Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದ ಈ ಪ್ರದೇಶಗಳ ಜನರೇ ಗಮನಿಸಿ: ಭೂ ಸ್ವಾಧೀನ ಅಧಿಸೂಚನೆ ಹೊರಡಿಸಿದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಬಿಡದಿ ಸಮಗ್ರ ಉಪನಗರ ಯೋಜನೆಗಾಗಿ ರಾಮನಗರ ತಾಲೂಕಿನ ಹಲವು ಗ್ರಾಮಗಳಲ್ಲಿ 1800 ಕ್ಕೂ ಹೆಚ್ಚು ಸರ್ವೆ ನಂಬರ್‌ಗಳನ್ನು ಒಳಗೊಂಡ ಭೂಸ್ವಾಧೀನ ಅಧಿಸೂಚನೆಯನ್ನು ಹೊರಡಿಸಿದೆ. ಆ ಮೂಲಕ ರಾಮನಗರ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಭೂಸ್ವಾಧೀನ ಪ್ರಕ್ರಿಯೆಗೆ ಆಕ್ಷೇಪಣೆ ಇದ್ದರೆ 30 ದಿನಗಳ ಒಳಗೆ ಸಲ್ಲಿಸಲು ತಿಳಿಸಲಾಗಿದೆ.

ರಾಮನಗರದ ಈ ಪ್ರದೇಶಗಳ ಜನರೇ ಗಮನಿಸಿ: ಭೂ ಸ್ವಾಧೀನ ಅಧಿಸೂಚನೆ ಹೊರಡಿಸಿದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Mar 26, 2025 | 12:14 PM

ರಾಮನಗರ, ಮಾರ್ಚ್​ 26: ಗ್ರೇಟರ್ ಬೆಂಗಳೂರಿಗೆ (Greater Bengaluru) ಈಗಾಗಲೇ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಇದು ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಜಟಾಪಟಿಗೂ ಕಾರಣವಾಗಿತ್ತು. ಇನ್ನು ಇತ್ತೀಚೆಗೆ ಗ್ರೇಟರ್ ಬೆಂಗಳೂರು ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು. ಆ ಮೂಲಕ ಮಹಾನಗರವನ್ನ ಐದು ಭಾಗಗಳಾಗಿ ವಿಂಗಡಿಸಲು ಸರ್ಕಾರ ಮುಂದಾಗಿತ್ತು. ಇದೆಲ್ಲದರ ಮಧ್ಯೆ ಇದೀಗ ಬಿಡದಿ ಸಮಗ್ರ ಉಪನಗರ ಯೋಜನೆ ಅನುಷ್ಠಾನಕ್ಕೆ ಭೂ ಸ್ವಾಧೀನ (Land Acquisition) ಪ್ರಕ್ರಿಯೆ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.

ಎಲ್ಲೆಲ್ಲಿ ಭೂ ಸ್ವಾಧೀನ

ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಕೆ.ಜಿ.ಗೊಲ್ಲರಪಾಳ್ಯ, ಕೆಂಪಯ್ಯನಪಾಳ್ಯ, ಬನ್ನಿಗಿರಿ, ಭೈರಮಂಗಲ, ಕಂಚುಗಾರನಹಳ್ಳಿ, ಮಂಡಲಹಳ್ಳಿ, ವಡೇರಹಳ್ಳಿ ಗ್ರಾಮಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗೆ ಪ್ರಾಧಿಕಾರ ಮುಂದಾಗಿದೆ.

ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವಿಧೇಯಕ: ಇದು ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದ ಆರ್​​ ಅಶೋಕ್​

ಇದನ್ನೂ ಓದಿ
Image
ಡಿಕೆ ಶಿವಕುಮಾರ್​​ಗೆ ಮತ್ತೊಂದು ಶಾಕ್ ಕೊಡಲು ಬಿಜೆಪಿ ಪ್ಲ್ಯಾನ್..!
Image
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
Image
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
Image
ಗ್ರೇಟರ್ ಬೆಂಗಳೂರು ವಿಧೇಯಕ: ಇದು ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದ ಅಶೋಕ್​

ಭೂಸ್ವಾಧೀನ ಪ್ರಕ್ರಿಯೆಗೆ ಆಕ್ಷೇಪಣೆ ಇದ್ದರೆ 30 ದಿನದೊಳಗೆ ಸಲ್ಲಿಸಲು ಸೂಚಿಸಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟ ಜಮೀನುಗಳ ವಿವರ ನೀಡಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, 1800ಕ್ಕೂ ಹೆಚ್ಚು ಸರ್ವೆ ನಂಬರ್​ಗಳು ಭೂ ಸ್ವಾಧೀನಕ್ಕೆ ನೋಟಿಫಿಕೇಶನ್ ಹೊರಡಿಸಿದೆ.

ಯೋಜನೆಯ ಭೂಸ್ವಾಧೀನಕ್ಕಾಗಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987ರ ಕಲಂ 17,18,19,35 ಮತ್ತು 36 ಉಪಬಂಧಗಳನ್ವಯ ವಿಶೇಷ ಭೂಸ್ವಾಧೀನಾಧಿಕಾರಿ-1&2 ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಅವರ ಸಿಬ್ಬಂದಿಗಳನ್ನು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯೋಚಿತ ಪರಿಹಾರ, ಪುನರ್ ವಸತಿ ಮತ್ತು ಪುನರ್ ವ್ಯವಸ್ಥೆ ಹಕ್ಕು ಅಧಿನಿಯಮ 2013 ರ ಕಲಂ 20 ರಿಂದ 23 ರಡಿಯಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರ ನೀಡಲಾಗಿದೆ.

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987ರ ಕಲಂ 17(1)ರ ಅಡಿಯಲ್ಲಿ ಈ ಕೆಳಕಂಡ ಜಮೀನುಗಳಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿ, ಸಿಬ್ಬಂದಿ ಅಥವಾ ಆಯುಕ್ತರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರಾಮನಗರ ರವರ ಪರವಾಗಿ ಪ್ರತಿನಿಧಿಸುವವರನ್ನು ತಡೆಯುವುದಾಗಲಿ ಅಥವಾ ಅಡ್ಡಪಡಿಸುವುದಾಗಲಿ ಮಾಡತಕ್ಕದಲ್ಲವೆಂದು ಈ ಜಮೀನುಗಳಲ್ಲಿ ಆಸಕ್ತಿ ಹೊಂದಿರುವ ಎಲ್ಲಾ ವ್ಯಕ್ತಿಗಳಿಗೆ ಈ ಮೂಲಕ ಸೂಚಿಸಲಾಗಿದೆ.

ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವಿಧೇಯಕ ಜಾರಿಗೆ ತಂದು ಶಿವಕುಮಾರ್ ಹೆಸರು ಕೆಡಿಸಿಕೊಳ್ಳುವುದು ಬೇಡ: ಎಸ್ ಎಸ್ ವಿಶ್ವನಾಥ್

ಈ ಅಧಿಸೂಚನೆ ಪ್ರಕಟಿಸಲಾದ ನಂತರ ಆಯುಕ್ತರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಮನಗರ ಇವರ ಅನುಮತಿಯಿಲ್ಲದೇ ಸದರಿ ಜಮೀನುಗಳನ್ನು ವಿಲೇ ಮಾಡುವ, ಒಪ್ಪಂದ ಕ್ರಯ, ಕರಾರು, ಭೋಗ್ಯ ಅಡಮಾನ(ಲೀಸ್), ಅದಲು-ಬದಲು, ಭೂಪರಿವರ್ತನೆ, ವಗೈರೆ ಮಾಡುವಂತಿಲ್ಲ. ಸದರಿ ಜಮೀನುಗಳಲ್ಲಿ ಈ ಅಧಿಸೂಚನೆಯ ನಂತರ ಕಟ್ಟಡ ನಿರ್ಮಾಣ ಮತ್ತಿತರೆ ಅಭಿವೃದ್ಧಿ ಕೆಲಸಗಳನ್ನು ಮಾಡುವಂತಿಲ್ಲ. ಒಂದು ವೇಳೆ ಮಾಡಿದ್ದರೂ ಪರಿಹಾರ ಹಣ ನಿಗದಿ ಮಾಡುವಾಗ ಅಂತಹ ವ್ಯವಹಾರದ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:13 pm, Wed, 26 March 25

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ