ರಾಮನಗರ: ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ, ಪಲ್ಟಿಯಾಗಿ ಹೊತ್ತಿ ಉರಿದ ಕಾರು

ರಾಮನಗರ ತಾಲೂಕಿನ ದೊಡ್ಡಗಂಗವಾಡಿ ಗ್ರಾಮದ ಬಳಿ ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದ ಕಾರು ಬ್ಯಾಲೆನ್ಸ್ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿ ಹೊತ್ತಿ ಉರಿದಿದೆ. ಸದ್ಯ ಕಾರಿನಲ್ಲಿದ್ದ ಮೂವರು ಯುವಕರು ಬಚಾವ್ ಆಗಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಮನಗರ: ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ, ಪಲ್ಟಿಯಾಗಿ ಹೊತ್ತಿ ಉರಿದ ಕಾರು
ಪಲ್ಟಿಯಾಗಿ ಹೊತ್ತಿ ಉರಿದ ಕಾರು
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಆಯೇಷಾ ಬಾನು

Updated on: Nov 24, 2023 | 10:13 AM

ರಾಮನಗರ, ನ.24: ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡುತ್ತಿದ್ದ ಚಾಲಕನಿಗೆ ಬ್ಯಾಲೆನ್ಸ್ ತಪ್ಪಿ ಕಾರು ರಸ್ತೆಯಲ್ಲೇ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ರಾಮನಗರ (Ramanagara) ತಾಲೂಕಿನ ದೊಡ್ಡಗಂಗವಾಡಿ ಗ್ರಾಮದ ಬಳಿ ನಡೆದಿದೆ. ಕಾರಿನಿಂದ ಕೆಳಗಿಳಿದು ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಮೂಲದ ರೋಹಿತ್, ತರುಣ್, ಮಂಜು ಬಚಾವಾದ ಯುವಕರು. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಯುವಕರನ್ನು ವಶಕ್ಕೆ ಪಡೆಯಲಾಗಿದೆ.

ಯುವಕರು ಕಂಠಪೂರ್ತಿ ಕುಡಿದು ಗ್ರಾಮದೊಳಗೆ ರ್‍ಯಾಶ್ ಡ್ರೈವಿಂಗ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಓರ್ವ ವ್ಯಕ್ತಿಗೆ ಗುದ್ದಿ ಎಸ್ಕೇಪ್ ಆಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ, ಹೊತ್ತಿ ಉರಿದಿದೆ ಎನ್ನಲಾಗುತ್ತಿದೆ. ಕಾರಿನಲ್ಲಿದ್ದ ಯುವಕರನ್ನ ಹಿಡಿದು ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಯುವಕರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಡಿವೈಡರ್​ಗೆ ಬೈಕ್ ಡಿಕ್ಕಿ, ವಿದ್ಯಾರ್ಥಿ ಸಾವು

ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಕಾಲೇಜು ರಸ್ತೆಯ ನಡೆದಿದೆ. ಎಸ್.ಡಿ.ಎಮ್ ಕಾಲೇಜಿನ ಮ್ಯಾಕಾನಿಕಲ್ ಕೋರ್ಸ್ ಡಿಪ್ಲೋಮಾ ವಿದ್ಯಾರ್ಥಿಯಾಗಿದ್ದ ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದಿಕ್ಷೀತ್(20) ಮೃತ ದುರ್ದೈವಿ. ಘಟನೆ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಯ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡ್ರಗ್ಸ್ ಸಿಂಡಿಕೇಟ್ ಭೇದಿಸಿದ ಸಿಸಿಬಿ ಪೊಲೀಸರು, ಓರ್ವ ಅರೆಸ್ಟ್

ಅಪರಿಚಿತ ವ್ಯಕ್ತಿಯ ಜೀವ ಉಳಿಸಿದ ಡಾ. ರವಿಕುಮಾರ್

ರಸ್ತೆ ದುರಂತದಲ್ಲಿ ಗಾಯಗೊಂಡು ರಸ್ತೆ ಪಕ್ಕ ಬಿದ್ದ ವ್ಯಕ್ತಿಯನ್ನು ರಕ್ಷಿಸಿ ಡಾ. ರವಿಕುಮಾರ್ ಮಾನವೀಯತೆ ತೋರಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೇವಿಕೆರೆ ಗ್ರಾಮದ ಬಳಿ ರಸ್ತೆ ದುರಂತದಲ್ಲಿ ಗಾಯಗೊಂಡು ರಸ್ತೆ ಪಕ್ಕದಲ್ಲಿ ಬಿದ್ದಿದ್ದ ವ್ಯಕ್ತಿಗೆ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಡಾ. ರವಿಕುಮಾರ, ವ್ಯಕ್ತಿ ಬಿದ್ದಿದ್ದನ್ನ ಗಮನಿಸಿ ಪ್ರಥಮ ಚಿಕಿತ್ಸೆ ನೀಡಿ ಉಸಿರಾಡುವಂತೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಡಾ. ರವಿಕುಮಾರ್ ಅವರು ಜಗಳೂರು ಕ್ಷೇತ್ರದ ಮಾಜಿ ಶಾಸಕ ಗುರುಸಿದ್ದನಗೌಡರ ಪುತ್ರ ಹಾಗೂ ದಾವಣಗೆರೆ ಲೋಕ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ