ಕನಕಪುರ: ತೋಟಕ್ಕೆ ಹೋಗುತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಕ್ಷೇತ್ರದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಹೌದು ಕಾಡಾನೆ ದಾಳಿಗೆ ಕಳೆದ ವರ್ಷ ಕನಕಪುರದಲ್ಲಿ ಮೂವರು ಮೃತಪಟ್ಟಿದ್ದರು. ಇದೀಗ ಮತ್ತೆ 2024 ವರ್ಷ ಆರಂಭದ ಮೊದಲ ದಿನವೇ ತೋಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿದ್ದರಿಂದ, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕನಕಪುರ: ತೋಟಕ್ಕೆ ಹೋಗುತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ
ಗಾಯಗೊಂಡ ಮಹಿಳೆ
Follow us
| Updated By: ವಿವೇಕ ಬಿರಾದಾರ

Updated on: Jan 01, 2024 | 12:25 PM

ರಾಮನಗರ, ಜನವರಿ 01: ಮಾನವ ಮತ್ತು ಪ್ರಾಣಿ ಸಂಘರ್ಷ ನಡೆಯುತ್ತಲೇ ಇದೆ. ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಹುಲಿ, ಚಿರತೆ ಮತ್ತು ಆನೆಗಳು (Elephant) ಮನಷ್ಯರ ಮೇಲೆ ದಾಳಿ ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಾರ್ವಜನಿಕರು ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಇದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಕ್ಷೇತ್ರದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಹೌದು ಕಾಡಾನೆ ದಾಳಿಗೆ ಕಳೆದ ವರ್ಷ ಕನಕಪುರದಲ್ಲಿ ಮೂವರು ಮೃತಪಟ್ಟಿದ್ದರು.

ಇದೀಗ ಮತ್ತೆ 2024 ವರ್ಷ ಆರಂಭದ ಮೊದಲ ದಿನವೇ ತೋಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿದ್ದರಿಂದ, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕನಕಪುರ ತಾಲೂಕಿನ ಬರಡನಹಳ್ಳಿಯಲ್ಲಿ ಇಂದು (ಜ.01) ಬೆಳಿಗ್ಗೆ ಘಟನೆ ನಡೆದಿದೆ. ಬರಡನಹಳ್ಳಿ ಗ್ರಾಮದ ದುಂಡಮ್ಮ (35) ಗಾಯಗೊಂಡವರು.

ಇದನ್ನೂ ಓದಿ: ರೈತರನ್ನು ಅಟ್ಟಾಡಿಸಿಕೊಂಡು ಹೋದ 30 ಕಾಡಾನೆಗಳ ಹಿಂಡು: ಅನ್ನದಾತ ಬಚಾವ್

ಆನೆ ದಾಳಿಯಿಂದ ತೀವ್ರವಾಗಿ ಅಸ್ವಸ್ಥಗೊಂಡಿರುವ ದುಂಡಮ್ಮ ಅವರ ಎಡಗೈ ಮುರಿದಿದೆ. ಸದ್ಯ ಗ್ರಾಮಸ್ಥರು ದುಂಡಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ದುಂಡಮ್ಮ ಅವರ ಚಿಕಿತ್ಸಾ ವೆಚ್ಚ ಭರಿಸಿ, ಪರಿಹಾರ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಹಿಂದಿನ ಹಲವು ಪ್ರಕರಣಗಳು

ಕಳೆದ ಕೆಲವು ದಿನಗಳ ಹಿಂದೆ ಅಂದರೆ 2023ರ ಡಿಸೆಂಬರ್​ 27 ರಂದು ಕನಕಪುರ ತಾಲೂಕಿನ ಬನ್ನಿಮುಕ್ಕೊಳ್ಲು ಗ್ರಾಮದ ನಿವಾಸಿ ಚಂದ್ರಣ್ಣ ಅವರು ಕಾಡಿಗೆ ಕಟ್ಟಿಗೆ ತರಲು ಹೋದಾಗ ಆನೆ ದಾಳಿ ಮಾಡಿದೆ. ಇದರಿಂದ ಚಂದ್ರಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಡಿಸೆಂಬರ್​ 17 ರಂದು ಇದೇ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ನಿವಾಸಿ ತಿಮ್ಮಯ್ಯ ಎಂಬ ರೈತ ಕಾಡಾನೆ ತುಳಿತಕ್ಕೆ ಸಾವಿಗೀಡಾಗಿದ್ದರು.

ಜೂನ್​ 3 ರಂದು ಕಬ್ಬಾಳು ಗ್ರಮಾದ ರೈತ ಕಾಳಯ್ಯ, ಜೂನ್​ 19 ರಂದು ಜಯಮ್ಮ ಮತ್ತು ಜಯಮ್ಮ ಜೊತೆಗಿದ್ದ ವೆಂಕಟಲಕ್ಷ್ಮಮ್ಮ ಕಡಾನೆ ದಾಳಿಗೆ ಮೃತಪಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು