AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್

ಬಿಡದಿಯಲ್ಲಿ 20 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿದ್ದು, ಪಕ್ಕದ ಮನೆಯ ಅಸ್ಸಾಂ ಮೂಲದ ಯುವಕನಿಂದ ಕೃತ್ಯವೆಸಗಲಾಗಿದೆ. ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಯುವತಿಯನ್ನು ಆತ ತನ್ನ ಕೋಣೆಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಡದಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್
ಬಿಡದಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Jan 29, 2025 | 6:00 PM

Share

ರಾಮನಗರ, ಜನವರಿ 29: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 20 ವರ್ಷದ ಯುವತಿ (girl) ಮೇಲೆ ಯುವಕನೋರ್ವ ಅತ್ಯಾಚಾರವೆಸಗಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ಸದ್ಯ ಅಸ್ಸಾಂ ಮೂಲದ ಮಂಜೂರ್ ಆಲಂ ಎಂಬಾತನನ್ನು ಬಿಡದಿ ಪೊಲೀಸ್ ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಕ್ಕದ ಮನೆಯವನಿಂದಲ್ಲೇ ಕೃತ್ಯ

ನಿನ್ನೆ ಸಂಜೆ ವೇಳೆ ಸ್ನಾನಕ್ಕೆ ಬಾತ್​​ರೂಮ್​ಗೆ ತೆರಳಿದ್ದ ವೇಳೆ ಯುವತಿಯನ್ನ ತನ್ನ ರೂಮ್​ಗೆ ಹೊತ್ತೊಯ್ದು ಕೃತ್ಯವೆಸಗಲಾಗಿದೆ. ಅಸ್ಸಾಂ ಮೂಲದ ಮಂಜೂರ್ ಆಲಂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಯುವತಿ ಪಕ್ಕದ ಮನೆಯಲ್ಲಿ ವಾಸವಿದ್ದ. ಕೃತ್ಯದ ವೇಳೆ ಯುವತಿ ಕಿರುಚಾಡಿದ್ದಾಳೆ. ಯುವತಿ ಚೀರಾಟ ಕಂಡು ಸ್ಥಳೀಯರು ಓಡಿ ಬಂದಿದ್ದಾರೆ. ಅಷ್ಟರಲ್ಲಿ ಓಡಿ ಹೋಗುತ್ತಿದ್ದ ಆರೋಪಿಯನ್ನು ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ: 500 ರೂ ಕದ್ದಿದ್ದಾನೆಂದು ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಕಿಡ್ನ್ಯಾಪ್: ಕಂಬಕ್ಕೆ ಕಟ್ಟಿ ಥಳಿತ

ಇತ್ತ ಯುವಕನ ಕೋಣೆಯಿಂದ ರಕ್ತಸಿಕ್ತವಾಗಿ ಯುವತಿ ಹೊರಬಂದಿದ್ದಾಳೆ. ಜನನಾಂಗದಿಂದ ರಕ್ತ ಸುರಿಯುತ್ತಿರುವುದನ್ನು ಕಂಡು ಜನರು ಆತಂಕಗೊಂಡಿದ್ದಾರೆ. ಇಡೀ ರಸ್ತೆಯಲ್ಲಿ ರಕ್ತದ ಕಲೆ ಬಿದಿದ್ದು, ಯುವತಿ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ.

ವಾಕಿಂಗ್​ ಮಾಡುತ್ತಿದ್ದ ಮಹಿಳೆ ಮೇಲೆ ಮಾನಸಿಕ ಅಸ್ವಸ್ಥನಿಂದ ಹಲ್ಲೆ

ವಾಕಿಂಗ್​ ಮಾಡುತ್ತಿದ್ದ ಮಹಿಳೆ ಮೇಲೆ ಮಾನಸಿಕ ಅಸ್ವಸ್ಥನಿಂದ ಹಲ್ಲೆ ಮಾಡಿರುವಂತಹ ಘಟನೆ  ಬೆಂಗಳೂರಿನ ಸದಾಶಿವನಗರ ಠಾಣಾ ವ್ಯಾಪ್ತಿ 8ನೇ ಕ್ರಾಸ್​ನಲ್ಲಿ ನಡೆದಿದೆ. ವ್ಯಕ್ತಿಯನ್ನು ಹಿಡಿದು ಸದಾಶಿವನಗರ ಪೊಲೀಸರಿಗೆ ಸ್ಥಳೀಯರು ಒಪ್ಪಿಸಿದ್ದಾರೆ. ಸದ್ಯ ಆರೋಪಿ ಮಲ್ಲಿಕಾರ್ಜುನಗೆ ಕೋರ್ಟ್​​ ನ್ಯಾಯಾಂಗ ಬಂಧನ ವಿಧಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲೊಬ್ಬ ಲಕ್ಕಿ ಭಾಸ್ಕರ್​​: ಒಂದಲ್ಲ, ಎರಡಲ್ಲ 7 ಕೋಟಿ ರೂ ವಂಚನೆ

ನಿನ್ನೆ ಸಂಜೆ ಮನೆ ಮುಂಭಾಗ ಪಾರ್ಕ್​​ ಬಳಿ ಮಹಿಳೆ ವಾಕಿಂಗ್​​ ಮಾಡುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಬಿದ್ದಿದ್ದ ದೊಣ್ಣೆಯಿಂದ ಮಹಿಳೆ ತಲೆಗೆ ಬಲವಾಗಿ ಹೊಡೆಯಲಾಗಿದೆ. ಮಹಿಳೆ ಚೀರಾಟ ಕೇಳಿ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಕೂಡಾ ಇದೇ ರೀತಿ ಓರ್ವ ವ್ಯಕ್ತಿಗೆ ಮಲ್ಲಿಕಾರ್ಜುನ ಹೊಡೆದಿದ್ದ. ಆದರೆ ನ್ಯಾಯಾಲಯದಿಂದ ಮಲ್ಲಿಕಾರ್ಜುನ ಜಾಮೀನು ಪಡೆದಿದ್ದ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ