ಟೋಲ್​ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ; ಫಾಲೋ ಮಾಡಿಕೊಂಡು ಹೋಗಿ ಟೋಲ್​ ಸಿಬ್ಬಂದಿ ಹತ್ಯೆ

Ramanagara: ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್​​ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಪವನ್ ‌ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

ಟೋಲ್​ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ; ಫಾಲೋ ಮಾಡಿಕೊಂಡು ಹೋಗಿ ಟೋಲ್​ ಸಿಬ್ಬಂದಿ ಹತ್ಯೆ
ಟೋಲ್​ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ
Follow us
ಆಯೇಷಾ ಬಾನು
|

Updated on:Jun 05, 2023 | 10:17 AM

ರಾಮನಗರ: ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದಿದ್ದು ಈ ಜಗಳ ಕೊಲೆಯಲ್ಲಿ(Murder) ಅಂತ್ಯ ಕಂಡಿದೆ. ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಮಾರಾಮಾರಿಯಾಗಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್​ನಲ್ಲಿ ಕೆಲಸ ಮಾಡ್ತಿದ್ದ ಪವನ್​ಕುಮಾರ್​(26) ಹತ್ಯೆ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್​​ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಪವನ್ ‌ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಟೋಲ್​ನಿಂದ ಹಿಂಬಾಲಿಸಿಕೊಂಡು ಬಂದು ದುಷ್ಕರ್ಮಿಗಳು ಪವನ್​​ ಹತ್ಯೆಗೈದಿದ್ದಾರೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಪವನ್ ಹೊರಟ್ಟಿದ್ದ. ಈ ವೇಳೆ ಪವನ್​ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ಸ್ಟಿಕ್​ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ಆರೋಪಿಗಳಿಗಾಗಿ ಬಿಡದಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ: ಮದ್ವೆಗೆ 5 ದಿನ ಮೊದಲೇ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹಿಳೆಯೊಂದಿಗಿನ ಲವ್ವಿಡವ್ವಿಯೇ ಕಾರಣ

ಮಂಡ್ಯದಲ್ಲಿ ಯುವತಿ ಶವ ಪತ್ತೆ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಬೂದನೂರು ಕೆರೆಯಲ್ಲಿ ಯುವತಿ ಶವ ಪತ್ತೆಯಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಚಾಂದಿನಿ(22) ಎಂಬ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ಕೆರೆಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಮೃತ ಚಾಂದಿನಿ ನಿನ್ನೆ ಮಧ್ಯಾಹ್ನ ಯುವಕನ ಜತೆ ಬೈಕ್​ನಲ್ಲಿ ಕೆರೆ ಬಳಿ ಬಂದಿದ್ದಳು. ಕೆಲಕಾಲ ಕೆರೆಯ ಬಳಿ ಕುಳಿತಿರುವುದಾಗಿ ಸ್ಥಳೀಯರಿಂದ ಮಾಹಿತಿ ಸಿಕ್ಕಿದೆ. ಕೆರೆ ದಡದಲ್ಲಿ ಯುವತಿ ಚಪ್ಪಲಿ, ಬ್ಯಾಗ್​ ಪತ್ತೆ ಹಿನ್ನೆಲೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕೆರೆ ಬಳಿ ಬಿದ್ದ ವಸ್ತುಗಳನ್ನು ನೋಡಿದ ಗ್ರಾಮಸ್ಥರು ಅನುಮಾನದಿಂದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವತಿ ಚಾಂದಿನಿ ಮೃತದೇಹ ಮೇಲೆತ್ತಿ ಮಿಮ್ಸ್​ಗೆ ಸ್ಥಳಾಂತರ ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:15 am, Mon, 5 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ