Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​​ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ: ಕೋರ್ಟ್​​ ತರಾಟೆ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭ

ರಾಮನಗರದ ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ನಡೆಸಿದ್ದಾರೆ. 110 ಎಕರೆಗೂ ಅಧಿಕ ಜಮೀನುಗಳ ಸರ್ವೆ ನಡೆದಿದ್ದು, 14 ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಲಾಗಿದೆ ಎಂಬ ಆರೋಪಗಳಿವೆ. ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಈ ಸರ್ವೆ ನಡೆಸಲಾಗಿದೆ.

ಹೆಚ್​​ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ: ಕೋರ್ಟ್​​ ತರಾಟೆ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭ
ಹೆಚ್​​ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ: ಕೋರ್ಟ್​​ ತರಾಟೆ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 17, 2025 | 6:56 PM

ರಾಮನಗರ, ಫೆಬ್ರವರಿ 17: ರಾಮನಗರ ತಾಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಭೂಮಿ ಒತ್ತುವರಿ ಆರೋಪ ವಿಚಾರವಾಗಿ ಇತ್ತೀಚೆಗೆ ಹೈಕೋರ್ಟ್ ತರಾಟೆ ತೆಗೆದುಕೊಂಡ ಬೆನ್ನಲ್ಲೇ ಇಂದು ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೆ ಕಾರ್ಯ ಮಾಡಲಾಗಿದೆ.

14 ಎಕರೆ ಭೂಮಿ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿದ್ದಾರೆಂದು ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು. ವರದಿ ನೀಡಲು ವಿಳಂಬ ಹಿನ್ನಲೆ ಕಂದಾಯ ಇಲಾಖೆ ಆಯುಕ್ತರಿಗೆ ಶೀಘ್ರ ವರದಿ ನೀಡುವಂತೆ ಹೈಕೋರ್ಟ್ ತಾಕೀತು ಮಾಡಿತ್ತು. ಹೈಕೋರ್ಟ್ ತಾಕೀತು ಮಾಡಿದ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಕಾರ್ಯ ಮಾಡಲಾಗಿದೆ. ಇನ್ನು ಹೆಚ್​ಡಿ ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ: ತನಿಖೆಗೆ ಎಸ್​ಐಟಿ ರಚನೆ

ಕೇತಗಾನಹಳ್ಳಿಯಲ್ಲಿ ರೆವಿನ್ಯೂ ಇನ್ಸ್​ಪೆಕ್ಟರ್ ಪ್ರಕಾಶ್ ಮತ್ತು ವಿಎ ವಿಶಾಲಾಕ್ಷಿ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಸರ್ವೆ ನಂಬರ್​ಗಳ ಜಮೀನು ಪರಿಶೀಲನೆ ಮಾಡಲಾಗಿದೆ. ಹೆಚ್​ಡಿ ಕುಮಾರಸ್ವಾಮಿ, ಸಹೋದರಿ ಅನುಸೂಯ ಮಂಜುನಾಥ ಮತ್ತು ಹೆಚ್.ಡಿ.ಕುಮಾರಸ್ವಾಮಿ ಸಂಬಂಧಿ ಡಿ.ಸಿ.ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಹೆಚ್ಚು ಜಮೀನನ್ನು ಕಂದಾಯ ಅಧಿಕಾರಿಗಳು ಸರ್ವೆ ಮಾಡಿದ್ದಾರೆ. ಬಳಿಕ ಡಿಸಿಗೆ ವರದಿ ನೀಡಲಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಡಿಸಿ ತಮ್ಮನಣ್ಣ ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್‌ಗಳಲ್ಲಿ 14 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಕುಮಾರಸ್ವಾಮಿಗೆ ಹಂದಿ ಎಂದ ಐಪಿಎಸ್ ಅಧಿಕಾರಿಯ ಮತ್ತಷ್ಟು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಜೆಡಿಎಸ್

ಇದರ ಸಮಗ್ರ ತನಿಖೆ ನಡೆಸಬೇಕು ಎಂದು ಕಂದಾಯ ಇಲಾಖೆಗೆ ಲೋಕಾಯುಕ್ತರು 2014ರಲ್ಲಿ ಆದೇಶಿಸಲಾಗಿತ್ತು. ಲೋಕಾಯುಕ್ತರ ಆದೇಶವನ್ನು ಇತ್ತೀಚೆಗೆ ಹೈಕೋರ್ಟ್‌ ಕೂಡ ಎತ್ತಿಹಿಡಿದಿತ್ತು. ಆದರೆ, ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ದೂರಿ ಹಿರೇಮಠ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಬಳಿಕ ಕ್ರಮ ಕೈಗೊಂಡಿರುವ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿನೆ ನೀಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:52 pm, Mon, 17 February 25