ಡಿಕೆ ಶಿವಕುಮಾರ್​ರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ: ಪರೀಕ್ಷೆ ಮುಂದೂಡಿದ ಆಡಳಿತ ಮಂಡಳಿ

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕುದೂರು ಗ್ರಾಮದ ಶಾಲಾ ಆವರಣದಲ್ಲಿ ಸರಕಾರಿ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್​ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಮತ್ತು ಉದ್ಘಾಟನೆ ಹಿನ್ನೆಲೆ ಪ್ರೌಢಶಾಲೆಯ ಮಧ್ಯಂತರ ಪರೀಕ್ಷೆಯ ನಡೆಯಬೇಕಿದ್ದ ಕನ್ನಡ ಪರೀಕ್ಷೆಯನ್ನು ಆಡಳಿತ ಮಂಡಳಿ ಮುಂದೂಡಿದೆ.

ರಾಮನಗರ, ಅಕ್ಟೋಬರ್​​ 06: ಜಿಲ್ಲೆ ಮಾಗಡಿ ತಾಲೂಕಿನ ಕುದೂರು ಗ್ರಾಮದ ಶಾಲಾ ಆವರಣದಲ್ಲಿ ಸರಕಾರಿ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಮತ್ತು ಉದ್ಘಾಟನೆ ಹಿನ್ನೆಲೆ ಪ್ರೌಢಶಾಲೆಯ ಮಧ್ಯಂತರ ಪರೀಕ್ಷೆಯ ನಡೆಯಬೇಕಿದ್ದ ಕನ್ನಡ ಪರೀಕ್ಷೆಯನ್ನು ಆಡಳಿತ ಮಂಡಳಿ ಮುಂದೂಡಿದೆ. ಕಾರ್ಯಕ್ರಮದ ಕಿರಿಕಿರಿ ನಡುವೆಯೇ ಪದವಿ ಪರೀಕ್ಷೆ ಮುಂದುವರೆದಿವೆ. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಭಾಗಿಯಾಗಿದ್ದರು.

ಸರ್ಕಾರಿ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳ ಬಳಕೆ ಕೂಡ ಮಾಡಲಾಗಿದೆ. ತರಗತಿಗಳನ್ನು ಮೊಟಕುಗೊಳಿಸಿ ಸರಕಾರಿ ಶಾಲೆ ಹಾಗೂ ಕಾಲೇಜು ಮಕ್ಕಳನ್ನು ಕಾರ್ಯಕ್ರಮದಲ್ಲಿ ಬಳಕೆ ಮಾಡಲಾಗಿದೆ.

ಕುಡಿಯುವುದನ್ನು ಯಾರೂ ತಪ್ಪಿಸಲು ಸಾಧ್ಯವಾಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್​

ಕಾರ್ಯಕ್ರಮ ಉದ್ಘಾಟನೆ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​, ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ. ಹಳ್ಳಿಯಲ್ಲಿ ನಾವು ಬಾರ್ ತೆಗೆಯುವುದಿಲ್ಲ. ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ಬಾರ್​ಗಳನ್ನು ತೆರೆಯಲಾಗುವುದು. ಕುಡಿಯುವುದನ್ನು ಯಾರೂ ತಪ್ಪಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಂಚಾಯಿತಿಗೊಂದು ಬಾರ್ ವಿವಾದದ ಬಗ್ಗೆ ಸಿಎಂ, ಡಿಸಿಎಂ ಸ್ಪಷ್ಟನೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ

ನಮ್ಮ ಜಿಲ್ಲೆಗೆ ಇದು ಸಂತೋಷ ದಿನ. ಗ್ರಾಮೀಣ ಪ್ರದೇಶದಲ್ಲಿ ಸಿಎಸ್​ಆರ್​ ನಿಧಿ ಮೂಲಕ ರಾಜ್ಯದಲ್ಲಿ ಮಾದರಿ ಸರಕಾರಿ ಶಾಲೆ ಕಟ್ಟಬೇಕು ಎಂಬ ಉದ್ದೇಶ ಈಗ ಕುದೂರಿನ ಮೂಲಕ ನನಸಾಗಿದೆ. ರಾಮನಗರದಲ್ಲಿ 288 ಶೌಚಾಲಯ ನಿರ್ಮಿಸಿದ್ದ ಟಯೋಟ ಸಂಸ್ಥೆ ಈಗ ಶಾಲೆಗಳಿಗಾಗಿ 16 ಕೋಟಿ ರೂ. ವೆಚ್ಚ ಮಾಡಲು ಮುಂದೆ ಬಂದಿದೆ. ಹೀಗಾಗಿ ಇಲ್ಲಿ ಐದು ಕೋಟಿ‌ ರೂ. ವೆಚ್ಚದಲ್ಲಿ ಕೆಪಿಎಸ್ ಶಾಲೆ ನಿರ್ಮಾಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀಟ್​ ಓಪನ್​: ಸಚಿವ ಭೈರತಿ ಸುರೇಶ್

ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯು ಇಂತಹ ಶಾಲೆಗಳು ತಲೆ ಎತ್ತಲಿವೆ. ಶಿಕ್ಷಣಕ್ಕಾಗಿ ಬೆಂಗಳೂರಿಗೆ ಓಡಾಡುವ ಪರದಾಟ ತಪ್ಪಿಸಲು ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದಲ್ಲಿನ ಎಲ್ಲ ಕಾರ್ಖಾನೆಗಳು ಈ ವರ್ಷ ಎರಡು ಸಾವಿರ ಶಾಲೆ ನಿರ್ಮಿಸುವಂತೆ ಮನವಿ ಮಾಡಲಾಗಿದೆ. ಶಿಕ್ಷಕರ ಕೊರತೆಯನ್ನು ನಿಗಿಸುವ ಕೆಲಸವನ್ನು ಸರಕಾರ ಮಾಡಲಿದೆ. ಲಿಂಗಾಯಿತ ಸಮುದಾಯದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅಧಿಕಾರಿಗಳು ಮಾತನಾಡುತ್ತಾರೆ ಅಷ್ಟೇ. ಜನರು ನಮಗೆ ನೀಡಿರುವ ಅವಕಾಶವನ್ನು ನಾವು ಬಳಸಿಕೊಂಡು ಸೇವೆ ಸಲ್ಲಿಸುತ್ತೆವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us