ದಾರೆ. ಈ ಕುರಿತು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ‌ ಹೊಂಗನೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇದು ನಮ್ಮ ಸಂಸ್ಕೃತಿ ಅಲ್ಲ. ಚುನಾವಣೆಯನ್ನು ಏನಿದ್ದರೂ ನಮ್ಮ ತತ್ವ, ಸಿದ್ಧಾಂತದ ಮೇಲೆ ಎದುರಿಸಬೇಕೇ ವಿನಹ ಈ ರೀತಿಯ ಕೃತ್ಯಗಳನ್ನು ಸಗಬಾರದು. ಚುನಾವಣೆ ವಿರುದ್ಧ ದಿಕ್ಕಿನಿಂದ ಸಾಗುತ್ತಿದೆ ಎಂಬುದು ಅರಿವಾಗಿರಬೇಕು. ಹೀಗಾಗಿ, ಹತಾಶೆಯಿಂದ ಈ ರೀತಿ ಮಾಡಿಸುತ್ತಿದ್ದಾರೆ ಎಂದು ಹೇಳಿದರು.

ಚುನಾವಣೆಯನ್ನು ಆರೋಗ್ಯಕರವಾಗಿ ಎದುರಿಸಬೇಕು. ಅದರ ಬದಲು ಈ ರೀತಿ ಅಡ್ಡದಾರಿ ಹಿಡಿಯಬಾರದು. ಪ್ರಚಾರಕ್ಕೆ ತೆರಳಿದ್ದವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಈಗಾಗಲೇ ಡಿಐಜಿ ಅವರ ಜೊತೆ ಚರ್ಚಿಸಿದ್ದೇನೆ. ಚುನಾವಣಾ ಆಯೋಗಕ್ಕೂ ದೂರು ನೀಡಲಿದ್ದೇವೆ ಎಂದು ಅವರು ತಿಳಿಸಿದರು.

‘ಡಾಕ್ಟರ್ ವರ್ಸಸ್ ಡಾಕು’ ಎಂಬ ಪದ ಬಳಕೆ ಬಗ್ಗೆಯೂ ಮಂಜುನಾಥ್ ಆಕ್ಷೇಪ ವ್ಯಕ್ತಪಡಿಸಿದರು. ಈ ರೀತಿ ಟೀಕೆಗಳನ್ನು ಮಾಡಬಾರದು. ಚುನಾವಣೆಯಲ್ಲಿ ವೈಯಕ್ತಿಕ ಟೀಕೆಗಳನ್ನು ಮಾಡುವುದು ಸರಿಯಲ್ಲ. ನಮ್ಮ ತತ್ವ ಸಿದ್ಧಾಂತಗಳ ಆಧಾರದಲ್ಲಿಯೇ ಪ್ರಚಾರ ಮಾಡಬೇಕು ಎಂದರು.

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಪರ ಪ್ರಚಾರ ನಡೆಸಿದ್ದಕ್ಕೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂಚೆಪಾಳ್ಯದಲ್ಲಿ ಕೆಂಪನಹಳ್ಳಿ ಗ್ರಾಮ ಪಂಚಾಯತಿ ಜೆಡಿಎಸ್ ಬೆಂಬಲಿತ ಸದಸ್ಯ ಮಂಜುನಾಥ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಕೆಂಪನಹಳ್ಳಿ ನಿವಾಸಿ ಬೋರೇಗೌಡ ಮತ್ತು ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎನ್ನಲಾಗಿತ್ತು.

ಇದನ್ನೂ ಓದಿ: ತುಮಕೂರು: ಡಾ. ಮಂಜುನಾಥ್​ ಪರ ಪ್ರಚಾರ ಮಾಡಿದ ವ್ಯಕ್ತಿ ಮೇಲೆ ಹಲ್ಲೆ

ಮತ್ತೊಂದೆಡೆ, ಮಂಜುನಾಥ್ ಪರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ‌ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದರು. ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆ, ಹತಾಶೆಯಿಂದ ಕಂಗಾಲಾಗಿರುವ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ