ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು: 10 ಮಕ್ಕಳಿಗೆ ಸುಸ್ತು, ಜ್ವರ, ಕೆಮ್ಮು

ಸರ್ಕಾರಿ ಪ್ರಾಥಮಿಕ ಶಾಲೆಯ 10 ಮಕ್ಕಳಿಗೆ ಸುಸ್ತು, ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಯಲ್ಲೇ ಎಲ್ಲಾ ಮಕ್ಕಳಿಗೂ ವೈದ್ಯರು ಕೊವಿಡ್ ಟೆಸ್ಟ್ ಮಾಡಿದ್ದಾರೆ.

ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು: 10 ಮಕ್ಕಳಿಗೆ ಸುಸ್ತು, ಜ್ವರ, ಕೆಮ್ಮು
ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು
Follow us
TV9 Web
| Updated By: preethi shettigar

Updated on:Dec 18, 2021 | 2:20 PM

ರಾಮನಗರ: ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾದ ಘಟನೆ ರಾಮನಗರ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಪ್ರಾಥಮಿಕ ಶಾಲೆಯ (Government School) 10 ಮಕ್ಕಳಿಗೆ ಸುಸ್ತು, ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಯಲ್ಲೇ ಎಲ್ಲಾ ಮಕ್ಕಳಿಗೂ ವೈದ್ಯರು ಕೊವಿಡ್ ಟೆಸ್ಟ್ ಮಾಡಿದ್ದಾರೆ.

ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 95 ಮಕ್ಕಳು ಅಸ್ವಸ್ಥ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 95 ಮಕ್ಕಳು ನಿನ್ನೆ (ಡಿಸೆಂಬರ್​ 17) ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿರುವ ಅಲ್ಪಸಂಖ್ಯಾತರ ಶಾಲೆಯಲ್ಲಿ ನಡೆದಿತ್ತು. ರಾತ್ರಿ ಅನ್ನ ಸಾಂಬಾರ್, ಬೆಳಗ್ಗೆ ಚಿತ್ರಾನ್ನ ಸೇವಿಸಿದ್ದ ಮಕ್ಕಳು ವಾಂತಿ, ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. 95 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಅಸ್ವಸ್ಥಗೊಂಡ 50 ವಿದ್ಯಾರ್ಥಿಗಳಿಗೆ ಜಗಳೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೊರಾರ್ಜಿ ವಸತಿ ಶಾಲೆಯಲ್ಲೇ 45 ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವಸತಿ ಶಾಲೆಗೆ ತಹಶೀಲ್ದಾರ್, ಟಿಹೆಚ್​ಒ, ಮಕ್ಕಳ ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳು ಸೇವಿಸಿದ್ದ ಆಹಾರವನ್ನು ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ.

ಗದಗ: ವಸತಿ ನಿಲಯದಲ್ಲಿ ಹಸಿವು ತಾಳದೆ ವಿದ್ಯಾರ್ಥಿಗಳ ಪರದಾಟ ಹಸಿವು ತಾಳಲಾರದೆ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಗದಗ ಜಿಲ್ಲೆಯ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ನಡೆದಿದೆ. ಸಮರ್ಪಕವಾಗಿ ಹಾಸ್ಟೆಲ್ ಸಿಬ್ಬಂದಿಗಳು ಊಟ ‌ನೀಡದೆ ಇರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಹಾಸ್ಟೆಲ್​ ಸಿಬ್ಬಂದಿಗಳ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿಗಳು ರಾತ್ರೋರಾತ್ರಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ.

120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಪರದಾಟ ನಡೆಸುತ್ತಿದ್ದು, ರಾತ್ರಿ ಊಟ ಸಿಗದಿದಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ ಅಲ್ಲದೇ ಹಾಸ್ಟೆಲ್ ವಾರ್ಡ್ ನ ಹಾಗೂ ಸಿಬ್ಬಂದಿಗಳ ಮೇಲೆ‌ ಸೂಕ್ತವಾದ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ಜತೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 95 ಮಕ್ಕಳು ಅಸ್ವಸ್ಥ; ಆಸ್ಪತ್ರೆಯಲ್ಲಿ ಚಿಕಿತ್ಸೆ

ತಡವಾಗಿ ಆರ್ಡರ್ ಮಾಡಿದ್ದ ಅಸ್ವಸ್ಥ ಗ್ರಾಹಕನಿಗೆ ಉಚಿತ ಫುಡ್ ಜೊತೆ ಪ್ರೀತಿಯ ಸಂದೇಶ ಕಳುಹಿಸಿದ ರೆಸ್ಟೋರೆಂಟ್; ಹೃದಯಸ್ಪರ್ಶಿ ಸ್ಟೋರಿ ಓದಿ

Published On - 2:11 pm, Sat, 18 December 21

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ