ಹರದನಹಳ್ಳಿ ನನ್ನ ಜನ್ಮಸ್ಥಳ, ಬಿಡದಿ ನನ್ನ ಕರ್ಮಸ್ಥಳ, ನನ್ನ ಧರ್ಮಸ್ಥಳ- ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ: ಡಿಕೆ ಬ್ರದರ್ಸ್​​ಗೆ ಕುಟುಕಿದ ಹೆಚ್ ಡಿ ಕುಮಾರಸ್ವಾಮಿ

ಕನಕಪುರ, ರಾಮನಗರ ಯಾರೊಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ. ಹರದನಹಳ್ಳಿ ಜನ್ಮಸ್ಥಳ, ಬಿಡದಿ ಕರ್ಮಸ್ಥಳ, ಇದುವೇ ನನ್ನಗೆ ಧರ್ಮಸ್ಥಳ ಎಂದು ಗುಡುಗಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಹರದನಹಳ್ಳಿ ನನ್ನ ಜನ್ಮಸ್ಥಳ, ಬಿಡದಿ ನನ್ನ ಕರ್ಮಸ್ಥಳ, ನನ್ನ ಧರ್ಮಸ್ಥಳ- ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ: ಡಿಕೆ ಬ್ರದರ್ಸ್​​ಗೆ ಕುಟುಕಿದ ಹೆಚ್ ಡಿ ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ ಮತ್ತು ಡಿ .ಕೆ. ಶಿವಕುಮಾರ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 04, 2022 | 10:33 AM

ರಾಮನಗರ: ರಾಮನಗರ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ಗಲಾಟೆಯ ಸಮ್ಮುಖದಲ್ಲಿ ಡಿಕೆ ಬ್ರದರ್ಸ್ ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಕುಟುಕಿದ್ದಾರೆ. ಕಲ್ಲು ಬಂಡೆಗಳನ್ನು ನುಂಗಿ, ಕೋಟೆ ಕಟ್ಟಿಕೊಂಡು ಮೆರೆಯುತ್ತಿರುವ ‘ಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ? ಕನಕಪುರ, ರಾಮನಗರ ಯಾರೊಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ. ಹರದನಹಳ್ಳಿ ಜನ್ಮಸ್ಥಳ, ಬಿಡದಿ ಕರ್ಮಸ್ಥಳ, ಇದುವೇ ನನ್ನಗೆ ಧರ್ಮಸ್ಥಳ ಎಂದು ಗುಡುಗಿದ್ದಾರೆ.

ಕಲ್ಲು ಬಂಡೆಗಳನ್ನು ನುಂಗಿದ ಡಿಸೈನ್ ವೀರರಿಗೆ ಈಗ ನೆನಪಿಗೆ ಬಂದಿದೆ. ಇದು ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ ಎಂದು ಡಿಕೆ ಸಹೋದರರ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಇದೇ ನೆಲವನ್ನ ಸಹೋದರರು ಹೇಗೆಲ್ಲಾ ನುಂಗಿದ್ದಾರೆಂದು ಗೊತ್ತು. ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ ಎಂದು ಡಿಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ಟ್ವೀಟ್ ವಾರ್ ಮಾಡಿದ್ದಾರೆ. ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಸಾಕು. ಜನ ಕೊಟ್ಟು ನೋಡ್ತಾರೆ. ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು ಎಂದು ಸರಣಿ ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್

Published On - 10:31 am, Tue, 4 January 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್