AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೇನು ಅಂಬರೀಶ್‌ಗೆ ಗುಲಾಮ ಆಗಿದ್ದೆನಾ? ಜನಸಾಮಾನ್ಯರು ಬಂದರೂ ನಾನು ಕೈಕಟ್ಟಿ ನಿಲ್ಲುತ್ತೇನೆ: ಕುಮಾರಸ್ವಾಮಿ ತಿರುಗೇಟು

ಆ ಹೆಣ್ಣು ಮಗಳ ಬಗ್ಗೆ ಚರ್ಚೆ ಮಾಡಬೇಡಿ. ಚುನಾವಣೆ ಬಂದಾಗ ಚರ್ಚೆ ಮಾಡೋಣಾ. ದೇಶದಲ್ಲಿ ಹಲವಾರು ಸಮಸ್ಯೆ ಇದೆ. ಈಗ ಅಂತಹ ಸಮಸ್ಯೆಗಳ ಬಗ್ಗೆ ಚರ್ಚಿಸೋಣ ಎಂದು ಅವರು ಮಾಧ್ಯಮಗಳಿಗೆ ಸ್ವಲ್ಪ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ನಾನೇನು ಅಂಬರೀಶ್‌ಗೆ ಗುಲಾಮ ಆಗಿದ್ದೆನಾ? ಜನಸಾಮಾನ್ಯರು ಬಂದರೂ ನಾನು ಕೈಕಟ್ಟಿ ನಿಲ್ಲುತ್ತೇನೆ: ಕುಮಾರಸ್ವಾಮಿ ತಿರುಗೇಟು
ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಜಟಾಪಟಿ
TV9 Web
| Edited By: |

Updated on: Jul 08, 2021 | 3:09 PM

Share

ರಾಮನಗರ: ಅಂಬರೀಶ್ ಎದುರು ಮಾಜಿ ಕೈಕಟ್ಟಿ ನಿಂತಿದ್ದ ತಮ್ಮ ಫೋಟೋ ವೈರಲ್ ಆಗುತ್ತಿದ್ದ ವಿಷಯವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಖಾರದ ಪ್ರತಿಕ್ರಿಯೆ ನೀಡಿದ್ದಾರೆ. ನಾನೇನು ಅಂಬರೀಶ್‌ಗೆ ಗುಲಾಮ ಆಗಿದ್ದೆನಾ? ಜನಸಾಮಾನ್ಯರು ಬಂದರೂ ನಾನು ಕೈಕಟ್ಟಿ ನಿಲ್ಲುತ್ತೇನೆ. ದಯವಿಟ್ಟು ಈ ವಿಚಾರವನ್ನು ವೈಭವೀಕರಿಸಬೇಡಿ. ಈ ಮೂಲಕ ಅವರಿಗೆ ಸ್ಕೋಪ್ ಕೊಡಬೇಡಿ. ನಾವು ಜನರ ಮಧ್ಯದಿಂದ ಬಂದಿರುವವರು ಎಂದು ಅವರು ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿ ಅವರು ತಿರುಗೇಟು ನೀಡಿದ್ದಾರೆ.

ಕೈ ಕಟ್ಟಿ ನಿಂತಿಕೊಂಡಿರುವ ಬಗ್ಗೆ ನನಗೇನು ಲಾಭವಿದೆ? ಎಂದು ಪ್ರಶ್ನಿಸಿರುವ ಅವರು, ಈಗ ರಾಜ್ಯದ ವಿಷಯ ಬಗ್ಗೆ ಚರ್ಚೆ ಮಾಡೋಣ. ಭೃಷ್ಟಾಚಾರದ ವಿಚಾರದಲ್ಲಿ ನಮ್ಮ ದೇವೇಗೌಡರು ಮತ್ತು ಕುಟುಂಬ ಹೋರಾಟ ಮಾಡಿದ್ದೇವೆ. ಈ ವಿಚಾರದಲ್ಲಿ ನಮ್ಮ ಕುಟುಂಬ ರಾಜಿ ಆಗಿಲ್ಲ. ಹಲವಾರು ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ದಾಖಲೆ ಬಿಡುಗಡೆ ಮಾಡಿದ್ದೇವೆ. ಆ ಹೆಣ್ಣು ಮಗಳ ಬಗ್ಗೆ ಚರ್ಚೆ ಮಾಡಬೇಡಿ. ಚುನಾವಣೆ ಬಂದಾಗ ಚರ್ಚೆ ಮಾಡೋಣಾ. ದೇಶದಲ್ಲಿ ಹಲವಾರು ಸಮಸ್ಯೆ ಇದೆ. ಈಗ ಅಂತಹ ಸಮಸ್ಯೆಗಳ ಬಗ್ಗೆ ಚರ್ಚಿಸೋಣ ಎಂದು ಅವರು ಮಾಧ್ಯಮಗಳಿಗೆ ಸ್ವಲ್ಪ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಕೆಆರ್​ಎಸ್​ ಅಣೆಕಟ್ಟು ಬಿರುಕು ವಿವಾದಕ್ಕೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ನಡುವಿನ ಜಟಾಪಟಿ ಸಾಮಾಜಿಕ ಜಾಲತಾಣಗಳಲ್ಲೂ ಕಾವು ಪಡೆದಿತ್ತು. ಅಂಬರೀಶ್ ಮುಂದೆ ಕೈಕಟ್ಟಿ ನಿಲ್ಲುತ್ತಿದ್ದವರೆಲ್ಲಾ ಈಗ ಮಾತನಾಡುತ್ತಿದ್ದಾರೆ ಎಂಬ ಸುಮಲತಾ ಹೇಳಿಕೆಯ ಬೆನ್ನಲ್ಲೇ ಅದನ್ನು ಸಾಕ್ಷಿ ಸಮೇತ ಸಾಬೀತುಪಡಿಸುತ್ತಿರುವ ಸುಮಲತಾ ಅಂಬರೀಶ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ಫೋಟೋ ಒಂದನ್ನು ವೈರಲ್​ ಮಾಡಿದ್ದರು. ಸುಮಲತಾ ಬೆಂಬಲಿಗರ ಸಾಮಾಜಿಕ ಜಾಲತಾಣಗಳ ಪುಟಗಳಲ್ಲಿ ಫೋಟೋವನ್ನು ಹರಿಬಿಡಲಾಗಿದ್ದು, ಕುಮಾರಸ್ವಾಮಿಯವರನ್ನು ಅಪಹಾಸ್ಯ ಮಾಡಲಾಗಿತ್ತು. ಇದೀಗ ವೈರಲ್ ಆದ ಫೋಟೊದ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ತಿರುಗೇಟು ಕೊಟ್ಟ ಹೆಚ್​ಡಿಕೆ ಬೆಂಬಲಿಗರು ಇತ್ತ ಈ ಫೋಟೋ ಮೂಲಕ ಸುಮಲತಾ ಬೆಂಬಲಿಗರು ಜೆಡಿಎಸ್​ ನಾಯಕರಿಗೆ ತಿರುಗೇಟು ಕೊಡುತ್ತಿದ್ದರೆ ಅತ್ತ ಲಿಂಗ ಸಿನಿಮಾದ ಖಳನಾಯಕನಿಗೆ ಸಂಸದೆ ಸುಮಲತಾರನ್ನು ಹೋಲಿಕೆ ಮಾಡಿ ಹೆಚ್​.ಡಿ.ಕುಮಾರಸ್ವಾಮಿ ಬೆಂಬಲಿಗರು ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಕರ್ನಾಟಕ ಕುಮಾರ ಪಡೆ ಹೆಸರಿನೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಈ ಫೋಸ್ಟ್ ತೇಲಿಬಿಡಲಾಗಿದ್ದು, ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ಲಿಂಗ ಚಿತ್ರದ ಖಳನಾಯಕ ಕೂಡ ಸಂಸದ. ಅದರ ಕತೆಯೂ ಡ್ಯಾಂ ಸುತ್ತಲೂ ನಡೆಯುವುದಾಗಿದ್ದು ಇದರಂತೆಯೇ ಇದೆ ಎಂದು ಗೇಲಿ ಮಾಡಿದ್ದಾರೆ.

ಇದನ್ನೂ ಓದಿ: 

ಹುಲಿ ಮುಂದೆ ಇಲಿಯಂತೆ ನಿಂತವರು ಯಾರು? ಕುಮಾರಸ್ವಾಮಿಯನ್ನು ಅಪಹಾಸ್ಯ ಮಾಡಿದ ಸುಮಲತಾ ಬೆಂಬಲಿಗರು

‘ಸ್ಯಾಂಡಲ್​ವುಡ್​ ಸ್ಮಗ್ಲರ್’​ ಟ್ಯಾಗ್​ ಕೊಟ್ಟು ನನ್ನ ಮತ್ತು ಆದಿಚುಂಚನಗಿರಿ ಮಠಾಧೀಶರ ದೂರವಾಣಿ ಕದ್ದಾಲಿಸಲಾಗಿದೆ: ಸಂಸದೆ ಸುಮಲತಾ ಗಂಭೀರ ಆರೋಪ

(Former CM HD Kumaraswamy reacts on viral photo Am I a slave to Ambarish? Even if the common man come I will stand up)

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ