AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ನಕಲಿ ಕ್ಲಿನಿಕ್​ಗಳ ಹಾವಳಿ: ನಕಲಿ ವೈದ್ಯನ ಚಿಕಿತ್ಸೆಯಿಂದ 6 ತಿಂಗಳ ಮಗು ಸಾವು

ಪೋಷಕರೇ ಎಚ್ಚರ, ನಿಮಗೋ ಅಥವಾ ನಿಮ್ಮ ಮಕ್ಕಳಿಗೋ ಅನಾರೋಗ್ಯ ಬಂತೆಂದು ಖಾಸಗಿ ಕ್ಲಿನಿಕ್​ಗಳಿಗೆ ಕರೆದ್ಯೋಯ್ಯುವ ಮುನ್ನ ಸಾಕಷ್ಟು ಬಾರಿ ಯೋಚನೆ ಮಾಡಿ. ಕೆಲ ನಕಲಿ ವೈದ್ಯರ ಹಾವಳಿಯಿಂದ ಮುಗ್ದ ಜನರ ಪ್ರಾಣಪಕ್ಷಿಯೇ ಹಾರಿಹೋಗುತ್ತಿದೆ. ಅದರಲ್ಲೂ ರೇಷ್ಮೆನಗರಿ ರಾಮನಗರದಲ್ಲಿ ನಕಲಿ ವೈದ್ಯನ ಚಿಕಿತ್ಸೆಗೆ ಪುಟ್ಟ ಕಂದಮ್ಮ ಬಾರದ ಲೋಕಕ್ಕೆ ತೆರಳಿದೆ.

ರಾಮನಗರದಲ್ಲಿ ನಕಲಿ ಕ್ಲಿನಿಕ್​ಗಳ ಹಾವಳಿ: ನಕಲಿ ವೈದ್ಯನ ಚಿಕಿತ್ಸೆಯಿಂದ 6 ತಿಂಗಳ ಮಗು ಸಾವು
ಆರೋಗ್ಯ ಇಲಾಖೆ ಕಚೇರಿ, ರಾಮನಗರ
ಪ್ರಶಾಂತ್​ ಬಿ.
| Edited By: |

Updated on: Jun 16, 2025 | 7:16 AM

Share

ರಾಮನಗರ, ಜೂನ್ 16: ‘ವೈದ್ಯೋ ನಾರಾಯಣೋ ಹರಿಃ’ ಎಂಬ ಮಾತಿದೆ. ನಮಗೆ ಏನಾದರೂ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡರೆ ಮೊದಲು ಹೋಗುವುದೇ ವೈದ್ಯರ ಬಳಿ. ಆದರೆ, ಇದನ್ನೇ ಕೆಲವರು ಬಂಡವಾಳ ಮಾಡಿಕೊಂಡು ಹಣದಾಸೆಗೆ ಮುಗ್ದ ಜನರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಇದಕ್ಕೆ ಸ್ವಷ್ಟ ನಿದರ್ಶನವೆಂಬಂತೆ, ಮೂರು ದಿನಗಳ ಹಿಂದೆ ರಾಮನಗರದಲ್ಲಿ (Ramanagara) (ಬೆಂಗಳೂರು ದಕ್ಷಿಣ ‌ಜಿಲ್ಲೆ) ನಕಲಿ ವೈದ್ಯನ ಚಿಕಿತ್ಸೆಯಿಂದಾಗಿ ಶಿವರಾಜ್ ಎಂಬುವವರ ಆರು ತಿಂಗಳ ಶರಣ್ಯ ಎಂಬ ಕಂದಮ್ಮ ಸಾವನ್ನಪ್ಪಿದೆ. ವೈದ್ಯಕೀಯ ಕೋರ್ಸ್ ಮಾಡದೇ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಸಣ್ಣ ಕೋಣೆಯಲ್ಲಿ ಚಿಕಿತ್ಸೆ ನೀಡಿದ ನಕಲಿ ವೈದ್ಯ (Fake Doctor) ಮಹಮ್ಮದ್ ಸೈಫುಲ್ಲ ಎಂಬಾತನಿಂದಾಗಿ ಮಗು ಬಾರದ ಲೋಕಕ್ಕೆ ತೆರಳಿದೆ. ಇದು ಜಿಲ್ಲೆಯ ಜನರನ್ನು ಸಾಕಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.

ಇದೊಂದು ಪ್ರಕರಣ ಅಷ್ಟೇ ಅಲ್ಲದೆ, ರಾಮನಗರದಲ್ಲಿ ಸಾಕಷ್ಟು ನಕಲಿ ಕ್ಲಿನಿಕ್​ಗಳು ತಲೆ ಎತ್ತಿದ್ದು ಅವುಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಬೆಂಗಳೂರು ದಕ್ಷಿಣ ‌ಜಿಲ್ಲೆಯಾದ್ಯಂತ ಒಟ್ಟು 193 ಕ್ಲಿನಿಕ್ ಹಾಗೂ ಆಸ್ಪತ್ರೆಗಳಿಗೆ ಮಾತ್ರ ಆರೋಗ್ಯ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಆದರೆ ಕೆಲವರು ಹಣದಾಸೆಗೆ ನಕಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ ನಾಲ್ಕು ತಿಂಗಳಲ್ಲಿ ಆರು ನಕಲಿ ವೈದ್ಯರನ್ನು ಪತ್ತೆ ಮಾಡಿದೆ. ಇಬ್ಬರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೂ ಇನ್ನೂ ಕೆಲವರು ಹಣದಾಸೆಗೆ ನಕಲಿ‌ ಕ್ಲಿನಿಕ್ ನಡೆಸುತ್ತಿದ್ದಾರೆ.

ಇದನ್ನೂ ಓದಿ
Image
ಲಾಲ್ ಬಾಗ್ ಸುತ್ತೋದು ಇನ್ನಷ್ಟು ಸುಲಭ! ಸಿಗಲಿದೆ ಇ ಸ್ಕೂಟರ್ ಸೌಲಭ್ಯ
Image
ಕರ್ನಾಟಕದಲ್ಲಿ ಭಾರಿ ಮಳೆ: ರಾಜ್ಯದ 4 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
Image
ಸೊಲ್ಲಾಪುರ-ಮಂಗಳೂರು ಸಂಪರ್ಕಿಸುವ ರಾ.ಹೆ ಬಂದ್​: ಬದಲಿ ಮಾರ್ಗ ಇಲ್ಲಿದೆ
Image
ಅಪಾರ್ಟಮೆಂಟ್, ಕಂಪನಿಗಳಿಗೆ ತಾನು ಬೆಳೆದ ಮಾವು ರುಚಿ ಹಚ್ಚಿಸಿದ ರೈತ

6 ತಿಂಗಳ ಮಗುವಿನ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ‌ ಕ್ರಮಕ್ಕೂ ಸೂಚನೆ ನೀಡಿದೆ.

ಇದನ್ನೂ ಓದಿ: ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್

ನಕಲಿ ಕಲಿನಿಕ್​ಗಳ ಬಗ್ಗೆ ಜನರು ಎಚ್ಚರಿದಿಂದ ಇರಬೇಕು. ಗಮನಕ್ಕೆ ಬಂದ ಕೂಡಲೇ ಅವುಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಮನವಿ ಮಾಡಿದ್ದಾರೆ.

ಒಟ್ಟಾರೆಯಾಗಿ, ನಕಲಿ ವೈದ್ಯರ ಹಾವಳಿಯಿಂದ ಜಿಲ್ಲೆಯಲ್ಲಿ ಮುಗ್ದ ಜನರು ಜೀವ ಕಳೆದುಕೊಳ್ಳುವಂತಾಗುತ್ತಿದೆ. ಇನ್ನಾದರೂ ಇಂತಹ ನಕಲಿಗಳ ವಿರುದ್ಧ ಸರ್ಕಾರ ಸೂಕ್ತ ಹಾಗೂ ಕಠಿಣ ಕ್ರಮ ತೆಗೆದುಕೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!