AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಡೆಯುತ್ತಿದ್ದ ದಂಧೆ

Fake currency Ramanagara: ರಾಮನಗರದಲ್ಲಿ 200 ಮತ್ತು 500 ರೂ. ಮುಖಬೆಲೆಯ ಖೋಟಾ ನೋಟು ಮುದ್ರಣ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ನಿರ್ಮಾಣ ಹಂತದ ಮನೆಯಲ್ಲಿ ಕೆಮಿಕಲ್ ಬಳಸಿ ನಕಲಿ ನೋಟುಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು. ಸದ್ಯ ಐಜೂರು ಠಾಣೆ ಪೊಲೀಸರು ಐವರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.

ರಾಮನಗರದಲ್ಲಿ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಡೆಯುತ್ತಿದ್ದ ದಂಧೆ
ಖೋಟಾ ನೋಟು ಜಾಲ ಪತ್ತೆImage Credit source: tv9 kannada
ಪ್ರಶಾಂತ್​ ಬಿ.
| Edited By: |

Updated on:Aug 31, 2026 | 8:03 PM

Share

ಮುಖ್ಯಾಂಶಗಳು

  • ರಾಮನಗರದಲ್ಲಿ ಖೋಟಾ ನೋಟು ಜಾಲ ಪತ್ತೆ
  • ರಾಮನಗರದ ಶಾಂತಿಲಾಲ್ ಲೇಔಟ್​ನಲ್ಲಿ ಘಟನೆ
  • ಖೋಟಾ ನೋಟು ಮುದ್ರಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್

ರಾಮನಗರ, ಆಗಸ್ಟ್​ 31: ಇತ್ತೀಚೆಗೆ ಬೆಂಗಳೂರು ಮತ್ತು ಕರಾವಳಿಯಲ್ಲಿ ಖೋಟಾ ನೋಟು ದಂಧೆ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದರು. ಇದೀಗ ರಾಮನಗರದಲ್ಲಿ (ramanagara) ಕೂಡ ಖೋಟಾ ನೋಟು ಜಾಲವೊಂದು ಪತ್ತೆ ಆಗಿದೆ. ಸಾರ್ವಜನಿಕರ ಕಣ್ಣುತಪ್ಪಿಸಿ ನಿರ್ಮಾಣ ಹಂತದ ಮನೆಯೊಂದರಲ್ಲೇ ಅಕ್ರಮವಾಗಿ ಖೋಟಾ ನೋಟುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಅಂತರಜಿಲ್ಲಾ ಖದೀಮರ ಜಾಲವನ್ನು ಐಜೂರು ಪೊಲೀಸರು ಬಯಲಿಗೆಳೆದಿದ್ದು, ಐವರನ್ನು ವಶಕ್ಕೆ ಪಡೆದಿದ್ದಾರೆ.

ಶಾಂತಿಲಾಲ್ ಲೇಔಟ್‌ನ ನಿರ್ಮಾಣ ಹಂತದ ಮನೆಯಲ್ಲಿ ದಂಧೆ

ರಾಮನಗರದ ಶಾಂತಿಲಾಲ್ ಲೇಔಟ್‌ನಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಅಕ್ರಮ ದಂಧೆ ನಡೆಯುತ್ತಿತ್ತು. ಯಾರಿಗೂ ಸಂಶಯ ಬಾರದಂತೆ ಆ ಕಟ್ಟಡವನ್ನು ಅಡ್ಡೆ ಮಾಡಿಕೊಂಡಿದ್ದ ಗ್ಯಾಂಗ್, ನೋಟು ಮುದ್ರಣ ಮಾಡುತ್ತಿದ್ದರು. ಖಚಿತ ಮಾಹಿತಿ ಬೆನ್ನತ್ತಿದ ಐಜೂರು ಪೊಲೀಸರು ದಿಢೀರ್ ದಾಳಿ ನಡೆಸಿ ಜಾಲವನ್ನು ಭೇದಿಸಿದ್ದಾರೆ.

ವಿಶೇಷ ಪೇಪರ್ ಮತ್ತು ಕೆಮಿಕಲ್ ಬಳಕೆ

ಹೊರಗಿನಿಂದ ವಿಶೇಷ ಕಾಗದದ ಶೀಟ್‌ಗಳನ್ನು ತರಿಸಿ, ಅವುಗಳಿಗೆ ನಿರ್ದಿಷ್ಟ ಕೆಮಿಕಲ್ ಲೇಪಿಸಿ ಅಸಲಿ ನೋಟಿನಂತೆ ಕಾಣುವ 200 ಹಾಗೂ 500 ರೂ ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಲಾಗುತ್ತಿತ್ತು. ಮುದ್ರಿತ ಶೀಟ್‌ಗಳನ್ನು ಅಚ್ಚುಕಟ್ಟಾಗಿ ಕತ್ತರಿಸಿ, ಬಂಡಲ್‌ಗಳನ್ನಾಗಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದರು.

ಇದನ್ನೂ ಓದಿ: ಬೆಳಗಾವಿ ಪೊಲೀಸರ ಭರ್ಜರಿ ಬೇಟೆ: ಗೋವಾ ಮೂಲದ ಖೋಟಾ ನೋಟ್ ಗ್ಯಾಂಗ್​ ಲಾಕ್​​

ಇನ್ನು ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಮತ್ತು ಬೆರಳಚ್ಚು ತಜ್ಞರನ್ನೊಳಗೊಂಡ SOCO ತಂಡ ಭೇಟಿ ನೀಡಿ, ನೋಟು ಮುದ್ರಣಕ್ಕೆ ಬಳಸಿದ್ದ ರಾಸಾಯನಿಕ, ಕಾಗದ ಹಾಗೂ ಇತರೆ ಮಹತ್ವದ ಸಾಕ್ಷ್ಯಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದೆ.

ಏಳು ಆರೋಪಿಗಳನ್ನು ಬಂಧಿಸಲಾಗಿದೆ ಎಂದ SP ರೋಹನ್ ಜಗದೀಶ್

ಬೆಂಗಳೂರು ದಕ್ಷಿಣ SP ರೋಹನ್ ಜಗದೀಶ್ ಪ್ರತಿಕ್ರಿಯಿಸಿದ್ದು, ‘ ಶಾಂತಿಲಾಲ್ ಲೇಔಟ್​ನ ಮನೆಯೊಂದರಲ್ಲಿ ನಕಲಿ ನೋಟು ತಯಾರು ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಐಜೂರು ಪೊಲೀಸರು ದಾಳಿ ಮಾಡಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಸಂತೋಷ್, ಸಂಪತ್, ಗೋವಿಂದ್ ರಾಜ್, ರಾಜೇಶ್​​, ರೇಣುಕರಾಜ್, ಶಿವರಾಜ್, ಸತೀಶ್ ಬಂಧಿತರು.

ಇದನ್ನೂ ಓದಿ: ಬೆಂಗಳೂರಿನಲ್ಲಿ 26.6 ಕೋಟಿ ಡ್ರಗ್ಸ್, ನಕಲಿ ನೋಟು ಪ್ರಿಂಟಿಂಗ್ ಜಾಲ ಭೇದಿಸಿದ ಪೊಲೀಸರು

ಮನೆ ಮಾಲೀಕ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ. ಮನೆ ಮಾಲೀಕ ಸಂತೋಷ್​ಗೆ ಸಂಪತ್ ಪರಿಚಯ ಇರುತ್ತದೆ. ದಂಧೆ ಬಗ್ಗೆ ಸಂತೋಷ್​ಗೆ ಹೇಳಿ ಕಮಿಷನ್ ಆಮಿಷ ತೋರಿಸಿದ್ದಾರೆ. ಇನ್ನು ದಾಳಿ ವೇಳೆ ಐದು ಲಕ್ಷ ರೂ ಮೌಲ್ಯದ 10 ಬಂಡಲ್ ನೋಟು ಸಿಕ್ಕಿದೆ. ಜಾಲದ ಹಿಂದೆ ಯಾರಿದ್ದಾರೆಂದು ತನಿಖೆ ನಡೆಯುತ್ತಿದೆ. ಟೇಬಲ್, ಪೇಪರ್ ಬಂಡಲ್, ಕೆಮಿಕಲ್ ಸಲ್ಯೂಷನ್ ಹಚ್ಚುವ ಬಟ್ಟೆ, ಗ್ಲ್ಯಾಸ್ ಫಿಲ್ಮ್‌ ದೊರೆತಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:15 pm, Mon, 31 August 26

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ