AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಮತ್ತೆ ಕಾರ್ಯಕರ್ತರ ಕಿತ್ತಾಟ: ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ

ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಮನಗರ ಜಿಲ್ಲಾ ರಾಜಕೀಯದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯುತ್ತಲೇ ಇವೆ.

ರಾಮನಗರದಲ್ಲಿ ಮತ್ತೆ ಕಾರ್ಯಕರ್ತರ ಕಿತ್ತಾಟ: ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ
ಜೆಡಿಎಸ್​ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ
TV9 Web
| Edited By: |

Updated on:Nov 02, 2022 | 5:20 PM

Share

ರಾಮನಗರ: ರಾಮನಗರದಲ್ಲಿ ರಾಜಕೀಯ ಪಕ್ಷಗಳ ನಡುವೆ ಕಿತ್ತಾಟ ಜೋರಾಗುತ್ತಿದ್ದು, ಈ ಹಿಂದೆ ಕಾಮಗಾರಿ ಶಂಕುಸ್ಥಾಪನೆ ವಿಚಾರವಾಗಿ ಜೆಡಿಎಸ್​ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ವಿಧಾನ ಪರಿಷತ್​ ಸದಸ್ಯ ಸಿ.ಪಿ ಯೋಗೆಶ್ವರ ಕಾರಿನ ಮೇಲೆ ಜೆಡಿಎಸ್​ ಕಾರ್ಯಕರ್ತರು ಕಲ್ಲು ಎಸೆದಿದ್ದರು. ಈಗ ಮತ್ತೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ವಿಚಾರವಾಗಿ ಜೆಡಿಎಸ್​ ಕಾರ್ಯಕರ್ತರು ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಿದ್ದಾರೆ. ಹೌದು ಇಂದು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆಗೆ ಮಾಜಿ ಕಾಂಗ್ರೆಸ್​ ಶಾಸಕ ಹೆಚ್​.ಸಿ.ಬಾಲಕೃಷ್ಣ ಆಗಮಿಸಿದ್ದರು. ಇದಕ್ಕೆ ಜೆಡಿಎಸ್​ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಇನ್ನೂ ಕಾರ್ಯಕ್ರಮದ ಬ್ಯಾನರ್​ನಲ್ಲಿ ಶಾಸಕ ಮಂಜುನಾಥ್ ಹೆಸರು ಕೊನೆಯಲ್ಲಿ ಹಾಕಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ.

ಇದರ ಮಧ್ಯಯೇ ಬಾಲಕೃಷ್ಣ ಕಟ್ಟಡವನ್ನು ಉದ್ಘಾಟಿಸಿ ಕಾರಿನಲ್ಲಿ ವಾಪಸ್​ ಆಗುತ್ತಿರುವಾಗ ಕಾರಿನ ಮೇಲೆ ಜೆಡಿಎಸ್​​ ಕಾರ್ಯಕರ್ತರು ಕಲ್ಲು ತೂರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕುದೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಸಿದ್ದಾರೆ .

ಗಲಾಟೆಗೆ ಸಚಿವ ಅಶ್ವತ್ಥ್ ನಾರಾಯಣ ಸಂಬಂಧಿ ಶ್ರೀಧರ್​​ ಕಾರಣ

ಈ ಕುರಿತು ಮಾತನಾಡಿದ ಮಾಜಿ ಶಾಸಕ ಹೆಚ್​.ಸಿ.ಬಾಲಕೃಷ್ಣ ಶಿಷ್ಟಾಚಾರ ಪ್ರಕಾರವೇ ಉದ್ಘಾಟನೆ ಕಾರ್ಯಕ್ರಮ ನಡೆದಿದೆ. ಶಿಷ್ಟಾಚಾರ ಉಲ್ಲಂಘನೆ ಎಂದು ಆರೋಪಿಸಿ ಗಲಾಟೆ ಮಾಡಿದ್ದಾರೆ. ಗಲಾಟೆಗೆ ಸಚಿವ ಅಶ್ವತ್ಥ್ ನಾರಾಯಣ ಸಂಬಂಧಿ ಶ್ರೀಧರ್​​ ಕಾರಣ. ಶ್ರೀಧರ್​ ತನ್ನ ಪಟಾಲಂ ಕಟ್ಟಿಕೊಂಡು ಬಂದು ಗಲಾಟೆ ಮಾಡಿದ್ದಾನೆ. ಗಲಾಟೆ ಮಾಡಿದವರು ಕಾಂಗ್ರೆಸ್, ಜೆಡಿಎಸ್​ನವರ ಅಲ್ಲ ಬದಲಿಗೆ ಬಿಜೆಪಿ ಕಡೆಯವರು ಗಲಾಟೆ ಮಾಡಿದ್ದಾರೆ. ನಮ್ಮ ಕಾರಿನ ಮೇಲೂ ಕಲ್ಲು ಎಸೆದಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Wed, 2 November 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ