AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gun Firing on Rikki Rai: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್: ಮೂಗು, ಕೈಗೆ ತಾಕಿದ ಗುಂಡು

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ರಾಮನಗರ ಜಿಲ್ಲೆಯ ಬಿಡದಿ ಬಳಿ ದುಷ್ಕರ್ಮಿ ಗುಂಡಿನ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ರಿಕ್ಕಿ ರೈ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿ ಗುಂಡು ಹಾರಿಸಿದ್ದು, ಮೂಗು ಮತ್ತು ಕೈಗೆ ಗಂಭೀರ ಗಾಯಗಳಾಗಿವೆ. ಸದ್ಯ ಬಿಡದಿ ಪೊಲೀಸರು ತನಿಖೆ ನಡೆಸಿದ್ದಾರೆ.

Gun Firing on Rikki Rai: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್: ಮೂಗು, ಕೈಗೆ ತಾಕಿದ ಗುಂಡು
ರಿಕ್ಕಿ ರೈ ಮೇಲೆ ಫೈರಿಂಗ್​
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on:Apr 19, 2025 | 9:21 AM

ರಾಮನಗರ, ಏಪ್ರಿಲ್​ 19: ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ (Rikki Rai) ಮೇಲೆ ದುಷ್ಕರ್ಮಿ ಫೈರಿಂಗ್ (Firing) ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್​ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಕಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2 ದಿನದ ಹಿಂದಷ್ಟೇ ರಷ್ಯಾದಿಂದ ವಾಪಸ್ ಆಗಿದ್ದ ರಿಕ್ಕಿ ರಿಯಲ್ ಎಸ್ಟೇಟ್ ಬಿಸಿನೆಸ್​​​ನಲ್ಲಿ ಆಕ್ಟಿವ್ ಆಗಿದ್ದರು. ನಿನ್ನೆ ರಾಮನಗರ ತಾಲೂಕಿನ ಬಿಡದಿ ಮನೆಯಿಂದ ತಡರಾತ್ರಿ ತನ್ನ ಫಾರ್ಚ್ಯೂನರ್​ ಕಾರಲ್ಲಿ ಬೆಂಗಳೂರಿಗೆ ಹೊರಟಿದ್ದರು. ಸುಮಾರು 11.30 ರ ಹೊತ್ತಿಗೆ ಮನೆಯಿಂದ ಹೊರಬರ್ತಿದ್ದಂತೆ ಗೇಟ್​​ ಬಳಿ ದುಷ್ಕರ್ಮಿ, ಎರಡು ಸುತ್ತಿನ ಫೈರಿಂಗ್​ ಮಾಡಿದ್ದಾನೆ. 70 ಎಂಎಂ ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ಮಾಡಲಾಗಿದೆ.

ಕಾರು ಡ್ರೈವ್​ ಮಾಡದೇ ಸೇಫ್​ ಆದ ರಿಕ್ಕಿ ರೈ

ರಿಕ್ಕಿ ರೈ ಪ್ರತಿ ಬಾರಿ ತಾವೇ ಕಾರು ಡ್ರೈವ್​ ಮಾಡುತ್ತಿದ್ದರು. ಹೀಗಾಗಿ ಡ್ರೈವರ್​​ ಸೀಟ್​ ಟಾರ್ಗೆಟ್​ ಮಾಡಿ ಅಟ್ಯಾಕ್​ ಮಾಡಲಾಗಿತ್ತು. ಆದರೆ ತಡರಾತ್ರಿ ಅದ್ಯಾವ ಕಾರಣವೋ ಗೊತ್ತಿಲ್ಲ ತನ್ನ ಬದಲು ಡ್ರೈವರ್​ಗೆ ಕಾರು ಚಲಾಯಿಸಲು ಹೇಳಿದ್ದ ರಿಕ್ಕಿ ರೈ, ಹಿಂಬದಿ ಸೀಟ್​ನಲ್ಲಿ ಗನ್​ ಮ್ಯಾನ್​ ಜತೆ ಕುಳಿತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಕಾರು ಚಾಲಕ ಬಸವರಾಜು ಮುಂದೆ ಬಗ್ಗಿದ್ದು, ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.​

ಇದನ್ನೂ ಓದಿ
Image
ಬೆಂಗಳೂರು: ಮಹಿಳೆ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಕಾಮುಕ
Image
ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದವ ಅರೆಸ್ಟ್
Image
ಎತ್ತ ಸಾಗುತ್ತಿದೆ ಬೆಂಗಳೂರು? ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ
Image
ಮದುವೆ, ಹನಿಮೂನ್‌ಗಾಗಿ ಕಂಪನಿಗೆ 10.6 ಕೋಟಿ ರೂ. ವಂಚಿಸಿದ ವ್ಯಕ್ತಿ

ಕಾಂಪೌಂಡ್ ರಂಧ್ರದಿಂದ ನಡೆದಿತ್ತು ಗುಂಡಿನ ದಾಳಿ

ಖಾಸಗಿಯವರಿಗೆ ಸೇರಿದ, ರಸ್ತೆ ಪಕ್ಕದ ಕಾಂಪೌಡ್ ಗ್ಯಾಪ್​ ಮಧ್ಯೆ ಬಚ್ಚಿಟ್ಟುಕೊಂಡು ದುಷ್ಕರ್ಮಿ ದಾಳಿ ಮಾಡಿದ್ದಾನೆ. ಅಂದರೆ ಕಾರು ಬೆಂಗಳೂರಿಗೆ ಹೊರಡ್ತಿರಬೇಕಾದರೆ ಬಲಗಡೆ ಭಾಗದಲ್ಲಿ ಒಂದು ಕಾಂಪೌಂಡ್​ ಗ್ಯಾಪ್​ ಮಧ್ಯೆ ಅವಿತುಕೊಂಡು, ಅದರ ಒಂದು ರಂಧ್ರದಿಂದಲೇ ಫೈರಿಂಗ್​ ಆಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲೋರ್ವ ವಿಕೃತ ಕಾಮುಕ: ಮಹಿಳೆಯರಿಗೆ ಖಾಸಗಿ ಅಂಗ ತೋರಿಸುವುದೇ ಈತನ ಕಾಯಕ

ಬಿಡದಿ ಮನೆಯಿಂದ KA 53 MC 7128 ನಂಬರ್​​​ ಕಾರಿನಲ್ಲಿ ಮೂವರು ತೆರಳುತ್ತಿದ್ದರು. ರಿಕ್ಕಿ ರೈ ಜತೆಗೆ ಗನ್​ ಮ್ಯಾನ್ ಇದ್ದು, ಚಾಲಕ ಕಾರು ಚಲಾಯಿಸ್ತಿದ್ದ. ಹಿಂಬದಿ ಸೀಟ್​ನಲ್ಲಿ ರಿಕ್ಕಿ ರೈ ಕುಳಿತಿದ್ದರು. ಪೊಲೀಸರ ಮಾಹಿತಿ ಪ್ರಕಾರ 70mm ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ನಡೆಸಲಾಗಿದೆ. ಒಂದು ಬಾರಿ ಮಾತ್ರ ಗುಂಡು ಹಾರಿಸಿದ್ದು, ಕಾರಿನ ಡೋರ್​ ಸೀಳಿ ಬಂದ ಬುಲೆಟ್, ಡ್ರೈವರ್ ಸೀಟ್ ಕುಶನ್ ಒಳಗೆ ನುಗ್ಗಿದೆ. ನಂತರ ಕಾರಿನ ಹಿಂಬದಿ ಸೀಟ್​ನ ಎಡಭಾಗದ ಡೋರ್​ಗೆ ತಾಗಿದೆ. ಈ ವೇಳೆ ಡ್ರೈವರ್ ಬೆನ್ನಿಗೆ ಹಾಗೂ ರಿಕ್ಕಿ ರೈ ಮೂಗು ಹಾಗೂ ಕೈಗೆ ಗಾಯವಾಗಿದೆ.

ರಿಕ್ಕಿ ರೈ ಹತ್ಯೆಗೆ ನಡೆದಿತ್ತಾ ಪೂರ್ವ ನಿಯೋಜಿತ ಸಂಚು?

ರಿಕ್ಕಿ ರೈ ಹತ್ಯೆಗೆ ಪೂರ್ವ ನಿಯೋಜಿತ ಸಂಚು ನಡೆದಿತ್ತಾ ಎಂಬ ಅನುಮಾನಗಳು ಹುಟ್ಟುಕೊಂಡಿವೆ. ಎರಡು ದಿನಗಳ ಹಿಂದೆ ರಷ್ಯಾದಿಂದ ಬಂದಿರುವ ರಿಕ್ಕಿ ರೈ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ. ಈ ವೇಳೆ ಹಿಂಬಾಲಿಸಿ ಕಾದು ಕೃತ್ಯ ಎಸಗಲಾಗಿದೆ. ರಿಕ್ಕಿ ಬರೊದನ್ನೇ ಕಾದು ಜಾಗವನ್ನು ಗುರುತಿಸಿಕೊಳ್ಳಲಾಗಿದೆ. ಕಾಂಪೌಂಡ್​ ಒಂದರ ಮಧ್ಯೆ ಅವಿತುಕೊಂಡು ದುಷ್ಕರ್ಮಿ ಶೂಟ್​ ಮಾಡಿದ್ದಾನೆ. ಹೀಗಾಗಿ ಮಿಡ್ ನೈಟ್​ನಲ್ಲಿ ರಿಕ್ಕಿ ರೈ ಹೋಗೋ ಬಗ್ಗೆ ಮಾಹಿತಿ ಕೊಟ್ಟವರು ಯಾರು? ಸಂಚಿನ ಹಿಂದಿರೋರು ಯಾರು? ಯಾವ ಕಾರಣಕ್ಕೆ ಈ ದುಷ್ಕೃತ್ಯ ಎಸಗಿದರು ಅನ್ನೋದು ಪತ್ತೆ ಹಚ್ಚಲಾಗುತ್ತಿದೆ. ಮೇಲ್ನೋಟಕ್ಕೆ ಪ್ರೋಪೆಷನಲ್ ಶಾರ್ಪ್ ಶೂಟರ್​ನಿಂದಲೇ ಅಟ್ಯಾಕ್ ನಡೆದಿದ್ದು, ಅದೃಷ್ಟವಶಾತ್ ರಿಕ್ಕಿ ರೈ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ರಾಯಚೂರು: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ

ಸದ್ಯ ಪರಿಶೀಲನೆ ವೇಳೆ ಪೊಲೀಸರಿಗೆ ದುಷ್ಕರ್ಮಿಯ ಕ್ಲ್ಯೂ ಸಿಕ್ಕಿದೆ ಎನ್ನಲಾಗುತ್ತಿದೆ. ಜತೆಗೆ ಎರಡು ಬುಲೆಟ್ ಹಾಗೂ ಒಂದು ಮೊಬೈಲ್ ಪತ್ತೆಯಾಗಿದ್ದು, ಕಿರಾತಕನ ಪತ್ತೆಗೆ ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:54 am, Sat, 19 April 25

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ