ರಾಮನಗರ: ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ; 1 ಕೆಜಿ ಗಾಂಜಾ ವಶ
ಆದಿತ್ಯ ಕುಮಾರ್, ಕಿರಣ್ ಕಲ್ಯಾಣ್, ರುತ್ವಿಕ್, ದಿಲೀಪ್ ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆಜಿ, 693 ಗ್ರಾಂ ಗಾಂಜಾ ಹಾಗೂ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೊಸಹಳ್ಳಿ ಗ್ರಾಮದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಗಳು ಸೆರೆ ಸಿಕ್ಕಿದ್ದಾರೆ.
ರಾಮನಗರ: ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ. ಆದಿತ್ಯ ಕುಮಾರ್, ಕಿರಣ್ ಕಲ್ಯಾಣ್, ರುತ್ವಿಕ್, ದಿಲೀಪ್ ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆಜಿ, 693 ಗ್ರಾಂ ಗಾಂಜಾ ಹಾಗೂ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೊಸಹಳ್ಳಿ ಗ್ರಾಮದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಗಳು ಸೆರೆ ಸಿಕ್ಕಿದ್ದಾರೆ.
ಹಾವೇರಿ: ಕಳ್ಳಬಟ್ಟಿ ಸಾರಾಯಿ ತಯಾರಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರಿಕೆ ಅಡ್ಡೆ ಮೇಲೆ ಪೋಲಿಸರು ದಾಳಿ ಮಾಡಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪ ಗ್ರಾಮದಲ್ಲಿ ನಾಲ್ಕು ಸಾವಿರ ಲೀಟರ್ನಷ್ಟು ಕಳ್ಳಬಟ್ಟಿ ಸಾರಾಯಿ ತಯಾರಿಕೆಗೆ ಬಳಸುತ್ತಿದ್ದ ಕೊಳೆ ನಾಶವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಎಸ್ಪಿ ವಿಜಯಕುಮಾರ ಶಿಗ್ಗಾಂವಿ, ಡಿವೈಎಸ್ಪಿ ಕಲ್ಲೇಶಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಪೊಲೀಸ್ ಇಲಾಖೆ ಮತ್ತು ಅಬಕಾರಿ ಪೊಲೀಸರ ಜಂಟಿ ಕಾರ್ಯಾಚರಣೆ ಇದಾಗಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ್ದ ವಿಲ್ಸನ್ ಗಾರ್ಡನ್ ನಾಗನ 6 ಸಹಚರರು ಅರೆಸ್ಟ್ ದರೋಡೆಗೆ ಸಂಚು ರೂಪಿಸಿದ್ದ ವಿಲ್ಸನ್ ಗಾರ್ಡನ್ ನಾಗನ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಗಾರ್ಡನ್ ನಾಗನ ಆರು ಮಂದಿ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಆರೋಪಿಗಳ ಬಳಿ ಇದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಕುಖ್ಯಾತ ರೌಡಿಯಾಗಿರುವ ಜೈಲಿನಲ್ಲಿದ್ದುಕೊಂಡೆ ಬಬ್ಲಿ ಹತ್ಯೆ ನಡೆಸಿದ್ದ. ಕಳೆದ ಕೆಲ ತಿಂಗಳ ಹಿಂದೆ ಕೊರಮಂಗಲದಲ್ಲಿ ಹತ್ಯೆ ನಡೆದಿತ್ತು. ಸದ್ಯ ವಿಲ್ಸನ್ ಗಾರ್ಡನ್ ನಾಗನನ್ನು ಕೊರಮಂಗಲ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಈ ನಡುವೆಯೂ ಆತನ ಸಹಚರರು ಮಾತ್ರ ಫುಲ್ ಆಕ್ಟಿವ್ ಆಗಿದ್ದಾರೆ. ಅವರ ಪುಂಡಾಟ ಇನ್ನೂ ನಿಂತಿಲ್ಲ.
ವಿಲ್ಸನ್ ಗಾರ್ಡನ್ ನಾಗ ಪೊಲೀಸರ ವಶದಲ್ಲಿದ್ದರು ಆತನ ಸಹಚರರು ದರೋಡೆಗೆ ಸಂಚು ರೂಪಿಸಿದ್ದಾರೆ. ಸದ್ಯ ದರೋಡೆಗೆ ಸಂಚು ರೂಪಿಸಿದ್ದ 6 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ನೆಲಮಂಗಲ: ಎಟಿಎಂನಲ್ಲಿದ್ದ ಹಣ ಕಳ್ಳತನಕ್ಕೆ ಯತ್ನಿಸಿ ವಿಫಲ ಪ್ರಯತ್ನ, ಪಾರ್ಕ್ ನಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ಅರೆಸ್ಟ್
ಟ್ರಕ್‌ನಲ್ಲಿ ಸಾಗಿಸುತ್ತಿದ್ದ 3,400 ಕೆಜಿ ಗಾಂಜಾ ಜಪ್ತಿ; 21 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ
Published On - 9:53 am, Tue, 5 October 21