AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮಾವು ಬೆಳೆಗೆ ಹೆಸರುವಾಸಿಯಾದ ಜಿಲ್ಲೆಯಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಒತ್ತಾಯ

ರಾಮನಗರ ಜಿಲ್ಲೆಯ ಮಾವು ಬೆಳೆಗಾರರು ಹಾಗೂ ಇತರೆ ತೋಟಗಾರಿಕೆ ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಆರಂಭಿಸಬೇಕು ಎನ್ನುವ ಉದ್ದೇಶದಿಂದ ಘೋಷಣೆಯಾಗಿರುವ ಬೃಹತ್ ಮಾವು ಸಂಸ್ಕರಣ ಘಟಕ ಸ್ಥಾಪನೆಗೆ ಗ್ರಹಣ ಹಿಡಿದಿದ್ದು, ಇದುವರೆಗೂ ಕಾಮಗಾರಿ ಆರಂಭಗೊಂಡಿಲ್ಲ.

ರಾಮನಗರ: ಮಾವು ಬೆಳೆಗೆ ಹೆಸರುವಾಸಿಯಾದ ಜಿಲ್ಲೆಯಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಒತ್ತಾಯ
ಮಾವಿನ ಮರ (ಸಾಂದರ್ಭಿಕ ಚಿತ್ರ)
TV9 Web
| Updated By: ganapathi bhat|

Updated on: Jan 26, 2022 | 4:15 PM

Share

ರಾಮನಗರ: ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲಿರೋ ರಾಮನಗರ ಜಿಲ್ಲೆ, ಮಾವು ಬೆಳೆಗೂ ಕೂಡ ಪ್ರಖ್ಯಾತ ಜಿಲ್ಲೆ. ಹೀಗಾಗಿ ಜಿಲ್ಲೆಯಲ್ಲಿ ಒಂದು ಮಾವು ಸಂಸ್ಕರಣ ಘಟಕ ಸ್ಥಾಪನೆ ಮಾಡಬೇಕು ಎಂಬ ಒತ್ತಾಯ ಬಹಳ ದಿನಗಳಿಂದ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೂಡ ಘಟಕ ಸ್ಥಾಪನೆಗೆ ಮುಂದಾಗಿದೆ. ಆದ್ರೆ ಘಟಕ ಸ್ಥಾಪನೆ ಘೋಷಣೆ ಮಾಡಿ ವರ್ಷಗಳೇ ಕಳೆಯುತ್ತಾ ಬಂದರೂ ಇದುವರೆಗೂ ಕಾಮಗಾರಿ ಮಾತ್ರ ಆರಂಭಗೊಂಡಿಲ್ಲ.

ರಾಮನಗರ ಜಿಲ್ಲೆಯ ಮಾವು ಬೆಳೆಗಾರರು ಹಾಗೂ ಇತರೆ ತೋಟಗಾರಿಕೆ ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಆರಂಭಿಸಬೇಕು ಎನ್ನುವ ಉದ್ದೇಶದಿಂದ ಘೋಷಣೆಯಾಗಿರುವ ಬೃಹತ್ ಮಾವು ಸಂಸ್ಕರಣ ಘಟಕ ಸ್ಥಾಪನೆಗೆ ಗ್ರಹಣ ಹಿಡಿದಿದ್ದು, ಇದುವರೆಗೂ ಕಾಮಗಾರಿ ಆರಂಭಗೊಂಡಿಲ್ಲ.

ಪ್ರತಿ ವರ್ಷ ಬರ, ಮಳೆ, ಬೆಲೆ ಕುಸಿತ ಹೀಗೆ ಒಂದಿಲ್ಲೊಂದು ಕಾರಣಕ್ಕೆ, ರಾಮನಗರ ಜಿಲ್ಲೆಯ ಮಾವು ಬೆಳೆಗಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಹೀಗಾಗಿ ಜಿಲ್ಲೆಯ ಮಾವು ಬೆಳೆಗಾರರ ಅನುಕೂಲಕ್ಕಾಗಿ ರಾಮನಗರ ಜಿಲ್ಲೆಯಲ್ಲಿ ಮಾವು ಸಂಸ್ಕರಣ ಘಟಕ ಆರಂಭಿಸಬೇಕು ಎನ್ನುವ ಬೇಡಿಕೆ ಕಳೆದ ಹಲವು ವರ್ಷಗಳಿಂದಲೂ ಇತ್ತು.

ಹೀಗಾಗಿ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮದ ಬಳಿ ಇರುವ ತೋಟಗಾರಿಕೆ ಇಲಾಖೆಗೆ ಸೇರಿದ 15 ಎಕರೆ ಜಮೀನಿನಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಸರ್ಕಾರ ಮುಂದಾಗಿತ್ತು. ಆದ್ರೆ ಘಟಕ ಸ್ಥಾಪನೆ ಘೋಷಣೆ ಮಾಡಿ ವರ್ಷಗಳೆ ಕಳೆಯುತ್ತ ಬಂದರೂ ಇದುವರೆಗೂ ಕಾಮಗಾರಿ ಆರಂಭಗೊಂಡಿಲ್ಲ. ಇನ್ನು ಈ ಬಗ್ಗೆ ತೋಟಗಾರಿಕೆ ಇಲಾಖೆ ಜಿಲ್ಲಾ ಉಪನಿರ್ದೇಶಕರನ್ನ ಕೇಳಿದ್ರೆ, ಇನ್ನು ಕೆಲವು ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎನ್ನುತ್ತಿದ್ದಾರೆ.

ಜಿಲ್ಲೆಯಲ್ಲಿ ವಾರ್ಷಿಕ ಸುಮಾರು 2.5 ಲಕ್ಷ ಟನ್ ಗಳಷ್ಟು ಮಾವು ಇಳುವರಿ

ಅಂದಹಾಗೆ ರಾಮನಗರ ಜಿಲ್ಲೆ ಮಾವು ಬೆಳೆಯುವಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನದಲ್ಲಿ ಇದ್ದು, ರಾಜ್ಯಕ್ಕೆ ಮಾವಿನ ಫಸಲು ಮೊದಲು ರಾಮನಗರ ಜಿಲ್ಲೆಯಿಂದಲೇ ಮಾರುಕಟ್ಟೆಗೆ ಬರುವುದು. ಇನ್ನು ರಾಮನಗರ ಜಿಲ್ಲೆಯಲ್ಲಿ ಸುಮಾರು 32 ಸಾವಿರ ಹೆಕ್ಟರ್ ಗೂ ಹೆಚ್ಚಿನ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ವಾರ್ಷಿಕ ಸುಮಾರು 2.5 ಲಕ್ಷ ಟನ್ ಗಳಷ್ಟು ಇಳುವರಿ ಜಿಲ್ಲೆಯಲ್ಲಿ ಇದೆ. ವಾರ್ಷಿಕವಾಗಿ ಸುಮಾರು 400 ಕೋಟಿ ರೂಪಾಯಿಯಷ್ಟು ವಹಿವಾಟು ನಡೆಯುತ್ತಿದೆ.

ಸಂಸ್ಕರಣಾ ಘಟಕದಿಂದ ಏನು ಉಪಯೋಗ?

ಒಟ್ಟು ಉತ್ಪನ್ನದಲ್ಲಿ ಸುಮಾರು 50 ಸಾವಿರ ಟನ್​ನಷ್ಟು ಹಣ್ಣು ಸಂಸ್ಕರಣೆಗೆ ಸಿಗಲಿದೆ. ಮಾವಿನ ಕಾಲದಲ್ಲಿ ಮಾವು ಸಂಸ್ಕರಣೆ ಮಾಡಿ, ಉಳಿದ ಅವಧಿಯಲ್ಲಿ ಬಾಳೆ, ಸಪೋಟಾ, ಪಪ್ಪಾಯ, ನೀಲಿದ್ರಾಕ್ಷಿ ಹಣ್ಣುಗಳ ಸಂಸ್ಕರಣೆ ಹಾಗೂ ಎಳೆನೀರಿನ ಟೆಟ್ರಾ ಪ್ಯಾಕ್ ಗಳನ್ನು ಮಾಡಲು ಈ ಘಟಕವನ್ನು ಬಳಸಿಕೊಳ್ಳಲು ಚಿಂತಿಸಲಾಗಿದೆ. ಇನ್ನು ಮಾವು ಬೆಳೆ ಹೆಚ್ಚಾಗಿ ಬಂದಾಗ, ಅದನ್ನ ಉಪ ಉತ್ಪನ್ನಗಳನ್ನ ಮಾಡಲು ಅನುಕೂಲವಾಗಲಿದೆ. ಅಲ್ಲದೇ ಇಲ್ಲಿಂದಲೇ ಬೇರೆ ದೇಶಗಳಿಗೆ ಮಾವನ್ನ ರಫ್ತು ಮಾಡಲು ಅನುಕೂಲವಾಗಲಿದೆ.

ಇದರಿಂದಾಗಿ ರೈತರಿಗೆ ಉತ್ತಮ ಬೆಲೆ ಸಹಾ ಸಿಗಲಿದೆ. ಆದ್ರೆ ಸರ್ಕಾರ ಮಾತ್ರ ಇದುವರೆಗೂ ಕಾಮಗಾರಿ ಆರಂಭಿಸಿಲ್ಲ. ಹೀಗಾಗಿ ಕೂಡಲೇ ಕಾಮಗಾರಿ ಆರಂಭಿಸಬೇಕೆಂದು ಮಾವು ಬೆಳೆಗಾರರು ಒತ್ತಾಯ ಮಾಡುತ್ತಿದ್ದಾರೆ. ಒಟ್ಟಾರೆ ಮಾವು ಬೆಳೆಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆರಂಭಗೊಳ್ಳಬೇಕಾದ ಮಾವು ಸಂಸ್ಕರಣಾ ಘಟಕ ರಾಮನಗರ ಜಿಲ್ಲೆಯಲ್ಲಿ ಇದುವರೆಗೂ ಆರಂಭಗೊಂಡಿಲ್ಲ. ಇನ್ನಾದ್ರು ಸರ್ಕಾರ ಈ ಬಗ್ಗೆ ಸೂಕ್ತ ಗಮನಹರಿಸಿ ಶೀಘ್ರವೇ ಘಟಕ ಆರಂಭಿಸಬೇಕಿದೆ.

ವಿಶೇಷ ವರದಿ: ಪ್ರಶಾಂತ್ ಹುಲಿಕೆರೆ, ಟಿವಿ9 ರಾಮನಗರ

ಇದನ್ನೂ ಓದಿ: ಟಿವಿ9 ವರದಿಯಲ್ಲಿ ವರದಿ ಬಿತ್ತರಗೊಂಡ ನಂತರ ಬಳ್ಳಾರಿಯ ಸಹೃದಯಿಗಳು ಹಣ್ಣು ವ್ಯಾಪಾರಿ ಸಂಧ್ಯಾಬಾಯಿಗೆ ಸಹಾಯ ಮಾಡುತ್ತಿದ್ದಾರೆ!

ಇದನ್ನೂ ಓದಿ: ಪ್ರತಿದಿನ ಹಸಿ ಬಾಳೆಹಣ್ಣು ಸೇವಿಸುವುದರಿಂದಾಗುವ ಆರೋಗ್ಯ ಪ್ರಯೋಜನಗಳೇನು; ಇಲ್ಲಿದೆ ಮಾಹಿತಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ