AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಗಾಂಧಿ ಟ್ವೀಟ್, ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆಗೆ ಎಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯದಲ್ಲಿ ಘೋಷಣೆ ಕೂಗಿದ್ದ ಯುವತಿಗೆ ಕೆಲ ಸಂಘಟನೆ 5 ಲಕ್ಷ ಬಹುಮಾನ ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಎಚ್​ಡಿಕೆ, ಈ ದೇಶವನ್ನ ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.

ಪ್ರಿಯಾಂಕಾ ಗಾಂಧಿ ಟ್ವೀಟ್, ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆಗೆ ಎಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯೆ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: sandhya thejappa|

Updated on: Feb 10, 2022 | 12:58 PM

Share

ರಾಮನಗರ: ಪ್ರಿಯಾಂಕಾ ಗಾಂಧಿ (Priyanka Gandhi) ಟ್ವೀಟ್​ಗೆ, ಶಾಸಕ ರೇಣುಕಾಚಾರ್ಯ (Renukacharya) ಅವರ ವಿವಾದಾತ್ಮಕ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯೆ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ, ಅವರು ಅವರವರ ಭಾವನೆಗೆ ಹೇಳಿದ್ದಾರೆ. ಜನಪ್ರತಿನಿಧಿಯಾಗಿ ಮಾತನಾಡಿದ್ದು ತಪ್ಪು. ಆದರೆ ಅವರು ಈಗ ಕ್ಷಮೆ ಕೋರಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ವೈಫಲ್ಯತೆ ಕಾಣುತ್ತಿದೆ. ಗೃಹ ಸಚಿವರು ಮತ್ತು ಸರ್ಕಾರದ ವೈಫಲ್ಯ ಈ ಪ್ರಕರಣದಲ್ಲಿ ಕಾಣುತ್ತಿದೆ. ಅಮಾಯಕ ಮಕ್ಕಳ ಜೊತೆ ಚೆಲ್ಲಾಟ ಆಡುತ್ತಿವೆ ಅಷ್ಟೆ ಅಂತ ಅಭಿಪ್ರಾಯಪಟ್ಟರು.

ಮಂಡ್ಯದಲ್ಲಿ ಘೋಷಣೆ ಕೂಗಿದ್ದ ಯುವತಿಗೆ ಕೆಲ ಸಂಘಟನೆ 5 ಲಕ್ಷ ಬಹುಮಾನ ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಎಚ್​ಡಿಕೆ, ಈ ದೇಶವನ್ನ ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇಂತಹ ವಿಚಾರಕ್ಕೆ ಪ್ರಚೋದನೆ ಮಾಡುವವರ ಮೇಲೆ ಪೋಷಕರು, ಶಾಲಾ ಮಕ್ಕಳು, ರಾಜ್ಯದ ಜನತೆಗೆ ಮನವಿ ಮಾಡುತ್ತೇನೆ. ಕುವೆಂಪುರವರ ಸರ್ವಜನಾಂಗದ ಶಾಂತಿಯ ತೋಟ ಅಂತಾ ಇದೆ. ಈ ನಾಡು ಶಾಂತಿಯ ಬೀಡು, ಹಾಗಾಗಿ ಇಂತಹದಕ್ಕೆ ಪ್ರೋತ್ಸಾಹ ಕೊಡಬೇಡಿ ಎಂದು ಹೇಳಿದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಕುಮಾರಸ್ವಾಮಿ ಟಾಂಗ್ ಕೊಟ್ಟರು. ಬಿಜೆಪಿ ಸಚಿವರ ಮಗ ಓರ್ವ ಕೇಸರಿ ಶಾಲು ಹಂಚುತ್ತಿದ್ದಾರೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಅದು ಅವರ ಬಳಿ ಮಾಹಿತಿ ಇದ್ದು ಹೇಳಿದ್ದಾರೋ, ಮಾಹಿತಿ ಇಲ್ಲದೇ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಮಾಹಿತಿ ಇದ್ದರೆ ಸಾಕ್ಷಿ ಸಮೇತ ಜನತೆ ಮುಂದೆ ಇಟ್ಟರೆ ಒಪ್ಪುತ್ತಾರೆ. ಇಲ್ಲ ಅಂದರೆ ಗಾಳಿಯಲ್ಲಿ ನಾನು ಒಂದು ಗುಂಡು ಹಾರಿಸುತ್ತೇನೆ ಎಂದು ಆಗುತ್ತೆ ಎಂದು ತಿಳಿಸಿದರು.

ಕಂಡವರ ಮಕ್ಕಳನ್ನ ಬಾವಿಗೆ ತಳ್ಳುವ ಕೆಲಸ ಮಾಡುತ್ತಿದ್ದಾರೆ. ಇದನ್ನ ಮಕ್ಕಳ ಪೋಷಕರು ಅರ್ಥ ಮಾಡಿಕೊಳ್ಳಬೇಕು. ಧರಣಿ ಮಾಡುವ ಮಕ್ಕಳ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ತಮ್ಮ ತೆವಲಿಗೆ ಪಕ್ಷ, ಸಂಘಟನೆಗಳು ಮಕ್ಕಳನ್ನ ಬಳಸಿಕೊಳ್ಳುತ್ತಿವೆ. ವಿಡಿಯೋ ಇಟ್ಟುಕೊಂಡು ಕೋರ್ಟ್, ಕಚೇರಿಗೆ ಅಲೆಸುತ್ತಾರೆ. ಈಗಾಗಲೇ ಕೆಲವರ ವಿರುದ್ಧ ಎಫ್ಐಆರ್ ಆಗಿದೆ. ಎರಡು ಹೊತ್ತಿನ ಊಟಕ್ಕೂ ಗತಿ ಇರಲ್ಲ ಆ ಮಕ್ಕಳಿಗೆ. ಸಾವಿರಾರು ಮಕ್ಕಳ ವಿರುದ್ಧ ಪ್ರಕರಣ ಬೀಳಲಿದೆ. ಇದನ್ನ ಮೊದಲು ರಾಜಕೀಯ ಪಕ್ಷಗಳು ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಈ ಸಂಘರ್ಷ ಯಾವ ಶಾಲೆಗಳಲ್ಲಿ ನಡೆಯುತ್ತಿದೆ? ದೊಡ್ಡದೊಡ್ಡ ಖಾಸಗಿ ಶಾಲೆಗಳಲ್ಲಿ ನಡೆಯುತ್ತಿದೆಯಾ? ಜನನಾಯಕರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಾರಾ? ಅವರ ಮಕ್ಕಳನ್ನ ಸಹ ಖಾಸಗಿ ಶಾಲೆಗಳಲ್ಲಿ ಓದಿಸುತ್ತಿದ್ದಾರೆ. ಅವರ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡ್ತಿಲ್ಲ. ಅಮಾಯಕ, ಬಡಮಕ್ಕಳಿಂದ ಹೋರಾಟ ಮಾಡಿಸುತ್ತಿದ್ದಾರೆ. ಅಂತ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ

ರಶ್ಮಿಕಾ ಹೊಸ ಚಿತ್ರದ ಒಟಿಟಿ ಹಾಗೂ ಸ್ಯಾಟಲೈಟ್​​ ಹಕ್ಕುಗಳಿಗೆ ಭರ್ಜರಿ ಆಫರ್; ಮೊತ್ತ ಕೇಳಿ ಹುಬ್ಬೇರಿಸಿದ ಫ್ಯಾನ್ಸ್

Anushka Sharma: ‘ಒಂದುವೇಳೆ ಅನುಷ್ಕಾ ನನ್ನ ಬಯೋಪಿಕ್​ನಲ್ಲಿ ನಟಿಸಿದರೆ..’; ವಿರಾಟ್ ಕೊಹ್ಲಿ ಹಂಚಿಕೊಂಡಿದ್ರು ಅಚ್ಚರಿಯ ವಿಚಾರ!

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು